ಬ್ರೇಕಿಂಗ್ ನ್ಯೂಸ್
02-10-25 10:43 pm Mangalore Correspondent ಕರಾವಳಿ
ಮಂಗಳೂರು, ಅ.2: ಬೆನ್ನು ಬೆನ್ನಿಗೆ ಗೋವುಗಳನ್ನು ಹಟ್ಟಿಯಿಂದ ಕಳವುಗೈದ ಪ್ರಕರಣದ ಬೆನ್ನಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಪುದು ಗ್ರಾಮದ ಮಾರಿಪಳ್ಳ ನಿವಾಸಿ ಹಸನಬ್ಬ ಎಂಬಾತನ ಮನೆ ಮತ್ತು ಕಸಾಯಿ ಖಾನೆಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ನಿರಂತರ ಗೋ ಕಳವು, ಗೋಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಸನಬ್ಬ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಕ್ರ 123/2025 ಕಲಂ 303 ಬಿಎನ್ ಎಸ್ ಕಲಂ 4,7,12 ಗೋಸಂರಕ್ಷಣಾ ಕಾಯಿದೆ ಮತ್ತು 11(ಡಿ) ಗೋಹತ್ಯೆ ನಿಷೇಧ ಕಾಯಿದೆಯಡಿ ದಾಖಲಾದ ಪ್ರಕರಣದಲ್ಲಿ ದಸ್ತಗಿರಿ ಮಾಡಲಾಗಿತ್ತು. 2017ನೇ ಸಾಲಿನಲ್ಲಿ ಅಕ್ರ 65/2017 ಕಲಂ 379 ಐಪಿಸಿ ಮತ್ತು 4,5,11 ಗೋಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆ , 2008 ನೇ ಸಾಲಿನಲ್ಲಿ ಅಕ್ರ 88/2018 ಕಲಂ 379 ಐಪಿಸಿ ಮತ್ತು 4,5,11 ಗೋ ಸಂರಕ್ಷಣಾ ಕಾಯಿದೆ ಮತ್ತು 11(ಎಲ್) ಗೋಹತ್ಯೆ ನಿಷೇಧ ಕಾಯಿದೆಯಡಿ ಈತನ ವಿರುದ್ಧ ಪ್ರಕರಣ ದಾಖಲಾಗಿರುತ್ತದೆ.






ಅಲ್ಲದೆ, ಗೋ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ ಕಳವು ಮಾಡಿ ತಂದ ಜಾನುವಾರುಗಳನ್ನು ಯಾವುದೇ ಪರವಾನಿಗೆ ಇಲ್ಲದೇ ಮನೆಯಲ್ಲಿಯೇ ಕಸಾಯಿಖಾನೆ ನಿರ್ಮಾಣ ಮಾಡಿಕೊಂಡು ವಧೆ ಮಾಡಿ ಮಾಂಸ ಮಾಡುತ್ತಿರುವುದು ಕಂಡುಬಂದಿದೆ. ಮನೆಯಲ್ಲಿಯೇ ಅಕ್ರಮವಾಗಿ ನಿರ್ಮಾಣ ಮಾಡಿರುವ ಕಸಾಯಿಖಾನೆಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪ ವಿಭಾಗೀಯ ದಂಡಾಧಿಕಾರಿಗೆ ವರದಿ ಸಲ್ಲಿಸಲಾಗಿರುತ್ತದೆ.
ಅದರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ರ ಕಲಂ 8(4) 8(5) ರಡಿಯಲ್ಲಿ ಹಸನಬ್ಬ ವಶದಲ್ಲಿರುವ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾರಿಪಳ್ಳ ಪಾಡಿ ಎಂಬಲ್ಲಿರುವ ಮನೆನಂಬ್ರ 6-54 ಹಾಗೂ 6-54(1) ದಲ್ಲಿರುವ ಅಕ್ರಮ ಕಸಾಯಿ ಖಾನೆಯನ್ನು ಜಪ್ತಿ ಮಾಡಿ ಸರಕಾರದ ವಶಕ್ಕೆ ಪಡೆಯಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋಹತ್ಯೆ ಪ್ರಕರಣದಲ್ಲಿ ಮನೆ/ ಅಕ್ರಮ ಕಸಾಯಿಖಾನೆ ಮುಟ್ಟುಗೋಲು ಮಾಡಿರುವುದು ಇದು ಮೊದಲನೇ ಪ್ರಕರಣವಾಗಿದೆ.
Back-to-back cattle theft and slaughter cases have prompted strict enforcement of the Karnataka Prevention of Cow Slaughter Act in Dakshina Kannada. Bantwal Rural Police, along with revenue officials, seized the house and illegal slaughterhouse of Hasanabba, a resident of Maripalla in Pudu village.
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm