ಬ್ರೇಕಿಂಗ್ ನ್ಯೂಸ್
27-12-20 08:39 pm Mangaluru Correspondent ಕರಾವಳಿ
ಮಂಗಳೂರು, ಡಿ.27: ರಾಷ್ಟ್ರ ಮಟ್ಟದ ಮಾಜಿ ಕಬಡ್ಡಿ ಆಟಗಾರ, ಶಿಕ್ಷಣ ಪ್ರೇಮಿಯಾಗಿದ್ದ ರತ್ನಾಕರ ಪುತ್ರನ್ ಅಲ್ಪಕಾಲದ ಅಸೌಖ್ಯದ ಬಳಿಕ ನಿಧನರಾಗಿದ್ದಾರೆ.
ಮಂಗಳೂರಿನ ಬೊಕ್ಕಪಟ್ಣದ ದೇವಪ್ಪ ಕರ್ಕೇರ ಮತ್ತು ಸೇಸಮ್ಮ ಪುತ್ರನ್ ದಂಪತಿಯ ಪುತ್ರನಾಗಿ ಜನಿಸಿದ್ದ ರತ್ನಾಕರ ಪುತ್ರನ್ ಅವರು ಬೊಕ್ಕಪಟ್ಣದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಪಡೆದಿದ್ದರು. ಮಂಗಳೂರು ಡೊಂಗರಕೇರಿಯ ಕೆನರಾ ಮೈನ್ನಲ್ಲಿ ಪ್ರೌಢಶಿಕ್ಷಣ, ಸಂತ ಅಲೋಷಿಯಸ್ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣವನ್ನು ಪೂರೈಸಿದ್ದರು. ಕಬಡ್ಡಿಯಲ್ಲಿ ಸಾಕಷ್ಟು ಸಾಧನೆ ಮಾಡಿರುವ ರತ್ನಾಕರ ಪುತ್ರನ್ ರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ. ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟಗಳಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸುತ್ತಿದ್ದ ಪ್ರಮುಖ ಆಟಗಾರರಾಗಿದ್ದರು. ಕಬಡ್ಡಿಯ ಜೊತೆಗೆ ಉತ್ತಮ ಕ್ರಿಕೆಟ್ ಪಟುವೂ ಆಗಿದ್ದರು. ಆ ಸಮಯದಲ್ಲಿ ರಬ್ಬರ್ ಬಾಲ್ ಕ್ರಿಕೆಟ್ ಜನಪ್ರಿಯತೆಯನ್ನು ಗಳಿಸಿದ್ದು, ಕ್ರಿಕೆಟ್ನಲ್ಲೂ ಸಾಕಷ್ಟು ಪ್ರಸಿದ್ಧಿಯನ್ನು ಪಡೆದುಕೊಂಡಿದ್ದರು.
ತಾನು ಕಲಿತ ಬೊಕ್ಕಪಟ್ಣ ಶಾಲೆಯನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಪುಸ್ತಕ ವಿತರಣೆ ಇತ್ಯಾದಿಗಳನ್ನು ಮಾಡುತ್ತಿದ್ದರು. ಜೊತೆಗೆ ತಮ್ಮದೇ ಖರ್ಚಿನಲ್ಲಿ ಶಾಲೆಗೆ ಗೌರವ ಶಿಕ್ಷಕರನ್ನು ನೇಮಿಸಿ ಆ ಮೂಲಕ ಶಾಲೆಯ ಉಳಿವಿಗೆ ಪ್ರಯತ್ನಿಸಿದ್ದರು.
2014ರಲ್ಲಿ ಮಂಗಳೂರಿನಲ್ಲಿ 26 ಸೌತ್ ಝೋನ್ ಸೀನಿಯರ್ ನ್ಯಾಷನಲ್ ಹ್ಯಾಂಡ್ಬಾಲ್ ಚಾಂಪಿಯನ್ಶಿಪ್ ಆಯೋಜಿಸಿದ್ದರು. ಬೀಚ್ ಕಬಡ್ಡಿ ಟೂರ್ನ್ಮೆಂಟ್ ಎನ್ನುವ ವಿನೂತನ ಪರಿಕಲ್ಪನೆಯ ಕಬಡ್ಡಿ ಪಂದ್ಯಾಟವನ್ನೂ ಆಯೋಜನೆ ಮಾಡಿರುವುದು ರತ್ನಾಕರ ಪುತ್ರನ್ ಹೆಗ್ಗಳಿಕೆಯಾಗಿತ್ತು.
ರತ್ನಾಕರ ಪುತ್ರನ್ ನಾಟಕಗಳಲ್ಲಿ ಮನೋಜ್ಞವಾಗಿ ಅಭಿನಯಿಸುತ್ತಿದ್ದರು. ಅವರ ಆಕರ್ಷಕ ಮೈಕಟ್ಟು ಪಾತ್ರಗಳಿಗೆ ಜೀವವನ್ನು ತುಂಬುತ್ತಿತ್ತು. ಜೊತೆಗೆ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದರು. ತನ್ನ ತಾಯಿಯ ಹೆಸರಿನಲ್ಲಿ ಸೇಸ್ಮಾ ಮೆಡಿಕಲ್ ಸ್ಟೋರ್ ಮತ್ತು ವೈನ್ಸ್ಟೋರ್ ಹೊಂದಿದ್ದರು.
Mangalore Former National Kabbadi player, Artist and Businessman Rathnakar Puthran is no more.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm