ಬ್ರೇಕಿಂಗ್ ನ್ಯೂಸ್
07-10-25 11:14 pm Mangalore Correspondent ಕರಾವಳಿ
ಉಳ್ಳಾಲ, ಅ.7 : ಮರದ ಕೊಂಬೆಗೆ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಮಾನವನ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾದ ಘಟನೆ ಸಂಬಂಧಿಸಿ ಉಳ್ಳಾಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್ ಒಳಗಡೆ ಮಂಗಳವಾರ ಬೆಳಗ್ಗೆ ಅಸ್ಥಿಪಂಜರ ಪತ್ತೆಯಾಗಿತ್ತು.
ಕೇರಳ ಗಡಿಭಾಗದ ಮಂಜೇಶ್ವರ ಠಾಣಾ ವ್ತಾಪ್ತಿಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಬಿಹಾರ ಮೂಲದ ಅಪ್ರಾಪ್ತ ವಲಸೆ ಕಾರ್ಮಿಕನೊಬ್ಬ ನಾಪತ್ತೆಯಾಗಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಅದೇ ವ್ಯಕ್ತಿಯ ಶವ ಇದಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.




ಕುಂಜತ್ತೂರಿನ ಫರ್ನೀಚರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ರಾಹುಲ್ ಕುಮಾರ್ (17) ಎಂಬ ಸ್ಪುರದ್ರೂಪಿ ಅಪ್ರಾಪ್ತ ನಾಪತ್ತೆಯಾಗಿದ್ದ ಬಗ್ಗೆ ಆಗಸ್ಟ್ 7 ರಂದು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಕ್ಷಯ ಫಾರ್ಮ್ ಒಳಗಡೆಯ ಮರದ ಕೆಳಗಡೆ ಮಾನವನ ಅಸ್ಥಿ, ತಲೆಬುರುಡೆ ಪತ್ತೆಯಾಗಿದ್ದು ಇದು ಆತನದ್ದೇ ಇರಬಹುದೆಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಹಸಿರು ಬರ್ಮುಡ ಚಡ್ಡಿ, ಹಸಿರು ಟೀ ಶರ್ಟ್ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಗಂಡಸಿನ ದೇಹದ ಅವಶೇಷಗಳಂತೆ ಕಾಣುತ್ತಿತ್ತು. ಬರ್ಮುಡ ಚಡ್ಡಿಯಲ್ಲಿ ಮೊಬೈಲ್ ಫೋನ್ ಕೂಡ ಪತ್ತೆಯಾಗಿತ್ತು.
ಅಸ್ಥಿಪಂಜರದ ಜೊತೆ ದೊರೆತ ಮೊಬೈಲ್ ಸಿಮ್ ಕಾರ್ಡ್ ಸಂಖ್ಯೆ ಮತ್ತು ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ರಾಹುಲ್ ಮೊಬೈಲ್ ಸಂಖ್ಯೆ ಪರಸ್ಪರ ತಾಳೆಯಾಗಿದ್ದು ಕಳೇಬರ ರಾಹುಲ್ ನದ್ದಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಆದರೆ ಎಫ್ ಎಸ್ಎಲ್ ವರದಿ ಬಂದ ಬಳಿಕವೇ ಮೃತರ ಅಧಿಕೃತ ಗುರುತು ಪತ್ತೆಯಾಗಲಿದೆ.
ಉಳ್ಳಾಲ ಪೊಲೀಸರು ಮತ್ತು ಎಫ್ಎಸ್ಎಲ್ ತಜ್ಞರು ಬುರುಡೆ, ಎಲುಬುಗಳು ಮತ್ತು ಇತರ ಅವಶೇಷಗಳನ್ನ ಸಂಸ್ಕರಿಸಿ ಪರಿಶೀಲನೆಗೆ ಕಳುಹಿಸಿದ್ದಾರೆ. ಅಕ್ಷಯ ಫಾರ್ಮ್ ಸುತ್ತಲೂ ಆವರಣ ಗೋಡೆಯಿದ್ದು ಇದರ ಒಳಗಡೆ ಕುಂಜತ್ತೂರಿನ ವಲಸೆ ಕಾರ್ಮಿಕ ಬಂದಿದ್ದು ಹೇಗೆ? ಕೊಲೆ ಮಾಡಿ ನೇತು ಹಾಕಿದ್ದಾರೆಯೇ ಇತ್ಯಾದಿ ಪ್ರಶ್ನೆಗಳೂ ಎದುರಾಗಿದ್ದು ಉಳ್ಳಾಲ ಮತ್ತು ಮಂಜೇಶ್ವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Police in Ullal have launched an investigation after skeletal remains, including a human skull, were discovered at Akshaya Farm in Talapadi Devipura on Tuesday morning. The body was found hanging from a tree, tied with a rope, and partially decomposed. Clothing items—a green t-shirt and green shorts—along with a mobile phone were recovered from the site.
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm