ಬ್ರೇಕಿಂಗ್ ನ್ಯೂಸ್
12-10-25 05:02 pm Mangalore Correspondent ಕರಾವಳಿ
ಮಂಗಳೂರು, ಅ.12 : ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಖಿ, ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ವೇಳೆ ಮಹಿಳಾ ಪತ್ರಕರ್ತರ ಪಾಲ್ಗೊಳ್ಳುವಿಕೆಗೆ ನಿರ್ಬಂಧ ಹೇರಿರುವುದು ಆಘಾತಕಾರಿ ಎಂದು ಕಾಂಗ್ರೆಸ್ ಮುಖಂಡ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.
ಭಾರತೀಯರಾದ ನಾವು ಮಹಿಳೆಯರನ್ನು ಪೂಜನೀಯ ಭಾವನೆಯಿಂದ ನೋಡುತ್ತಿದ್ದೇವೆ. ಪ್ರತೀ ಕ್ಷೇತ್ರದಲ್ಲೂ ಮಹಿಳೆಯರಿಗೆ ಸಮಾನ ಅವಕಾಶಗಳಿವೆ. ಆದರೆ ತಾಲಿಬಾನ್ ಸರ್ಕಾರದ ಸಚಿವನೊಬ್ಬ ಭಾರತದಲ್ಲೂ ತಾಲಿಬಾನ್ ನೀತಿ ಅನುಸರಿಸಿದ್ದು ಖಂಡನೀಯ. ಮಹಿಳಾ ಸ್ವಾತಂತ್ರ್ಯ ಬಗ್ಗೆ ಮಾತನಾಡುವ ನಮ್ಮಪ್ರಧಾನಿ ನರೇಂದ್ರ ಮೋದಿಯವರು ಈಗ ಮಹಿಳೆಯರಿಗೆ ಅಗೌರವ ತೋರಿ ತಾರತಮ್ಯ ಎಸಗಿದ್ದರೂ ಮೌನ ವಹಿಸಿರುವುದು ಅನುಮಾನ ಹುಟ್ಟಿಸುವಂತಿದೆ. ಈ ಹಿಂದೆ ಕಾಂಗ್ರೆಸ್ ನೇತೃತ್ವದ ಸರಕಾರವನ್ನು ತಾಲಿಬಾನಿ ಮನಸ್ಥಿತಿಯ ಸರ್ಕಾರ ಎಂದು ಟೀಕಿಸುತ್ತಿದ್ದ ಬಿಜೆಪಿಯವರು, ಈಗ ಇವರ ಮನಸ್ಥಿತಿ ಏನು ಎಂಬುದು ಜನತೆಗೆ ತಿಳಿಯುವಂತಾಗಿದೆ.
ಅಫ್ಘಾನ್ ಸ್ತ್ರೀಯರಿಗೆ ಶಿಕ್ಷಣ, ಉದ್ಯೋಗದಿಂದ ವಂಚಿತರನ್ನಾಗಿಸಿರುವ ತಾಲಿಬಾನ್ ಆಡಳಿತವು ತನ್ನ ಕೆಟ್ಟ ಮನಃಸ್ಥಿತಿಯನ್ನು ಭಾರತದಲ್ಲೂ ಪ್ರದರ್ಶಿಸಿರುವ ಬಗ್ಗೆ ಕೂಡಲೇ ಪ್ರಧಾನಿಯವರು ಮೌನ ಮುರಿಯಲಿ. ಸಂವಿಧಾನದ ನಾಲ್ಕನೇ ಅಂಗ ಎನ್ನುವ ಮಾಧ್ಯಮ ಪ್ರತಿನಿಧಿಗಳಿಗೆ ಇಂತಹ ಪರಿಸ್ಥಿತಿಯಾದರೆ ಮುಂದಿನ ದಿನಗಳಲ್ಲಿ ನಾವು ಯಾವ ಸ್ಥಿತಿಗೆ ತಲುಪಬಹುದು? ಈ ಬಗ್ಗೆ ಪ್ರಧಾನಿ ಮೋದಿಯವರು ಉತ್ತರಿಸಲಿ ಎಂದು ಪದ್ಮರಾಜ್ ಪೂಜಾರಿ ಪ್ರಶ್ನೆ ಮಾಡಿದ್ದಾರೆ.
During his visit to India, Afghan Foreign Minister Amir Khan Muttaqi allegedly restricted the participation of women journalists at a press conference in New Delhi following bilateral talks with India’s External Affairs Minister S. Jaishankar.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm