ಬ್ರೇಕಿಂಗ್ ನ್ಯೂಸ್
14-10-25 10:36 pm Mangalore Correspondent ಕರಾವಳಿ
ಮಂಗಳೂರು, ಅ.14 : ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಸರಕಾರಿ ಮಾನ್ಯತೆ ಹೊಂದಿದ ರಾಜ್ಯ ಕಂಬಳ ಅಸೋಸಿಯೇಷನ್ ಗೆ ಮೊದಲ ಜಯ ಸಿಕ್ಕಂತಾಗಿದೆ.
ಈ ಕುರಿತು ಮಾಧ್ಯಮದವರಿಗೆ ಮಾಹಿತಿ ನೀಡಿದ ಕಂಬಳ ಅಸೋಸಿಯೇಶನ್ ಅಧ್ಯಕ್ಷ ಬೆಳಪು ಡಾ.ದೇವಿಪ್ರಸಾದ್ ಶೆಟ್ಟಿ, ಇದು ನಮ್ಮ ಹೋರಾಟಕ್ಕೆ ಸಂದ ಜಯ. ಕೋಣಗಳ ಸಾಗಾಟದ ವೇಳೆ ಕೋಣಗಳಿಗೆ ಹಿಂಸೆಯಾಗುತ್ತದೆ ಎಂದು ಪೇಟಾ ಪರ ವಕೀಲರು ನ್ಯಾಯಾಲಯದಲ್ಲಿ ವಾದಿಸಿದ್ದರು. ಕರ್ನಾಟಕ ಸರಕಾರದ ಅಡ್ವಕೇಟ್ ಜನರಲ್ ಶಶಿಕಕಿರಣ್ ಶೆಟ್ಟಿ, ವಿನೋದ್ ಕುಮಾರ್ ಮಧೂರು, ಧನಂಜಯ್ ಕುಮಾರ್ ದೊಡ್ಡಗುತ್ತು ಕಂಬಳದ ಪರ ವಾದ ಮಂಡಿಸಿದ್ದರು.
ಕರಾವಳಿ ಜಿಲ್ಲೆಯ ಕಂಬಳವು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುತ್ತದೆ. ಸರಕಾರ ಕೂಡ ಇದಕ್ಕೆ ಮಾನ್ಯತೆ ನೀಡಿದೆ ಎಂದು ಕೋರ್ಟ್ ನಮ್ಮ ಬೇಡಿಕೆಯನ್ನು ಪುರಸ್ಕರಿಸಿದೆ. ಆಯಾ ಕಂಬಳಗಳ ಸಮಿತಿಯವರ ಹೋರಾಟ ಫಲ ನೀಡಿದೆ. ಆದರೆ, ಪಿಲಿಕುಳ ಕಂಬಳ ನಡೆಸುವ ಕುರಿತು ವಿಚಾರಣೆಯನ್ನು ಮುಂದೂಡಲಾಗಿದೆ ಎಂದು ಮಾಹಿತಿ ನೀಡಿದರು.
ಕಂಬಳ ಅಸೋಸಿಯೇಷನ್ ಕೋಶಾಧಿಕಾರಿ ಮುಚ್ಚೂರು ಲೋಕೇಶ್ ಶೆಟ್ಟಿ ಮಾಹಿತಿ ನೀಡಿ, ಇದೊಂದು ಐತಿಹಾಸಿಕ ದಿನ. ಕಂಬಳ ಅಸೋಸಿಯೇಶನ್ ಗೆ ಸಂದ ಜಯ ಎಂದು ಬಣ್ಣಿಸಿದ್ದು, ಸರಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.
The Karnataka High Court has granted permission to conduct Kambala events in Mysuru, Bengaluru, and Shivamogga, marking a major victory for the state’s traditional buffalo race and the Karnataka Kambala Association. The events had been halted following objections raised by PETA, which alleged cruelty to animals.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm