ಬ್ರೇಕಿಂಗ್ ನ್ಯೂಸ್
16-10-25 01:11 pm Mangalore Correspondent ಕರಾವಳಿ
ಮಂಗಳೂರು, ಅ.16 : ತೆಂಕುತಿಟ್ಟಿನ ಪ್ರಸಿದ್ಧ ಭಾಗವತ, ಅಪ್ರತಿಮ ಕಂಠಸಿರಿಯ ಮೂಲಕ ಗಾನಕೋಗಿಲೆ, 'ರಸರಾಗ ಚಕ್ರವರ್ತಿ' ಎಂದೇ ಬಿರುದು ಪಡೆದಿದ್ದ ದಿನೇಶ್ ಅಮ್ಮಣ್ಣಾಯ (68) ಇನ್ನಿಲ್ಲ. ಗುರುವಾರ ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಕನ್ಯಾಡಿಯ ತಮ್ಮ ಪುತ್ರಿಯ ಮನೆಯಲ್ಲಿ ನಿಧನ ಹೊಂದಿದರು.
ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿದ್ದ ದಿನೇಶ್ ಅಮ್ಮಣ್ಣಾಯರು ಪೌರಾಣಿಕ ಮತ್ತು ತುಳು ಸಾಮಾಜಿಕ ಪ್ರಸಂಗಗಳಲ್ಲಿ ತಮ್ಮದೇ ಛಾಪು ಮೂಡಿಸಿ, ಅಮ್ಮಣ್ಣಾಯ ಶೈಲಿಯನ್ನು ಹುಟ್ಟುಹಾಕಿದ್ದರು. ತೆಂಕುತಿಟ್ಟು ಯಕ್ಷಗಾನ ಪರಂಪರೆಯಲ್ಲಿ ತುಳು ಯಕ್ಷಗಾನವನ್ನು ಉತ್ತುಂಗಕ್ಕೇರಿಸಿದ ದಾಮೋದರ ಮಂಡೆಚ್ಚ ಅವರ ಗರಡಿಯಲ್ಲಿ ಪಳಗಿದ ದಿನೇಶ್ ಅಮ್ಮಣ್ಣಾಯರು ಪುತ್ತೂರು ಮೇಳದಲ್ಲಿ ಚಂಡೆ ಮತ್ತು ಮದ್ದಳೆ ವಾದಕರಾಗಿ ವೃತ್ತಿ ಜೀವನ ಆರಂಭಿಸಿದ್ದು ವಿಶೇಷ. ಬಳಿಕ ತನ್ನ ಕಂಚಿನ ಕಂಠದಿಂದಾಗಿ ದಾಮೋದರ ಮಂಡೆಚ್ಚ ಅವರ ತರಬೇತಿಯಲ್ಲಿ ಭಾಗವತಿಕೆಯತ್ತ ಹೊರಳಿದ್ದರು. 90ರ ದಶಕದಲ್ಲಿ ತುಳು ಯಕ್ಷಗಾನದಲ್ಲಿ ಅಮ್ಮಣ್ಣಾಯರ ಭಾಗವತಿಕೆ ಜನಮನ ಸೆಳೆದು ಚಿರಸ್ಥಾಯಿ ಎಂಬಂತಾಗಿತ್ತು.
ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅರಸಿನಮಕ್ಕಿಯ ಹೊಸ್ತೋಟ ಪಾಳ್ಯದ ನಿವಾಸಿಯಾಗಿದ್ದ ಅವರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಕರ್ನಾಟಕ ಮೇಳ, ಎಡನೀರು ಮೇಳ, ಕದ್ರಿ ಮೇಳ ಹೀಗೆ ಹಲವಾರು ತೆಂಕುತಿಟ್ಟಿನ ಮೇಳಗಳಲ್ಲಿ ಭಾಗವತರಾಗಿ ಜನಪ್ರಿಯರಾಗಿದ್ದ ಅವರು ಭಾವಪ್ರಧಾನ ಪ್ರಸಂಗಗಳ ಗಾಯನಕ್ಕೆ ಹೆಸರುವಾಸಿಯಾಗಿದ್ದರು. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.
Famed Thenkuthittu Yakshagana Bhagavatha and celebrated vocalist Dinesh Ammannaya (68) passed away on Thursday morning at his daughter’s residence in Kanyadi, Belthangady taluk. Known for his golden voice and unique ragas, Ammannaya carved a distinct identity in Tulu Yakshagana, developing what became known as the “Ammannaya style.” Trained under the legendary Damodara Mandecha, he began his career as a percussionist before becoming one of the most admired Bhagavathas across Karnataka, Edaniru, and Kadri troupes.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm