ಬ್ರೇಕಿಂಗ್ ನ್ಯೂಸ್
19-10-25 07:58 pm Mangalore Correspondent ಕರಾವಳಿ
ಮಂಗಳೂರು, ಅ.19 : ಇತ್ತೀಚೆಗೆ ತನ್ನ ಸಾವಿಗೆ ಹನಿಟ್ರ್ಯಾಪ್ ನಡೆಸಿದ್ದ ಯುವತಿ ಸೇರಿ ನಾಲ್ವರು ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಲೇಡಿಗೋಷನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಆಚಾರ್ಯ ಎಂಬ ಯುವಕ ಕಾರ್ಕಳದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಡೆತ್ ನೋಟ್ ನಲ್ಲಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನರ್ಸ್ ಆಗಿರುವ ನಿರೀಕ್ಷಾ ಎಂಬ ಯುವತಿ ಬಗ್ಗೆಯೇ ಆರೋಪ ಹೊರಿಸಲಾಗಿತ್ತು. ಆಕೆಯನ್ನು ಈಗ ನಗರದ ಕದ್ರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಡೆತ್ ನೋಟ್ ನಲ್ಲಿ ನಿರೀಕ್ಷಾ ತನ್ನ ಜೊತೆಗೆ ರೂಮಿನಲ್ಲಿದ್ದ ಬೇರೆ ಹುಡುಗಿಯರ ಫೋಟೊ, ವಿಡಿಯೋಗಳನ್ನೂ ಗುಪ್ತ ಕ್ಯಾಮರಾದಲ್ಲಿ ತೆಗೆದಿಟ್ಟು ಬ್ಲಾಕ್ಮೇಲ್ ಮಾಡುತ್ತಿದ್ದಾಳೆ ಎಂದೂ ಬರೆಯಲಾಗಿತ್ತು. ಅದರಲ್ಲಿ ಉಲ್ಲೇಖಿಸಲಾಗಿದ್ದ ಯುವತಿಯೊಬ್ಬಳು ಕದ್ರಿ ಠಾಣೆಯಲ್ಲಿ ದೂರು ನೀಡಿದ್ದು ತನ್ನ ಬಟ್ಟೆ ತೆಗೆಯುವ ವಿಡಿಯೋವನ್ನು ಚಿತ್ರೀಕರಿಸಿ ಜಾಲತಾಣದಲ್ಲಿ ಹಂಚಿದ್ದಾಳೆಂದು ನಿರೀಕ್ಷಾ ವಿರುದ್ಧ ದೂರು ನೀಡಿದ್ದಳು. ಪ್ರಕರಣ ಸಂಬಂಧಿಸಿ ಕದ್ರಿ ಪೊಲೀಸರು ಆರೋಪಿ ಯುವತಿಯನ್ನು ಬಂಧಿಸಿದ್ದು ಕೋರ್ಟಿಗೆ ಹಾಜರುಪಡಿಸಿ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.


ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಇದೇ ವೇಳೆ, ಹನಿಟ್ರ್ಯಾಪ್ ಪ್ರಕರಣದಲ್ಲಿ ಅಭಿಷೇಕ್ ಸಾವಿಗೆ ಕಾರಣವಾದ ನಿರೀಕ್ಷಾ, ರಾಕೇಶ್, ತಸ್ಲೀಂ ಎಂಬವರನ್ನು ಒಳಗೊಂಡ ತಂಡವನ್ನು ಬಂಧಿಸಬೇಕೆಂದು ಜಾಲತಾಣದಲ್ಲಿ ಆಗ್ರಹ ಕೇಳಿಬರುತ್ತಿದೆ. ವಿಶ್ವಕರ್ಮ ಸಮಾಜದ ಮುಖಂಡರು ರಾಜ್ಯ ಗೃಹ ಸಚಿವರಿಗೂ ಮನವಿ ನೀಡಿದ್ದಾರೆ. ಅಲ್ಲದೆ, ಉಡುಪಿ ಎಸ್ಪಿ ಅವರನ್ನೂ ಭೇಟಿಯಾಗಿ ಮನವಿ ನೀಡಿದ್ದಾರೆ.
ಉಡುಪಿ ಎಸ್ಪಿ ಹರಿರಾಮ್ ಶಂಕರ್ ಸ್ಪಷ್ಟನೆ ನೀಡಿದ್ದು, ಸೂಸೈಡ್ ನೋಟ್ನಲ್ಲಿರುವ ವಿಷಯಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುವುದು. ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ, ಆತ್ಮಹತ್ಯೆ ಹಿಂದಿರುವ ನೈಜತೆಯನ್ನು ಪತ್ತೆಹಚ್ಚುವತ್ತ ಗಮನಹರಿಸಲಾಗಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರುವುದಿಲ್ಲ, ಆತ್ಮಹತ್ಯೆಗೆ ಪ್ರಚೋದನೆ ನೀಡಿದವರು ಯಾರೇ ಇದ್ದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಕಾರ್ಕಳ ಪೊಲೀಸರು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ನಾಲ್ವರ ಪೈಕಿ ಈಗಾಗಲೇ ಮೂವರನ್ನು ವಿಚಾರಣೆ ನಡೆಸಲಾಗಿದ್ದು, ಅವರ ಮೊಬೈಲ್ ಫೋನ್ ವಶಪಡಿಸಿ ತಾಂತ್ರಿಕ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ಅಭಿಷೇಕ್ನ ಫೋನ್ ಕೂಡ ವಶಕ್ಕೆ ಪಡೆದಿದ್ದು, ಅದರಲ್ಲಿರುವ ಫೋಟೋಗಳು, ವಿಡಿಯೋಗಳು ಮತ್ತು ಸಂದೇಶಗಳನ್ನು ಸಾಕ್ಷ್ಯವಾಗಿ ದಾಖಲಿಸಿಕೊಳ್ಳಲಾಗಿದೆ. ಹೆಚ್ಚಿನ ವೈಜ್ಞಾನಿಕ ಸಾಕ್ಷ್ಯಗಳಿಗಾಗಿ ಫೋನ್ ಅನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.
In connection with the death of Abhishek Acharya, a staff member of Lady Goschen Hospital who died by suicide in Karkala, police have arrested Nireeksha, a nurse named in his death note. The note alleged that Nireeksha secretly recorded photos and videos of other women in her room and blackmailed them.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm