ಬ್ರೇಕಿಂಗ್ ನ್ಯೂಸ್
23-10-25 07:35 pm Mangalore Correspondent ಕರಾವಳಿ
ಮಂಗಳೂರು, ಅ.23 : ಇದೇ ಮೊದಲ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾವಳಿ "ಮಂಗಳೂರು ಇಂಡಿಯಾ ಇಂಟರ್‍ನ್ಯಾಷನಲ್ ಚಾಲೆಂಜ್ 2025" ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 27 ರಂದು ನಗರದ ಉರ್ವಾ ಒಳಾಂಗಣ ಕ್ರೀಡಾಂಗಣದಲ್ಲಿ ಚಾಲನೆ ನೀಡಲಿದ್ದಾರೆ.
ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅಧ್ಯಕ್ಷತೆಯಲ್ಲಿ ಕ್ರೀಡಾಕೂಟದ ಪೂರ್ವ ಸಿದ್ಧತಾ ಸಭೆ ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಕ್ರೀಡಾಕೂಟ ನಡೆಯುತ್ತಿದ್ದು, ಯಾವುದೇ ಲೋಪವಾಗದಂತೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಏರ್ಪಡಿಸಬೇಕು. ಜಿಲ್ಲೆಯ ಕ್ರೀಡಾ ಮೂಲ ಸೌಲಭ್ಯಗಳು ಜಾಗತಿಕ ಮಟ್ಟದಲ್ಲಿ ಗುರುತಿಸುವಂತಾಗಬೇಕು ಎಂದು ಹೇಳಿದರು. ಕ್ರೀಡಾಕೂಟದಲ್ಲಿ 14 ದೇಶಗಳಿಂದ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಅವರಿಗೆ ಕ್ರೀಡಾ ಸೌಲಭ್ಯಗಳು, ವಸತಿ ವ್ಯವಸ್ಥೆಗಳನ್ನು ಉತ್ತಮ ರೀತಿಯಲ್ಲಿ ಒದಗಿಸಬೇಕು. ಕ್ರೀಡಾಂಗಣದ ಒಳಗೆ ಎಲ್ಲಾ ತಾಂತ್ರಿಕ ಅಂಶಗಳನ್ನು ಅಚ್ಚುಕಟ್ಟುಗೊಳಿಸಬೇಕು. ಕ್ರೀಡಾಪಟುಗಳು ಮತ್ತು ತೀರ್ಪುಗಾರರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಸೂಚಿಸಿದರು.
ಕ್ರೀಡಾಕೂಟಕ್ಕೆ ಬರುವ ವಾಹನಗಳಿಗೆ ಉರ್ವಾ ಮಾರ್ಕೆಟ್ ಕ್ರೀಡಾಂಗಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಕ್ರೀಡಾಂಗಣಕ್ಕೆ ಹೋಗಿ ಬರುವ ರಸ್ತೆ ಲೇಡಿಹಿಲ್‍ನಿಂದ ಉರ್ವಾ ಮಾರ್ಕೆಟ್ ವರೆಗೆ ಸೌಂದರ್ಯೀಕರಣಗೊಳಿಸಬೇಕು. ತ್ಯಾಜ್ಯ ನಿರ್ವಹಣೆಯನ್ನು ಉತ್ತಮ ರೀತಿಯಲ್ಲಿ ಮಾಡಬೇಕು ಎಂದು ಮಹಾನಗರ ಪಾಲಿಕೆಗೆ ಸೂಚಿಸಿದರು.
ಕ್ರೀಡಾಕೂಟದಲ್ಲಿ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಬಿಂಬಿಸುವ ಪ್ರದರ್ಶನ ಹಾಗೂ ಮಾಹಿತಿ ಕೇಂದ್ರ ಸಿದ್ಧಗೊಳಿಸಬೇಕು. ಕ್ರೀಡಾಪಟುಗಳು ಪ್ರವಾಸಿ ತಾಣಗಳಿಗೆ ಹೋಗಲಿಚ್ಛಿಸಿದ್ದಲ್ಲಿ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿಗಳು ಪ್ರವಾಸೋದ್ಯಮ ಇಲಾಖೆಗೆ ಸೂಚಿಸಿದರು. ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಆರೋಗ್ಯ ಕೇಂದ್ರವನ್ನು ಕ್ರೀಡಾಂಗಣದಲ್ಲಿ ಸಜ್ಜುಗೊಳಿಸಬೇಕು. ಕ್ರೀಡಾ ವೈದ್ಯಕೀಯ ತಜ್ಞರನ್ನು ನಿಯೋಜಿಸುವಂತೆ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಹಾಗೂ ಬ್ಯಾಡ್ಮಿಂಟನ್ ಅಸೋಸಿಯೇಷನ್ ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಅವರು ತಿಳಿಸಿದರು.
ಸಭೆಯಲ್ಲಿ ಉಪ ಪೋಲಿಸ್ ಆಯುಕ್ತ ಮಿಥುನ್ ಹೆಚ್.ಎನ್, ಸ್ಮಾರ್ಟ್ ಸಿಟಿ ಎಂ.ಡಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
For the first time, Mangaluru will host an international-level badminton tournament, titled “Mangalore India International Challenge 2025.” The prestigious event will be inaugurated by Chief Minister Siddaramaiah on October 27 at the Urwa Indoor Stadium.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
23-10-25 06:53 pm
Mangalore Correspondent
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm