ಬ್ರೇಕಿಂಗ್ ನ್ಯೂಸ್
26-10-25 02:12 pm Mangalore Correspondent ಕರಾವಳಿ
ಪುತ್ತೂರು, ಅ.26 : ಪುತ್ತೂರು ತಾಲೂಕಿನ ಇರ್ದೆ ಬಳಿಯ ಉಪ್ಪಳಿಗೆಯಲ್ಲಿ ನಡೆದ ದೀಪಾವಳಿ ಕಾರ್ಯಕ್ರಮದಲ್ಲಿ ಹಿಂದು- ಮುಸ್ಲಿಂ ಮಹಿಳೆಯರಿಗೆ ಅವಮಾನಿಸಿ ದ್ವೇಷ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಆರೆಸ್ಸೆಸ್ ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಈಶ್ವರಿ ಪದ್ಮುಂಜ ಎಂಬವರು ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಎಫ್ಐಆರ್ ದಾಖಲಾಗಿದೆ.
ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ ಮಾಡಿದ್ದಾರೆ ಎಂದು ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ತಿಳಿಸಿದ್ದಾರೆ.
ಭಾಷಣದಲ್ಲಿ ಪ್ರಭಾಕರ ಭಟ್ ಅವರು, ಹಿಂದುಗಳು ಕನಿಷ್ಠ ಮೂವರು ಮಕ್ಕಳನ್ನು ಮಾಡಬೇಕು. ಇಲ್ಲದಿದ್ದರೆ ಮುಂದಕ್ಕೆ ತೊಂದರೆ ಇದೆ. ಮುಸ್ಲಿಂ ಮಹಿಳೆಯರು ನಾಯಿ ತರ ಮಕ್ಕಳನ್ನು ಹೆರುತ್ತಲೇ ಇರುತ್ತಾರೆ. ಇದನ್ನು ನಾವು ಲೆಕ್ಕ ಇಡುವುದಿಲ್ಲ. ಆದರೆ ಈ ರೀತಿ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಧಾರ್ಮಿಕ ಅಸಮಾನತೆಗೆ ಕಾರಣವಾಗಲಿದೆ. ಅಲ್ಲದೆ, ಚಿತ್ತಾಪುರದಲ್ಲಿ ನವೆಂಬರ್ 2ರಂದು ಪಥ ಸಂಚಲನ ನಡೆದೇ ನಡೆಯುತ್ತದೆ. ಯಾರೋ ಹೊಡೆದು ಬಡಿದು ನಿಲ್ಲಿಸೋಕೆ ಆಗುತ್ತಾ. ದೇಶದ ಯಾವುದೇ ಕಡೆ ತೊಂದರೆಯಾದರೆ ಆರೆಸ್ಸೆಸ್ ಸಹಾಯಕ್ಕೆ ಬರೋದು. ಅದು ಕಾಂಗ್ರೆಸಿಗರಿಗೂ ಗೊತ್ತಿದೆ. ಇದನ್ನೆಲ್ಲ ವಿರೋಧಿಸುವ ಖರ್ಗೆ ಕುಟುಂಬವನ್ನು ಹೈದ್ರಾಬಾದಿನ ರಜಾಕಾರ ಮುಸ್ಲಿಮರು ನಾಶ ಮಾಡಿದ್ದನ್ನು ನೆನಪಿಸಿಕೊಳ್ಳಲಿ. ತಿಳಿಯದಿದ್ದರೆ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ಕೇಳಿ ತಿಳಿದುಕೊಳ್ಳಲಿ ಎಂದು ಹೇಳಿದ್ದರು.
An FIR has been registered against senior RSS leader Kalladka Dr. Prabhakar Bhat at the Puttur Rural Police Station following a complaint by Eshwari Padmunja. The complaint alleges that Bhat made derogatory remarks about Hindu and Muslim women and delivered a hate speech during a Deepavali event held at Uppalige near Irde in Puttur taluk.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 11:28 am
HK News Staffer
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm