ಬ್ರೇಕಿಂಗ್ ನ್ಯೂಸ್
29-10-25 03:57 pm Mangalore Correspondent ಕರಾವಳಿ
ಬೆಳ್ತಂಗಡಿ, ಅ.29 : ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶದ ವಿರುದ್ದ ಹಾಗೂ ಪೊಲೀಸರು ಹೋರಾಟಗಾರರ ಮೇಲೆ ವಿನಾಕಾರಣ ಸುಳ್ಳು ಕೇಸು ದಾಖಲಿಸುತ್ತಿದ್ದಾರೆ ಎಂದು ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ನೀಡಲು ಬಂದಿದ್ದವರ ಮೇಲೆಯೇ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರತಿಭಟನೆಗೆ ಅವಕಾಶ ಇಲ್ಲದಿದ್ದರೂ ಜನ ಸೇರಿಸಿದ ಆರೋಪದಲ್ಲಿ ಸೌಜನ್ಯಾ ತಾಯಿ ಕುಸುಮಾವತಿ, ಪ್ರಸನ್ನ ರವಿ ಸೇರಿದಂತೆ 20ಕ್ಕೂ ಅಧಿಕ ಮಂದಿ ವಿರುದ್ದ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 27 ರಂದು ಬೆಳಗ್ಗೆ ಸೌಜನ್ಯಾ ಪರ ಹೋರಾಟಗಾರರ ವಿರುದ್ದ ಪೊಲೀಸರು ಸುಳ್ಳು ಪ್ರಕರಣ ದಾಖಲಿಸುತ್ತಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಹಶಿಲ್ದಾರ್ ಗೆ ಮನವಿ ಸಲ್ಲಿಸಲು ಸಿದ್ಧತೆ ನಡೆದಿತ್ತು. ಈ ವೇಳೆ ಸಾಕಷ್ಟು ಜನ ಸೇರಿದ್ದರಿಂದ ಪೊಲೀಸರು ಅವರನ್ನು ತಡೆದಿದ್ದರಿಂದ ಹೈಡ್ರಾಮಾ ಆಗುವಂತಾಗಿತ್ತು. ಬಳಿಕ ಪೊಲೀಸರು ಮತ್ತು ಹೋರಾಟಗಾರರ ನಡುವೆ ವಾಗ್ವಾದ ನಡೆದಿತ್ತು. ಆನಂತರ, ನಾವು ಮನವಿ ಕೊಡುವುದಕ್ಕೂ ಪೊಲೀಸರ ಅನುಮತಿ ಯಾಕೆ ಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊನೆಗೆ ಐದು ಮಂದಿ ತಾಲೂಕು ಕಚೇರಿಗೆ ತೆರಳಿ ಉಪ ತಹಸೀಲ್ದಾರ್ ಗೆ ಮನವಿ ಪತ್ರ ನೀಡಿ ಬಂದಿದ್ದರು.
ಆದರೆ ಇದನ್ನೇ ನೆಪವಾಗಿಸಿದ ಪೊಲೀಸರು ಬೆಳ್ತಂಗಡಿ ತಾಲೂಕು ಕಚೇರಿ ಆವರಣದಲ್ಲಿ ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿದ್ದಾರೆ ಎಂದು ಆರೋಪಿಸಿ 20ಕ್ಕೂ ಅಧಿಕ ಮಂದಿ ವಿರುದ್ಧ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂದು ಪ್ರತಿಭಟನೆಗೆ ಅನುಮತಿ ಕೇಳಿದ್ದ ಅನಿಲ್ ಕುಮಾರ್ ಅಂತರ, ಪ್ರಜ್ವಲ್ ಗೌಡ, ಪ್ರದೀಪ್ ಕುಲಾಲ್, ಶ್ರೀನಿವಾಸ ಗೌಡ, ರವೀಂದ್ರ ಶೆಟ್ಟಿ, ಪ್ರಸನ್ನ ರವಿ, ಉದಯಪ್ರಸಾದ್, ಕುಸುಮಾವತಿ, ವೆಂಕಪ್ಪ ಕೋಟ್ಯಾನ್, ತನುಷ್ ಶೆಟ್ಟಿ, ಮೋಹನ್ ಶೆಟ್ಟಿ, ಜಯರಾಮ ಗೌಡ, ಸಂತೋಷ್ ಶೆಟ್ಟಿ, ಪ್ರಮೋದ್ ಶೆಟ್ಟಿ, ಯೋಗೇಶ್ ಕುಲಾಲ್, ನಾರಾವಿ ವಿಜಯ, ಶಶಿಕಲಾ ಶೆಟ್ಟಿ, ಪೂಜಾಶ್ರೀ, ಟಿಕ್ಕಿ ರವಿ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಬೆಳ್ತಂಗಡಿ ಎಎಸ್ಐ ದುರ್ಗಾದಾಸ್ ದೂರು ನೀಡಿದ್ದು ಪೊಲೀಸರ ಸೂಚನೆ ನಿರ್ಲಕ್ಷಿಸಿ ಬೆಳ್ತಂಗಡಿ ಮಿನಿವಿಧಾನ ಸೌಧದ ರಸ್ತೆ ಹಾಗೂ ಕಚೇರಿ ಎದುರು ಅಕ್ರಮ ಕೂಟ ಸೇರಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿದ್ದಾರೆಂದು ಪ್ರಕರಣ ದಾಖಲಿಸಿದ್ದಾರೆ.
In a controversial incident, Beltangady Police have registered a case against people who had come to submit a petition to the Tahsildar, alleging that the police were filing false cases against Soujanya case supporters and activists. The protesters claimed they were being targeted for supporting activist Mahesh Shetty Timarodi, who is currently facing an order of externment (banishment) from the region.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm