ಬ್ರೇಕಿಂಗ್ ನ್ಯೂಸ್
06-11-25 10:50 pm Mangalore Correspondent ಕರಾವಳಿ
ಮಂಗಳೂರು, ನ.6 : ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದರ ನವೀಕೃತ ಕಚೇರಿ ವಿಶ್ವಸೌಧ ಕಟ್ಟಡ ಉದ್ಘಾಟನೆ ಮತ್ತು ಸೊಸೈಟಿಯ ವಜ್ರಮಹೋತ್ಸವದ ಸಮಾರೋಪ ಸಮಾರಂಭ ನ.9ರಂದು ಕೊಟ್ಟಾರದಲ್ಲಿ ನಡೆಯಲಿದೆ.
ನವೀಕೃತ ವಿಶ್ವಸೌಧ ಕಟ್ಟಡವನ್ನು ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜೇಂದ್ರ ಕುಮಾರ್ ಉದ್ಘಾಟಿಸುವರು. ನವೀಕೃತ ಆಡಳಿತ ಕಚೇರಿಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟನೆ ಮಾಡಲಿದ್ದಾರೆ. ಸ್ಪೀಕರ್ ಯುಟಿ ಖಾದರ್, ಸಂಸದ ಕ್ಯಾ. ಬ್ರಿಜೇಶ್ ಚೌಟ, ಕೆನರಾ ಜುವೆಲ್ಲರ್ಸ್ ಮಾಲಕ ಧನಂಜಯ ಪಾಲ್ಕೆ, ಅಯೋಧ್ಯ ರಾಮಲಲ್ಲಾ ಮೂರ್ತಿಯ ನಿರ್ಮಾತೃ ಮೈಸೂರಿನ ಅರುಣ್ ಯೋಗಿರಾಜ್, ಮಂಗಳೂರು ಉತ್ತರ- ದಕ್ಷಿಣ ಕ್ಷೇತ್ರದ ಶಾಸಕರು ಉಪಸ್ಥಿತಿ ಇರಲಿದ್ದಾರೆ ಎಂದು ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.
ಸೊಸೈಟಿ ಅಸ್ತಿತ್ವಕ್ಕೆ ಬಂದು ಯಶಸ್ವಿ 60 ವರ್ಷಗಳಾಗಿದ್ದು ಈಗ ವಜ್ರ ಮಹೋತ್ಸವ ಆಚರಿಸುತ್ತಿದೆ. ಕಳೆದ 33 ವರ್ಷಗಳಿಂದ ಲೆಕ್ಕ ಪರಿಶೋಧನೆಯಲ್ಲಿ ಎ ವರ್ಗದ ಮಾನ್ಯತೆ ಪಡೆದಿದೆ. 253 ಕೋಟಿ ಠೇವಣಿ ಹೊಂದಿದ್ದು, 240 ಕೋಟಿ ಸಾಲ, 51 ಕೋಟಿ ಹೂಡಿಕೆ ಬಂಡವಾಳ ಹೊಂದಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಾದ್ಯಂತ 18 ಶಾಖೆಗಳಿದ್ದು ವಾರ್ಷಿಕ 18 ಪರ್ಸೆಂಟ್ ಡಿವಿಡೆಂಟ್ ನೀಡಲಾಗುತ್ತಿದೆ. ಚಿನ್ನದ ಕೆಲಸ ಸೇರಿ ಕುಸುರಿ ಕೌಶಲ್ಯದಲ್ಲಿ ಸಾಧನೆ ಮಾಡಿದವರಿಗೆ ಪ್ರತಿ ವರ್ಷ ಎಸ್ ಕೆಜಿಐ ಪಾಲ್ಕೆ ಪ್ರಶಸ್ತಿ ನೀಡುತ್ತ ಬಂದಿದ್ದೇವೆ.
ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ 363 ವಿದ್ಯಾರ್ಥಿಗಳಿಗೆ 11.70 ಲಕ್ಷ ವಿದ್ಯಾರ್ಥಿ ವೇತನ ನೀಡಲಾಗಿದೆ. 2024ನೇ ವರ್ಷವನ್ನು ವಜ್ರ ಮಹೋತ್ಸವ ವರ್ಷವೆಂದು ಆಚರಿಸುತ್ತಿದ್ದು 60 ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುತ್ತೇವೆ ಎಂದು ಹೇಳಿದರು. ಸುದ್ದಿಗೋಷ್ಟಿಯಲ್ಲಿ ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಯಜ್ಞೇಶ್ವರ, ಉಪಾಧ್ಯಕ್ಷ ಆನಂದ ಆಚಾರ್ಯ ಮತ್ತಿತರರು ಇದ್ದರು.
The S.K. Gold Smiths Industrial Co-operative Society will inaugurate its newly renovated ‘Vishwasoudha’ office building and conclude its Diamond Jubilee celebrations on November 9 at Kottara, Mangaluru. The event will see the participation of several dignitaries including ministers and MLAs.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm