70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ; ಹೈಕೋರ್ಟ್ ಮೆಟ್ಟಿಲೇರಿದ ಸೌಜನ್ಯಾ ತಾಯಿ  

07-11-25 02:08 pm       Mangalore Correspondent   ಕರಾವಳಿ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಹೋರಾಟಗಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 70ರಷ್ಟು ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ 70 ಎಫ್‌ಐಆರ್‌ ಗಳನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ಮಂಗಳೂರು, ನ.7 : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಹೋರಾಟಗಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 70ರಷ್ಟು ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ 70 ಎಫ್‌ಐಆರ್‌ ಗಳನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.

ನೇತ್ರಾವತಿ ಸ್ನಾನಗೃಹ ಮತ್ತು ಬಾಹುಬಲಿ ಬೆಟ್ಟದ ಬಳಿ 74 ಅನಾಥ ಶವಗಳನ್ನು ಹೂಳಲಾಗಿದೆ ಎನ್ನುವ ಮಾಹಿತಿ ಆಧರಿಸಿ ಅಷ್ಟೂ ಪ್ರಕರಣಗಳನ್ನು ಎಫ್‌ಐಆರ್‌ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಮನವಿ ಮಾಡಿದ್ದಾರೆ.

ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಎಸ್ಐಟಿ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯೆ ಕುಸುಮಾವತಿ ಹೊಸ ಅರ್ಜಿ ಸಲ್ಲಿಸಿದ್ದು ಮತ್ತಷ್ಟು ಎಫ್ಐಆರ್ ದಾಖಲಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಎಸ್ಐಟಿ ಪ್ರಕರಣದಲ್ಲಿ ದೂರುದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಸೂಚನೆ ನೀಡಿತ್ತು. 

ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್​ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್‌ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ಜಾರಿ ಮಾಡಿತ್ತು.

The mother of Soujanya, Kusumavathi, has approached the Karnataka High Court demanding a detailed investigation into the burial of around 70 unidentified bodies allegedly found near Dharmasthala. She has filed a Public Interest Litigation (PIL) requesting that separate FIRs be registered and investigated for each of the 70 missing and unidentified persons.