ಬ್ರೇಕಿಂಗ್ ನ್ಯೂಸ್
13-11-25 01:44 pm HK Staffer ಕರಾವಳಿ
ಕಾಸರಗೋಡು, ನ.13: ಮಂಗಳೂರು–ಕಾಸರಗೋಡು ರಾಷ್ಟ್ರೀಯ ಹೆದ್ದಾರಿ ಮಾರ್ಗದ ಕುಂಬಳೆಯ ಆರಿಕ್ಕಾಡಿ ಟೋಲ್ ಪ್ಲಾಝಾದಲ್ಲಿ ಶುಲ್ಕ ಸಂಗ್ರಹ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಹೈಕೋರ್ಟ್ ತೀರ್ಪು ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾಸರಗೋಡು ಜಿಲ್ಲಾಧಿಕಾರಿ ಕೆ.ಇಂಬಾಶೇಖರ್ ತಿಳಿಸಿದ್ದಾರೆ.
ನ.12ರಿಂದ ಟೋಲ್ ಸಂಗ್ರಹಿಸುವ ನಿರ್ಧಾರ ವಿರೋಧಿಸಿ ಬುಧವಾರ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಟೋಲ್ ಸಂಗ್ರಹವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ಹೇಳಿದ್ದಾರೆ. ಟೋಲ್ ಸಂಗ್ರಹ ವಿರುದ್ಧ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಲಾಗಿದ್ದು ನವೆಂಬರ್ 14 ರಂದು ವಿಚಾರಣೆಗೆ ಬರಲಿದೆ. ಅಂತಿಮ ತೀರ್ಪು ಬರುವ ವರೆಗೆ ಟೋಲ್ ಶುಲ್ಕ ಸಂಗ್ರಹಿಸದಿರಲು ಜಿಲ್ಲಾಡಳಿತ ನಿರ್ಧರಿಸಿದೆ.
ಕಾಸರಗೋಡು - ಮಂಗಳೂರು ಹೆದ್ದಾರಿ ಚತುಷ್ಪಥ ಸಲುವಾಗಿ ಕುಂಬಳೆ ಆರಿಕ್ಕಾಡಿಯಲ್ಲಿ ತಾತ್ಕಾಲಿಕವಾಗಿ ಟೋಲ್ ಪ್ಲಾಜಾವನ್ನು ನಿರ್ಮಿಸಲಾಗಿದೆ. 60 ಕಿಮೀ ನಡುವೆ ಒಂದು ಟೋಲ್ ಪ್ಲಾಜಾ ಎನ್ನುವ ನೀತಿ ಪ್ರಕಾರ ಚೆಂಗಳದಲ್ಲಿ ಟೋಲ್ ಕೇಂದ್ರ ಮಾಡಬೇಕಾಗುತ್ತದೆ. ಆದರೆ ಚೆಂಗಳದಲ್ಲಿ ಬೇರೆ ಕಂಪನಿ ಹೆದ್ದಾರಿ ಗುತ್ತಿಗೆ ಪಡೆದಿದ್ದು ಅಲ್ಲಿ ಇನ್ನೂ ಕಾಮಗಾರಿ ಪೂರ್ತಿಯಾಗಿಲ್ಲ. ಹೀಗಾಗಿ ಕಾಸರಗೋಡು- ತಲಪಾಡಿ ಮಧ್ಯೆ ಕಾಮಗಾರಿ ಪೂರ್ತಿ ಆಗಿರುವುದರಿಂದ ತಾತ್ಕಾಲಿಕ ನೆಲೆಯಲ್ಲಿ ಕುಂಬಳೆಯಲ್ಲಿ ಶುಲ್ಕ ಸಂಗ್ರಹಿಸಲು ಕಂಪನಿ ಮುಂದಾಗಿದೆ. ಕಂಪನಿಯ ಈ ಕ್ರಮಕ್ಕೆ ಹೆದ್ದಾರಿ ಪ್ರಾಧಿಕಾರವೂ ಒಪ್ಪಿಗೆ ನೀಡಿತ್ತು. ಆದರೆ ಸ್ಥಳೀಯ ಶಾಸಕರು ಮತ್ತು ಜನರು ವಿರೋಧ ವ್ಯಕ್ತಪಡಿಸಿದ್ದಾರೆ.
The process of toll collection at the newly established Kumble (Arikkadi) Toll Plaza on the Mangaluru–Kasaragod National Highway has been temporarily postponed. Kasaragod District Collector K. Imbashekar stated that a final decision will be made after the Kerala High Court delivers its verdict. Locals staged a protest on Wednesday opposing the decision to begin toll collection from November 12. Following the protest, Manjeeshwar MLA A.K.M. Ashraf announced that toll collection has been deferred temporarily. A public interest litigation (PIL) challenging the toll collection has been filed in the Kerala High Court, which is scheduled to hear the case on November 14. Until the final judgment, the district administration has decided not to permit toll collection.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am