ಬ್ರೇಕಿಂಗ್ ನ್ಯೂಸ್
16-11-25 04:40 pm Mangalore Correspondent ಕರಾವಳಿ
ಮಂಗಳೂರು, ನ.16 : ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನ ಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ ಸುಳ್ಯ ತಾಲೂಕಿನಲ್ಲಿ ಹಳದಿ ರೋಗದ ಲಕ್ಷಣ, ಪ್ರಸರಣ ಹಾಗೂ ವ್ಯಾಪ್ತಿ ಮುಂತಾದವುಗಳ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡುವುದಕ್ಕೆ ಸುಧಾರಿತ ಡ್ರೋನ್ ಆಧಾರಿತ ವೈಮಾನಿಕ ಸಮೀಕ್ಷಾ ಕಾರ್ಯ ಆರಂಭಿಸಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕಳೆದ ಆಗಸ್ಟ್ ನಲ್ಲಿ ಕರ್ನಾಟಕದ ಅಡಿಕೆ ಬೆಳೆಯುವ ಜಿಲ್ಲೆಗಳ ಸಂಸದರು, ರಾಜ್ಯದ ಸಚಿವರು, ಅಡಿಕೆ ಬೆಳೆಗಾರರ ಸಂಸ್ಥೆಗಳನ್ನು ಒಳಗೊಂಡ ಜಂಟಿ ನಿಯೋಗವು ದೆಹಲಿಯಲ್ಲಿ ಕೃಷಿ ಸಚಿವ ಶಿವರಾಜ್ ಚೌಹಾಣ್ ಅವರನ್ನು ಭೇಟಿ ಮಾಡಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮನವರಿಕೆ ಮಾಡಿತ್ತು. ಈ ವೇಳೆ ಸಂಸದ ಕ್ಯಾ. ಚೌಟ ಅವರು ಕೂಡ ಎಲೆ ಚುಕ್ಕಿ ಹಾಗೂ ಹಳದಿ ರೋಗ ಸೇರಿದಂತೆ ಅಡಿಕೆ ಬೆಳೆಗೆ ಕಾಡುತ್ತಿರುವ ಸಮಸ್ಯೆಗಳಿಂದ ರೈತರು ತೀವ್ರ ನಷ್ಟ ಅನುಭವಿಸುತ್ತಿದ್ದು, ಅವರ ಸಂಕಷ್ಟಕ್ಕೆ ಸ್ಪಂದಿಸುವಂತೆ ಮನವಿ ಮಾಡಿದ್ದರು. ಈ ವೇಳೆ ಜಂಟಿ ನಿಯೋಗವು ಅಡಿಕೆ ಹಳದಿ ಎಲೆ ಶಿಲೀಂದ್ರ ಮತ್ತು ಇತರ ರೋಗಗಳಿಂದ ದೀರ್ಘಾವಧಿಯ ಅಧ್ಯಯನ ಮಾಡಲು ಮತ್ತು ಪರಿಹಾರ ಕಂಡುಹಿಡಿಯಲು ಪ್ರತಿಷ್ಠಿತ ಸಂಶೋಧನಾ ಸಂಸ್ಥೆಯಿಂದ ಸಮಗ್ರ ಅಧ್ಯಯನ ನಡೆಸಬೇಕೆಂದು ಸಚಿವರ ಮುಂದಿಟ್ಟಿತ್ತು. ಈ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರವು ನಿಯೋಗವನ್ನು ಕಳುಹಿಸಿದೆ.



ಕೇಂದ್ರ ಸರ್ಕಾರ ನಿರ್ದೇಶನದಂತೆ ಕಾಸರಗೋಡಿನಲ್ಲಿರುವ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ(ಸಿಪಿಸಿಆರ್ಐ), ಬೆಂಗಳೂರಿನ ಇಸ್ರೋ ಸಂಶೋಧನಾ ವಿಭಾಗ ಹಾಗೂ ಹೈದರಾಬಾದ್ನ ಇಸ್ರೋ ವೈಮಾನಿಕ ವಿಭಾಗ (ISRO Aerial Wing)ವು ಜಂಟಿಯಾಗಿ ಸರ್ವೆ ಕಾರ್ಯವನ್ನು ಕೈಗೆತ್ತಿಕೊಂಡಿದೆ. ಈ ತಂಡವು ಸುಳ್ಯ ತಾಲೂಕಿನ ಅರಂತೋಡು ಮತ್ತು ಪೆರಾಜೆ ಗ್ರಾಮದಲ್ಲಿ ಡ್ರೋಣ್ ಸಮೀಕ್ಷೆ ನಡೆಸುತ್ತಿದೆ. ಎರಡು ಪ್ರದೇಶಗಳ ಒಟ್ಟು 2.5 ಚದರ ಕಿ.ಮೀ. ವ್ಯಾಪ್ತಿಯಲ್ಲಿ ಆರಂಭಿಕ ಸಮೀಕ್ಷಾ ಕಾರ್ಯ ನಡೆಯುತ್ತಿದೆ. ಸುಧಾರಿತ ಡ್ರೋನ್ ಮೂಲಕ ಅಡಿಕೆ ಮರಗಳ ಎಲೆಗಳ ಫೋಟೊ ಮತ್ತು ವಿಡಿಯೋ ಸೆರೆಹಿಡಿಯಲಾಗುತ್ತದೆ. ಇಲ್ಲಿನ ಚಿತ್ರಗಳನ್ನು ಸೂಕ್ಷ್ಮವಾಗಿ ವಿಶ್ಲೇಷಿಸಲಾಗುತ್ತದೆ. ಈ ಮೂಲ ಚಿತ್ರಗಳನ್ನು ಬೇಸ್ ಆಗಿ ಪರಿಗಣಿಸಿ ಅದನ್ನು ಇಸ್ರೋದ ಉಪಗ್ರಹಕ್ಕೆ(Satellite) ದತ್ತಾಂಶವಾಗಿ ನೀಡಿ, ಆ ಮೂಲಕ ಕೇವಲ ಪ್ರಾಯೋಗಿಕ ಪ್ರದೇಶವಲ್ಲದೆ, ದೊಡ್ಡ ವ್ಯಾಪ್ತಿಯಲ್ಲಿ ಒಟ್ಟು ಅಡಿಕೆ ಎಲೆ ಹಳದಿ ರೋಗ ಪೀಡಿತ ಪ್ರದೇಶಗಳ ಸಮಗ್ರ ಸಮೀಕ್ಷೆ ನಡೆಯಲಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ಅಡಿಕೆ ಬೆಳೆಗೆ ಬಾಧಿಸಿರುವ ಎಲೆ ಹಳದಿ ರೋಗ ಸಮಸ್ಯೆ ಪರಿಹಾರಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದ್ದು, ಈ ಸಮೀಕ್ಷೆಯಲ್ಲಿ ವೈಜ್ಞಾನಿಕ ಹಾಗೂ ನಿಖರ ಅಂಕಿ-ಅಂಶಗಳು ದೊರೆಯಲಿದೆ. ಅಲ್ಲದೆ, ಎಲೆ ಹಳದಿ ರೋಗ ಪೀಡಿತ ಅಡಿಕೆ ಮರಗಳಲ್ಲಿ ಆಗುವ ಬದಲಾವಣೆಗಳ ಬಗ್ಗೆಯೂ ನಿಗಾ ವಹಿಸಲಾಗುತ್ತದೆ. ಅಡಿಕೆ ಬೆಳೆಗೆ ಆಗುವ ರೋಗ ಪ್ರಸರಣದ ವೇಗ ಹಾಗೂ ವ್ಯಾಪ್ತಿ ಬಗ್ಗೆಯೂ ಮಾಹಿತಿ ಲಭ್ಯವಾಗಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.
The Central Government, led by Prime Minister Narendra Modi, has responded to the long-pending demands of arecanut farmers in Karnataka, including those in Dakshina Kannada. A scientifically advanced drone-based aerial survey has now been launched in Sullia taluk to study the symptoms, spread, and extent of Yellow Leaf Disease affecting arecanut plantations, said MP Brijesh Chowta.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
15-11-25 11:12 pm
HK News Desk
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
ಶ್ರೀನಗರ ಪೊಲೀಸ್ ಠಾಣೆಯಲ್ಲಿ ಭೀಕರ ಸ್ಫೋಟ ; 6 ಮಂದಿ...
15-11-25 12:06 pm
ಬಿಹಾರ ಫಲಿತಾಂಶ ; ‘ಛೋಟೇ ಸರ್ಕಾರ್’ ಖ್ಯಾತಿಯ ಅನಂತ್...
14-11-25 09:10 pm
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
16-11-25 04:40 pm
Mangalore Correspondent
ಧರ್ಮಸ್ಥಳ ಪ್ರಕರಣ ; ಬಟ್ಟೆ ಬಿಚ್ಚಿಸಿ ಬೂಟು ಕಾಲಿನಿಂ...
15-11-25 10:47 pm
ಬೀದಿ ನಾಯಿಗಳಿಗೆ ವ್ಯಕ್ತಿ ಬಲಿ ; ಕಡೆಗೂ ಎಚ್ಚತ್ತುಕೊ...
15-11-25 07:42 pm
Panambur Accident, Mangalore, Three dead: ಪಣಂ...
15-11-25 02:47 pm
ಬಿಹಾರದಲ್ಲಿ ಚುನಾವಣೆ ಮುನ್ನ ಹತ್ತು ಸಾವಿರ ಕೊಟ್ಟು ಮ...
15-11-25 01:51 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm