ಬ್ರೇಕಿಂಗ್ ನ್ಯೂಸ್
29-12-20 03:13 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಜನವರಿ 1ರಂದು ತೊಕ್ಕೊಟ್ಟು ಕೇಂದ್ರ ಬಸ್ ನಿಲ್ದಾಣ ಬಳಿ ಅಬ್ಬಕ್ಕ ಭವನಕ್ಕೆ ಮೀಸಲಿಟ್ಟ ಜಾಗದಲ್ಲಿ ಬ್ಯಾರಿ ಭವನ ನಿರ್ಮಾಣ ಮಾಡಲು ಶಿಲಾನ್ಯಾಸ ಕಾರ್ಯಕ್ರಮ ನಿಗದಿಯಾಗಿದ್ದು, ಬ್ಯಾರಿ ಭವನದ ಶಿಲಾನ್ಯಾಸ ವಿರೋಧಿಸಿ ವಿವಿಧ ಸಂಘಟನೆಗಳು ಸೇರಿಕೊಂಡು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ(ರಿ) ಉಳ್ಳಾಲ, ಅಖಿಲ ಭಾರತ ಹಿಂದು ಮಹಾಸಭಾ, ತುಳುನಾಡ ಜವನೆರ್ (ರಿ) ಕುಡ್ಲ ಸಂಘಟನೆಗಳು ಬ್ಯಾರಿ ಭವನ ಶಿಲಾನ್ಯಾಸಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಪ್ರತಿಭಟನೆ ನಡೆಸಲು ನಿರ್ಧರಿಸಿವೆ.
ಈ ಬಗ್ಗೆ ಉಳ್ಳಾಲ ವೀರರಾಣಿ ಅಬ್ಬಕ್ಕ ಉತ್ಸವ ಸಮಿತಿ ಅಧ್ಯಕ್ಷ ದಿನಕರ್ ಉಳ್ಳಾಲ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ತೊಕ್ಕೊಟ್ಟಿನ ಕೇಂದ್ರ ಬಸ್ಸು ತಂಗುದಾಣದ ಹತ್ತಿರದ 41 ಸೆಂಟ್ಸ್ ಜಮೀನನನ್ನು ಅಬ್ಬಕ್ಕ ಭವನಕ್ಕೆ ಮಂಜೂರುಗೊಳಿಸಿದ್ದು ಭವನ ನಿರ್ಮಾಣಕ್ಕೆ ಶಿಲಾನ್ಯಾಸವಾಗಿ 9 ವರ್ಷಗಳು ಸಂದರೂ ಕಟ್ಟಡ ಕಾಮಗಾರಿಯನ್ನು ಕೈಗೆತ್ತಿಕೊಂಡಿಲ್ಲ. ಈ ನಡುವೆ, ನೀರು ಮಾರ್ಗದ ಬೈತುರ್ಲಿಯಲ್ಲಿ ನಿರ್ಮಿಸಲು ತಯಾರಿ ನಡೆಸಿದ್ದ ಬ್ಯಾರಿ ಭವನವನ್ನು ತರಾತುರಿಯಲ್ಲಿ ತೊಕ್ಕೊಟ್ಟಿಗೆ ವರ್ಗಾಯಿಸಿದ್ದಾರೆ. ಸ್ಥಳೀಯ ಶಾಸಕ ಯು.ಟಿ .ಖಾದರ್, ಬ್ಯಾರಿ ಭವನಕ್ಕೆ ಅಬ್ಬಕ್ಕ ಭವನದ ಕಾಯ್ದಿರಿಸಿದ ಜಾಗವನ್ನೇ ನೀಡಲಾಗಿದೆ ಎಂಬ ಹೇಳಿಕೆ ನೀಡಿದ್ದು ಗೊಂದಲಕ್ಕೆ ಕಾರಣವಾಗಿದೆ. ಮಾಹಿತಿ ಪ್ರಕಾರ ಬ್ಯಾರಿ ಭವನಕ್ಕೆ ಪಕ್ಕದ ಕಂದಾಯ ಇಲಾಖೆಯ ವಸತಿ ಸಂಕೀರ್ಣಕ್ಕೆ ಮೀಸಲಿಟ್ಟ ಜಾಗವನ್ನು ನೀಡುತ್ತಿರುವುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ ಎಂದಿದ್ದಾರೆ.
ಬ್ಯಾರಿ ಭವನ ನಿರ್ಮಾಣಕ್ಕೆ ನಮ್ಮ ವಿರೋಧವಿಲ್ಲ. ಆದರೆ ಅಬ್ಬಕ್ಕ ಭವನದ ಹತ್ತಿರವೇ ನಿರ್ಮಿಸುವ ಔಚಿತ್ಯವೇನೆಂದು ಪ್ರಶ್ನಿಸಿದ್ದಾರೆ. ಬ್ಯಾರಿ ಭವನ ನಿರ್ಮಿಸಲು ಉಳ್ಳಾಲದಲ್ಲಿ ಮುಸ್ಲಿಂ ಬಾಹುಳ್ಯವುಳ್ಳ ಅನೇಕ ಸ್ಥಳಗಳಿವೆ. ಅಬ್ಬಕ್ಕ ಭವನದ ನಿರ್ಮಾಣ ವಿಳಂಬ, ಅಬ್ಬಕ್ಕ ಅಧ್ಯಯನ ಪೀಠ ಸ್ಥಾಪನೆಯ ಬಗ್ಗೆ ನಾವು ಈ ಹಿಂದೆಯೇ ಪ್ರತಿಭಟನೆ ನಡೆಸುವ ಬಗ್ಗೆ ಹೇಳಿದ್ದೆವು. ಹಾಗಾಗಿ ನಾವು ಜನವರಿ ಒಂದರಂದು ಅಬ್ಬಕ್ಕ ಭವನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಬೆಳಗ್ಗೆ ಮೌನ ಪ್ರತಿಭಟನೆ ನಡೆಸಲಿದ್ದೇವೆ ಎಂದು ಹೇಳಿದ್ದಾರೆ.
ಹಿಂದೂ ಪರ ಸಂಘಟನೆಗಳಾದ ಅಖಿಲ ಭಾರತ ಹಿಂದೂ ಮಹಾಸಭಾ, ತುಳುನಾಡ ಜವನೆರ್ (ರಿ)ಕುಡ್ಲದ ಪದಾಧಿಕಾರಿಗಳು ಬ್ಯಾರಿ ಭವನ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಬ್ಯಾರಿ ಭವನಕ್ಕೆ ಅನುಮತಿ ನೀಡಿದರೆ ಮುಂದೆ ಅಹಿತಕರ ಘಟನೆಗಳಿಗೆ ವೇದಿಕೆ ನೀಡಿದಂತಾಗುತ್ತದೆ ಎಂದಿದ್ದಾರೆ.
Abbakka followers entirety construct Beary Bhavan in Thokottu Mangalore. Abbakka followers warn of protest if Beary Bhavana is built in Thokottu.
20-03-25 10:48 pm
Bangalore Correspondent
Honey Trapped, Minister, Probe: ಅಧಿವೇಶನದಲ್ಲಿ...
20-03-25 09:52 pm
Bangalore Marriage case, Srikanth Bindushree:...
20-03-25 01:07 pm
Kalaburagi police suspended, playing cards: ಇ...
20-03-25 12:18 pm
Raichur Accident, Bike Lorry: ಬೈಕ್ಗೆ ಡಿಕ್ಕಿ...
19-03-25 04:42 pm
20-03-25 10:40 pm
HK News Desk
ಹೆದ್ದಾರಿ ಬಳಕೆದಾರರಿಗೆ ಸಿಹಿಸುದ್ದಿ ; ಟೋಲ್ ಶುಲ್ಕ...
20-03-25 07:19 pm
ಕೊಂಕಣ ರೈಲ್ವೇ ಭಾರತೀಯ ರೈಲ್ವೇಯಲ್ಲಿ ವಿಲೀನಕ್ಕೆ ಮಹಾ...
20-03-25 06:07 pm
Kollam Suicide: ಸಾಲಗಾರರ ಕಾಟ ; ಎರಡು ವರ್ಷದ ಮಗುವ...
19-03-25 07:39 pm
ಕೊನೆಗೂ ಭುವಿಗಿಳಿದ ಸುನಿತಾ ವಿಲಿಯಮ್ಸ್ ; 9 ತಿಂಗಳ ತ...
19-03-25 02:10 pm
20-03-25 02:05 pm
HK News Desk
ಮೀನು ಕದ್ದ ಆರೋಪದಲ್ಲಿ ಮಹಿಳೆಯನ್ನು ಮರಕ್ಕೆ ಕಟ್ಟಿ ಥ...
19-03-25 10:13 pm
ಪವಾಡಕ್ಕೆ ಸಾಕ್ಷಿಯಾಗಿದೆ ತಲಪಾಡಿ ದುರ್ಗಾಪರಮೇಶ್ವರೀ...
18-03-25 10:09 pm
Electricity, Malekudiya Tribal, Belthangady:...
18-03-25 08:53 pm
Mangalore accident, Kinnigoli, Bike, Vidoe: ಕ...
18-03-25 03:15 pm
20-03-25 05:29 pm
HK News Staff
Mangalore crime, Kukkeshree PG, Kadri: ಪಿಜಿ ಚ...
20-03-25 04:13 pm
Bidadi pro Pak graffiti; ಬಿಡದಿ ಫ್ಯಾಕ್ಟರಿಯಲ್ಲಿ...
20-03-25 03:22 pm
Mangalore Crime, Pachanady, Compound wall: ರಸ...
19-03-25 08:27 pm
Mangalore drugs, NCB: ಅತಿ ದೊಡ್ಡ ಡ್ರಗ್ಸ್ ಬೇಟೆ...
18-03-25 06:31 pm