ಬ್ರೇಕಿಂಗ್ ನ್ಯೂಸ್
25-11-25 10:51 pm Udupi Correspondent ಕರಾವಳಿ
ಉಡುಪಿ, ನ.25 : ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆಯುತ್ತಿರುವ ಲಕ್ಷಕಂಠ ಗೀತಾ ಪಾರಾಯಣದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 28 ರಂದು ಆಗಮಿಸಲಿದ್ದು, ಈ ಹಿನ್ನೆಲೆಯಲ್ಲಿ ಭದ್ರತೆ ಸಲುವಾಗಿ ಶಿಷ್ಟಾಚಾರ ಪಾಲಿಸುವ ಉದ್ದೇಶದಿಂದ ಉಡುಪಿ ನಗರ, ಮಲ್ಪೆ ಮತ್ತು ಮಣಿಪಾಲ ಠಾಣೆ ವ್ಯಾಪ್ತಿಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ನಿಯಮಾನುಸಾರ ಶಿಷ್ಟಾಚಾರ ಪಾಲಿಸಬೇಕಾಗುವುದರಿಂದ ಮತ್ತು ಪ್ರಧಾನ ಮಂತ್ರಿಯವರ ಭೇಟಿ ಸಂದರ್ಭದಲ್ಲಿ ಕೇಂದ್ರ ಸಚಿವರು, ಕರ್ನಾಟಕ ರಾಜ್ಯಪಾಲರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಹಾಗೂ ಮುಖ್ಯ ಕಾರ್ಯದರ್ಶಿಗಳು ಬರುವ ಸಾಧ್ಯತೆ ಇರುವುದರಿಂದ, ಭದ್ರತೆ ಹಾಗೂ ಸೂಕ್ತ ಶಿಷ್ಟಾಚಾರ ಪಾಲಿಸಬೇಕಾಗುತ್ತದೆ.
ಹೀಗಾಗಿ ನ.28 ರಂದು ಕಾರ್ಯಕ್ರಮ ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಪೊಲೀಸ್ ಅಧೀಕ್ಷಕರ ಕೋರಿಕೆಯಂತೆ ಸಂಚಾರಕ್ಕೆ ತೊಡಕು ಉಂಟಾಗುವ ಸಾಧ್ಯತೆಗಳಿರುವುದರಿಂದ, ಶಾಲಾ ಮಕ್ಕಳ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಠಾಣೆ, ಮಲ್ಪೆ ಠಾಣೆ ಮತ್ತು ಮಣಿಪಾಲ ಠಾಣೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನ.28ರಂದು ಒಂದು ದಿನದ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿದ್ದಾರೆ. ಈಗಾಗಲೇ ಪ್ರಧಾನಿ ಆಗಮಿಸುವ ಉಡುಪಿ ನಗರ ಭಾಗದ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
Ahead of Prime Minister Narendra Modi’s visit to Udupi on November 28 for the Laksha Kantha Gita Parayana at Sri Krishna Math, the district administration has declared a holiday for Anganwadis, primary and high schools in Udupi, Manipal and Malpe. Due to heavy security arrangements and possible traffic disruption, the holiday has been announced as a precaution for student safety and smooth conduct of the event.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm