ಬ್ರೇಕಿಂಗ್ ನ್ಯೂಸ್
29-11-25 10:53 am Mangalore Correspondent ಕರಾವಳಿ
ಮಂಗಳೂರು, ನ.29 : ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಿರುವ ಮೊಬೈಲ್ ಜಾಮರ್ ಯಂತ್ರ ಸುತ್ತಮುತ್ತ ಪ್ರದೇಶದ ಸಾರ್ವಜನಿಕರ ದೂರಸಂಪರ್ಕ ಸೇವೆಗಳಿಗೆ ಯಾವುದೇ ಪರಿಣಾಮ ಬೀರಬಾರದು. ಜಾಮರ್ ಸಿಗ್ನಲ್ ಜೈಲು ಆವರಣದೊಳಗೆ ಸೀಮಿತಗೊಳಿಸುವಂತೆ ಕೇಂದ್ರ ದೂರ ಸಂಪರ್ಕ ಸಚಿವಾಲಯ ರಾಜ್ಯ ಬಂದೀಖಾನೆ ಇಲಾಖೆ ಡಿಐಜಿಗೆ ಸ್ಪಷ್ಟ ನಿರ್ದೇಶನ ನೀಡಿದೆ.
ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಅಳವಡಿಸಲಾದ ಸೆಲ್ ಫೋನ್ ಜಾಮರ್ ಗಳಿಂದ ಉಂಟಾಗುವ ತೊಂದರೆ ಬಗ್ಗೆ ವಯರ್ ಲೆಸ್ ಮಾನಿಟರಿಂಗ್ ಸ್ಟೇಷನ್ (ಡಬ್ಲ್ಯು ಎಂಎಸ್), ಟಿಎಸ್ಪಿ, ಟಿಸಿಐಎಸ್ ಮತ್ತು ಕಾರಾಗೃಹ ಅಧಿಕಾರಿಗಳ ಸಹಯೋಗದೊಂದಿಗೆ ಅ.28, 29ರಂದು ಜಂಟಿ ಸರ್ವೆ ನಡೆಸಲಾಗಿತ್ತು. ಈ ಸರ್ವೆಯಲ್ಲಿ ಕಾರಾಗೃಹದ ಆವರಣದೊಳಗೆ ಎಲ್ಲ ಐಎಂಟಿ ಮತ್ತು ವೈ-ಫೈ ಬ್ಯಾಂಡ್ ಗಳು ಸುಮಾರು 70 ಡಿಬಿಎಂ(ಡೆಸಿಬಲ್ ಮಿಲಿವಾಟ್) ಶಕ್ತಿಯೊಂದಿಗೆ ಜಾಮರ್ ಸಿಗ್ನಲ್ನಿಂದ ಕಾರ್ಯ ನಿರ್ವಹಿಸುತ್ತಿರುವುದು ಕಂಡುಬಂದಿದೆ. ಜಾಮರ್ ಸಿಗ್ನಲ್ನ ಶಕ್ತಿ ಸುಮಾರು 80 ಡಿಬಿಎಂ ಇರುವ ಕಾರಣದಿಂದಾಗಿ, ಕಾರಾಗೃಹದ ಪ್ರವೇಶ ದ್ವಾರದಿಂದ ಸುಮಾರು 900 ಮೀಟರ್ ದೂರದ ವರೆಗೆ 1800-2100 ರೆಡಿಯೋ ಫ್ರೀಕ್ವೆನ್ಸಿ ಬ್ಯಾಂಡ್ ಹೊಂದಿರುತ್ತದೆ. ಹೊಸದಾಗಿ ಅಳವಡಿಸಿದ ಜಾಮರ್ನಿಂದಾಗಿ ಜೈಲಿನಿಂದ 2.5 ಕಿ.ಮೀ. ವರೆಗೂ ಪರಿಣಾಮ ಬೀರುತ್ತಿದ್ದು, ಇದರಿಂದ ಸಾರ್ವಜನಿಕರ ದೂರಸಂಪರ್ಕ ಸೇವೆಗಳಿಗೆ ತೊಂದರೆಯಾಗುತ್ತಿದೆ. ಉದ್ದೇಶಿತ ವ್ಯಾಪ್ತಿ ಪ್ರದೇಶವನ್ನು ಮೀರಿ ಜಾಮರ್ ಸಿಗ್ನಲ್ ಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಹಾಗೂ ಇದರಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ಬಗ್ಗೆ ಜಂಟಿ ಪರಿಶೀಲನೆಯಲ್ಲಿ ಕಂಡುಬಂದಿತ್ತು. ಈ ಬಗ್ಗೆ ಜಂಟಿ ಸಮಿತಿ ಕೇಂದ್ರ ಸಚಿವಾಲಯಕ್ಕೆ ವರದಿ ನೀಡಿತ್ತು.

ಸಮಸ್ಯೆ ಒಪ್ಪಿಕೊಂಡ ಕೇಂದ್ರ, ರಾಜ್ಯ ಸರ್ಕಾರಗಳು
ಮೊಬೈಲ್ ಜಾಮರ್ನಿಂದ ನಗರ ಪ್ರದೇಶದಲ್ಲಿ ನೆಟ್ವರ್ಕ್ ಸಮಸ್ಯೆ ಉದ್ಭವಿಸಿರುವುದನ್ನು ಹೈಕೋರ್ಟ್ನಲ್ಲಿ ವಿಚಾರಣೆ ವೇಳೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಒಪ್ಪಿಕೊಂಡಿವೆ. ಮಂಗಳೂರಿನ ವಕೀಲರ ಸಂಘ ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್ ಸೂಚನೆ ಮೇರೆಗೆ ಟೆಲಿಕಾಂ ಕಂಪನಿಯ ಅಧಿಕಾರಿಗಳು ಮಂಗಳೂರು ಜೈಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ತೆರಳಿ ಜಾಮರ್ನಿಂದ ಉಂಟಾದ ನೆಟ್ವರ್ಕ್ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಿದ್ದರು. ಈ ಕುರಿತು ಹೈಕೋರ್ಟ್ ನಲ್ಲಿ ವಿಚಾರಣೆ ಮುಂದುವರಿದಿದ್ದು, ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರಕಾರದ ಪರ ವಕೀಲರು ವಾದ ಮಂಡಿಸಿದ್ದಾರೆ.
ಕೇಂದ್ರ ಸರಕಾರದ ದೂರಸಂಪರ್ಕ ಇಲಾಖೆ ಈ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಬಂದೀಖಾನೆ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದಿದೆ. ಇನ್ನೊಂದೆಡೆ ರಾಜ್ಯ ಸರಕಾರದ ಬಂದಿಖಾನೆ ಇಲಾಖೆ ಅಧಿಕಾರಿಗಳು ಈ ಸಮಸ್ಯೆ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿ ಕೇಂದ್ರ ದೂರಸಂಪರ್ಕ ವಿಭಾಗಕ್ಕೆ ಪತ್ರ ಬರೆದಿದ್ದಾರೆ. ವಾದ- ಪ್ರತಿವಾದ ಆಲಿಸಿದ ನ್ಯಾಯಾಲಯ, ಜೈಲಿನಲ್ಲಿ ಜಾಮರ್ ಅಳವಡಿಕೆಯಿಂದ ಉಂಟಾದ ಸಮಸ್ಯೆ ನಿವಾರಣೆಗೆ ಕೈಗೊಂಡ ಕ್ರಮದ ಬಗ್ಗೆ ಡಿ.1ರಂದು ಅಧಿಕೃತವಾಗಿ ತಿಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸೂಚಿಸಿದೆ.
The Union Ministry of Telecommunications has issued clear instructions to the Karnataka Prison Department (DIG) stating that the mobile jammers installed in Mangaluru District Jail must not interfere with public telecommunication services in the surrounding areas. The ministry ordered that the jammer signal must remain strictly within the prison premises.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am