ಬ್ರೇಕಿಂಗ್ ನ್ಯೂಸ್
10-12-25 10:51 pm Mangalore Correspondent ಕರಾವಳಿ
ಮಂಗಳೂರು, ಡಿ.10 : ಮಂಗಳೂರು ನಗರ ವ್ಯಾಪ್ತಿಯ ಕಾಲೇಜು ಆವರಣಗಳಲ್ಲಿ ಮಾದಕ ಜಾಲದ ವಿರುದ್ಧ ಜಾಗೃತಿ ಹಾಗೂ ಡ್ರಗ್ಸ್ ತಪಾಸಣೆ ಅಭಿಯಾನವನ್ನು ಪೊಲೀಸರು ಕೈಗೊಂಡಿದ್ದು ಒಂದು ತಿಂಗಳ ಅವಧಿಯಲ್ಲಿ 20 ವಿದ್ಯಾರ್ಥಿಗಳಲ್ಲಿ ಡ್ರಗ್ಸ್ ಪಾಸಿಟಿವ್ ಇರುವುದು ಪತ್ತೆಯಾಗಿದೆ. ಕಮಿಷನರೇಟ್ ವ್ಯಾಪ್ತಿಯಲ್ಲಿ ಈವರೆಗೆ 77 ಶಾಲೆ, ಕಾಲೇಜುಗಳಲ್ಲಿ ತಪಾಸಣೆ ನಡೆಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಿದ ಬಳಿಕ ಡ್ರಗ್ಸ್ ವಿರುದ್ಧ ಸಮರ ಸಾರಿದ್ದು ಮಾರಾಟ, ಸೇವನೆ, ಪೆಡ್ಲರ್ ಗಳ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ. ಕಾಲೇಜು ಕ್ಯಾಂಪಸ್ಗಳಲ್ಲಿ ಡ್ರಗ್ಸ್ ವಹಿವಾಟು ಹೆಚ್ಚಿದ್ದುದರಿಂದ ತಪಾಸಣೆಗೆ ಮುಂದಾಗಿದ್ದರು. ಕೆಲವು ಕಾಲೇಜುಗಳ ಆಡಳಿತ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದರೂ ಕಮಿಷನರ್ ಮಾತ್ರ ಬಗ್ಗದೆ, ನಿರಂತರ ತಪಾಸಣೆಗೆ ಸೂಚನೆ ನೀಡಿದ್ದಾರೆ.

ಜೂ.1ರಿಂದ ತೊಡಗಿ ನ.30ರ ವರೆಗೆ ಕಾಲೇಜು ಕ್ಯಾಂಪಸ್ಗಳಲ್ಲಿ ಮೊದಲ ಹಂತದ ಡ್ರಗ್ಸ್ ತಪಾಸಣೆ ಮುಗಿದಿದೆ. ಮಂಗಳೂರು ದಕ್ಷಿಣ ಉಪ ವಿಭಾಗದ (ಉಳ್ಳಾಲ, ಕೊಣಾಜೆ, ಮಂಗಳೂರು ಗ್ರಾಮಾಂತರ ಠಾಣೆ) ಒಟ್ಟು 29 ಕಾಲೇಜುಗಳಲ್ಲಿ 1,601 ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿದ್ದು, 8 ಮಂದಿ ಪಾಸಿಟಿವ್ ಬಂದಿದೆ. ಮಂಗಳೂರು ಕೇಂದ್ರ ಉಪ ವಿಭಾಗದ (ಬಂದರು, ಬರ್ಕೆ, ಪಾಂಡೇಶ್ವರ, ಕದ್ರಿ, ಉರ್ವ ಠಾಣೆ) 30 ಕಾಲೇಜುಗಳಲ್ಲಿ 1,448 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು, 6 ಮಂದಿ ಪಾಸಿಟಿವ್ ಆಗಿದ್ದಾರೆ. ಮಂಗಳೂರು ಉತ್ತರ ಉಪ ವಿಭಾಗದ (ಪಣಂಬೂರು, ಕಾವೂರು, ಬಜಪೆ, ಸುರತ್ಕಲ್, ಮೂಲ್ಕಿ, ಮೂಡುಬಿದಿರೆ) 11 ಕಾಲೇಜುಗಳಲ್ಲಿ 2,020 ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿದ್ದು, ಯಾವುದೇ ಪಾಸಿಟಿವ್ ಬಂದಿಲ್ಲ. ಒಟ್ಟು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 70 ಕಾಲೇಜುಗಳ 5,069 ವಿದ್ಯಾರ್ಥಿಗಳ ತಪಾಸಣೆ ನಡೆಸಲಾಗಿದ್ದು, 14 ಮಂದಿಯಲ್ಲಿ ಪಾಸಿಟಿವ್ ಬಂದಿದೆ.
ಕಮಿಷನರೇಟ್ ವ್ಯಾಪ್ತಿಯ ಕೆಲವೊಂದು ಕಾಲೇಜುಗಳಲ್ಲಿ ಪೊಲೀಸರು ನೇರವಾಗಿ ಡ್ರಗ್ಸ್ ತಪಾಸಣೆ ನಡೆಸುವುದಕ್ಕೆ ಕಾಲೇಜು ಆಡಳಿತ ಮಂಡಳಿಯೇ ಆಕ್ಷೇಪಿಸಿದ್ದು ಸಹಕಾರ ನೀಡಲಿಲ್ಲ. ಇಂತಹ ಕಡೆಗಳಲ್ಲಿ ಕ್ಯಾಂಪಸ್ ಸುತ್ತಮುತ್ತ ಸ್ವತಃ ಪೊಲೀಸರೇ ಗಸ್ತು ಮಾಡಿ ವಿದ್ಯಾರ್ಥಿಗಳ ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ಕೆಲವೊಂದು ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ಬಂದಿದ್ದು, ಆ ವಿದ್ಯಾರ್ಥಿಗಳ ವರದಿಯನ್ನು ಕಾಲೇಜು ಆಡಳಿತ ಮಂಡಳಿ ಗಮನಕ್ಕೆ ತರಲಾಗಿದೆ. ಇದರಿಂದ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ ಬಳಿಕ ಕಾಲೇಜು ಕ್ಯಾಂಪಸ್ನಲ್ಲಿ ರಾಂಡಮ್ ತಪಾಸಣೆಗೆ ಅನುಮತಿ ನೀಡಿದೆ.
ಕಾಲೇಜು ಸುತ್ತಮುತ್ತ ಪೊಲೀಸರು ಗಸ್ತು ನಡೆಸಿ ತಪಾಸಣೆ ನಡೆಸಿದ ಸಂದರ್ಭ ಮಂಗಳೂರು ದಕ್ಷಿಣ ಉಪ ವಿಭಾಗದಲ್ಲಿ ಮೂರು ಕಾಲೇಜುಗಳ 30 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಿದ್ದು ಯಾವುದೇ ಪಾಸಿಟಿವ್ ಇರಲಿಲ್ಲ, ಮಂಗಳೂರು ಕೇಂದ್ರ ಉಪ ವಿಭಾಗದಲ್ಲಿ 18 ಕಾಲೇಜಿನ 88 ವಿದ್ಯಾರ್ಥಿಗಳನ್ನು ತಪಾಸಣೆ ನಡೆಸಲಾಗಿದ್ದು 4 ಮಂದಿಗೆ ಪಾಸಿಟಿವ್ ಬಂದಿದೆ. ಮಂಗಳೂರು ಉತ್ತರ ಉಪ ವಿಭಾಗದಲ್ಲಿ 7 ಕಾಲೇಜುಗಳ 139 ವಿದ್ಯಾರ್ಥಿಗಳ ತಪಾಸಣೆ ನಡೆಸಿದ್ದು, ಇಬ್ಬರಿಗೆ ಪಾಸಿಟಿವ್ ಬಂದಿದೆ.
ವಿದ್ಯಾರ್ಥಿಗಳ ಪ್ರವೇಶ ವೇಳೆಯೇ ಡ್ರಗ್ಸ್ ಚೆಕ್ ಮಾಡಿ
ಮಂಗಳೂರು ನಗರದ ಕಾಲೇಜು ಕ್ಯಾಂಪಸ್ಗಳಲ್ಲಿ ಈಗಾಗಲೇ ಮಾದಕ ವಸ್ತು ವಿರುದ್ಧ ಕಾರ್ಯಾಚರಣೆ ನಡೆಯುತ್ತಿದ್ದು, ಕಾಲೇಜಿಗೆ ವಿದ್ಯಾರ್ಥಿಗಳ ಪ್ರವೇಶ ವೇಳೆಯೇ ಮಾದಕ ವಸ್ತು ತಪಾಸಣೆ ನಡೆಸಿ ಸೀಟು ನೀಡಿದರೆ ಉತ್ತಮ ಮತ್ತು ಒಳ್ಳೆಯ ಸಂದೇಶ ರವಾನೆಯಾಗುತ್ತದೆ. ಎಲ್ಲ ಕಡೆಯೂ ಇದೇ ಮಾದರಿಯನ್ನು ಅನುಸರಿಸಿದರೆ, ಡ್ರಗ್ಸ್ ಮುಕ್ತ ಮಾಡಲು ಅನುಕೂಲ ಎನ್ನುತ್ತಾರೆ, ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ. ಜನವರಿಯಿಂದ 2ನೇ ಹಂತದ ತಪಾಸಣೆ ನಡೆಸಲಾಗುವುದು. ಮುಂದಿನ ಹಂತದಲ್ಲಿ ಹಿಂದೆ ಪಾಸಿಟಿವ್ ಬಂದ ವಿದ್ಯಾರ್ಥಿಗಳನ್ನು ಮಾತ್ರ 2ನೇ ಬಾರಿ ತಪಾಸಣೆ ನಡೆಸಲಿದ್ದು ಉಳಿದಂತೆ ಕ್ಯಾಂಪಸ್ನ ಹೊಸ ವಿದ್ಯಾರ್ಥಿಗಳನ್ನು ತಪಾಸಣೆ ಒಪಡಿಸಲಾಗುವುದು ಎಂದು ಸುಧೀರ್ ರೆಡ್ಡಿ ತಿಳಿಸಿದ್ದಾರೆ.
A sustained anti-drug awareness and enforcement drive across college campuses in Mangaluru has uncovered 20 drug-positive students over the past six months. Police have conducted checks in 77 schools and colleges under the Mangaluru City Police Commissionerate as part of the crackdown.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm