New year 2026, Mangalore Rules: ಹೊಸ ವರ್ಷಾಚರಣೆಗೆ ಷರತ್ತಿನ ಮಾರ್ಗಸೂಚಿ ; ಡಿಜೆ ಬಳಕೆ ಇಲ್ಲ, ಕುಡಿದು ವಾಹನ ಚಾಲನೆ ಪತ್ತೆಗೆ ಕಾರ್ಯಪಡೆ, ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ್ಯ, ಪಟಾಕಿ ನಿಷೇಧ 

17-12-25 08:19 pm       Mangalore Correspondent   ಕರಾವಳಿ

ಹೊಸ ವರ್ಷಾಚರಣೆಗೆ ಸಂಸರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆಗೆ ಪೂರ್ವ ಅನುಮತಿ ಪಡೆಯಬೇಕು, ನಿರ್ದಿಷ್ಟಪಡಿಸಿದ ಧ್ವನಿವರ್ಧಕ ಬಿಟ್ಟರೆ ಬೇರಾವುದೇ ರೀತಿಯ ಡಿಜೆ ಬಳಕೆಯನ್ನು ನಿಷೇಧ ಮಾಡಲಾಗಿದೆ. 

ಮಂಗಳೂರು, ಡಿ.17 : ಹೊಸ ವರ್ಷಾಚರಣೆಗೆ ಸಂಸರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೊಸ ಮಾರ್ಗಸೂಚಿಗಳನ್ನು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೊರಡಿಸಿದ್ದಾರೆ. ಹೊಸ ವರ್ಷಾಚರಣೆಗೆ ಪೂರ್ವ ಅನುಮತಿ ಪಡೆಯಬೇಕು, ನಿರ್ದಿಷ್ಟಪಡಿಸಿದ ಧ್ವನಿವರ್ಧಕ ಬಿಟ್ಟರೆ ಬೇರಾವುದೇ ರೀತಿಯ ಡಿಜೆ ಬಳಕೆಯನ್ನು ನಿಷೇಧ ಮಾಡಲಾಗಿದೆ. 

ಹೊಸ ವರ್ಷಾಚರಣೆ ಆಯೋಜಿಸುವ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಹಾಗೂ ಇತರ ಸಂಸ್ಥೆಗಳು ಸಹಾಯಕ ಆಯುಕ್ತರ ಕಚೇರಿಯಿಂದ ಪೂರ್ವಾನುಮತಿ ಪಡೆಯಬೇಕು. ಕಾರ್ಯಕ್ರಮ ರಾತ್ರಿ 12.30ರ ಒಳಗೆ ಪೂರ್ಣಗೊಳ್ಳಬೇಕು. ಅದಕ್ಕಾಗಿ ಡಿ. 23ರಂದು ಸಂಜೆ 5 ಗಂಟೆಯ ಒಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆಯಬೇಕು ಎಂದು ಸುಧೀರ್ ಕುಮಾರ್ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.

New anti-drug initiative gains ground in Karnataka's Mangaluru

ಪೂರ್ವ ಅನುಮತಿ ಇಲ್ಲದ ಹೊಸ ವರ್ಷದ ಆಚರಣೆಗಳಿಗೆ ಅನುಮತಿ ನೀಡಲಾಗುವುದಿಲ್ಲ. ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಹೊಸ ವರ್ಷದ ಕಾರ್ಯಕ್ರಮವು ರಾತ್ರಿ 12:30 ಒಳಗಾಗಿ ಪೂರ್ಣಗೊಳ್ಳಬೇಕು. ಬಳಿಕ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಮತಿ ಇರುವುದಿಲ್ಲ.

Powers and functions of the Supreme Court - iPleaders

ಧ್ವನಿಮುದ್ರಣ ವ್ಯವಸ್ಥೆಗಳು, ಲೌಡ್ ಸ್ಪೀಕರ್‌ಗಳನ್ನು ಬಳಸಲು ಸಂಬಂಧಪಟ್ಟ ಪ್ರಾಧಿಕಾರದಿಂದ ಪೂರ್ವ ಅನುಮತಿಯನ್ನು ಪಡೆಯತಕ್ಕದ್ದು. ಧ್ವನಿಯ ಮಟ್ಟವು ಶಬ್ದ ಮಾಲಿನ್ಯ ನಿಯಮಗಳು 2000 ಮತ್ತು ಸುಪ್ರೀಂ ಕೋರ್ಟ್‌ ನಿರ್ದೇಶನಗಳನ್ನು ಅನುಸರಿಸಬೇಕು. ಡಿಜೆ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 
ಹೊಸ ವರ್ಷಾಚರಣೆ ಕಾರ್ಯಕ್ರಮಗಳಲ್ಲಿ ಯಾವುದೇ ಕಾರಣಕ್ಕೂ ನಿಷೇದಿತ ಮಾದಕ ವಸ್ತುಗಳ ಸಂಗ್ರಹಣೆ ಮತ್ತು ಸೇವನೆಯನ್ನು ಮಾಡುವುದನ್ನು ಸಂಪೂರ್ಣ ನಿಷೇದಿಸಲಾಗಿದೆ.

  • ಹೊಸವರ್ಷ ಸಂಭ್ರಮಾಚರಣೆಯ ನೆಪದಲ್ಲಿ ಅಶ್ಲೀಲ ನೃತ್ಯಗಳು, ಅರೇನಗ್ನ ಪ್ರದರ್ಶನಗಳು, ಜೂಜು ಹಾಗೂ ಇತರ ಅನೈತಿಕ ಚಟುವಟಿಕೆಗಳನ್ನು ನಡೆಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ಮದ್ಯ ಮಾರಾಟ ಮತ್ತು ವಿತರಣೆಗೆ ಸ್ಥಳೀಯ ಅಬಕಾರಿ ಇಲಾಖೆಯಿಂದ (Excise Department) ಲಿಖಿತ ಅನುಮತಿ ಕಡ್ಡಾಯವಾಗಿ ಪಡೆದುಕೊಂಡಿರತಕ್ಕದ್ದು.
  • ಆಯೋಜಕರು ಸಂಬಂಧಿತ ಇಲಾಖೆಗಳಿಂದ ಪಡೆದ ಲೈಸನ್ಸ್ ಮತ್ತು ಅನುಮತಿ ಪ್ರಕಾರ ನಿರ್ಧರಿತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. 
  • ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣಗಳು, ಉದ್ಯಾನಗಳು, ಕ್ರೀಡಾಂಗಣಗಳು, ರೈಲ್ವೆ ನಿಲ್ದಾಣಗಳು ಮತ್ತು ಇತರ ಸಾರ್ವಜನಿಕ ಪ್ರದೇಶಗಳಲ್ಲಿ ಧೂಮಪಾನ ಮತ್ತು ಮದ್ಯಪಾನ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
  • ವಿದ್ಯಾರ್ಥಿಗಳು ಅಥವಾ ಯುವಕರು ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯ ವರ್ತಿಸಿ ಕಿಡಿಗೇಡಿತನವನ್ನು ಪ್ರದರ್ಶನ ಮಾಡಿದಲ್ಲಿ ನಿರ್ದಾಕ್ಷಿಣ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ.

ಆಯೋಜಕರು ಅಗತ್ಯವಿರುವ ಸುರಕ್ಷತಾ ಕ್ರಮಗಳೊಂದಿಗೆ ಅಗ್ನಿಶಾಮಕ ಸಾಧನಗಳನ್ನು, ತುರ್ತು ವೈದ್ಯಕೀಯ ವಾಹನಗಳನ್ನು ಮತ್ತು ಇತರ ಭದ್ರತಾ ಕ್ರಮಗಳನ್ನು ಸಂಯೋಜಿಸಬೇಕು. ಆಯೋಜಕರು ಯಾವುದೇ ಅನಾಹುತದ ತಡೆಗಾಗಿ ಪೂರಕ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದ್ದು, ಸಾರ್ವಜನಿಕ ರಸ್ತೆಗಳಲ್ಲಿ ಸುಗಮ ಸಂಚಾರಕ್ಕೆ ಅಡ್ಡಿಯಾಗದಂತೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಗಳನ್ನು ಕಲ್ಪಿಸತಕ್ಕದ್ದು. 

ಹೊಸ ವರ್ಷಾಚರಣೆಯನ್ನು ನಡೆಸುವ ಹೋಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಕಾರ್ಯಕ್ರಮಗಳಲ್ಲಿ ಮದ್ಯ ವಿತರಣೆಯಂತಹ ವ್ಯವಸ್ಥೆಗೊಳಿಸಿದ್ದರೆ, 18 ವರ್ಷದ ಕೆಳಗಿನ ಅಪ್ರಾಪ್ತರಿಗೆ ಅಂತಹ ಕಾರ್ಯಕ್ರಮಗಳಿಗೆ ಪ್ರವೇಶ ನಿರ್ಬಂಧಿಸಬೇಕು.   ಸಂಭ್ರಮಾಚರಣೆ ಹೆಸರಿನಲ್ಲಿ ಮಹಿಳೆಯರು, ಹೆಣ್ಣುಮಕ್ಕಳನ್ನು ಚುಡಾಯಿಸುವ, ಕಿರುಕುಳ ನೀಡುವ ಹಿಂಸಾಚಾರ ಅಥವಾ ಅಶ್ಲೀಲ ಚಟುವಟಿಕೆಗಳನ್ನು ತಡೆಹಿಡಿಯಲು ವಿಶೇಷ ಕಾರ್ಯಪಡೆಗಳು ನಿಯೋಜಿಸಲಾಗುತ್ತವೆ.

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ. ಸದ್ರಿ ಕಾರ್ಯಪಡೆ ಮಂಗಳೂರು ನಗರದ ಎಲ್ಲಾ ಪ್ರದೇಶಗಳಲ್ಲಿ ಕಾರ್ಯಾಚರಣೆಯಲ್ಲಿರುತ್ತದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಡ್ರಂಕ್ ಅಂಡ್ ಡ್ರೈವ್ ರೀತಿಯ ಕಾನೂನು ಕ್ರಮ ಕೈಗೊಂಡು ವಾಹನಗಳನ್ನು ಮುಟ್ಟುಗೋಲು ಹಾಕಲಾಗುವುದು. 

ಸ್ಟಂಟ್ ಚಟುವಟಿಕೆಗಳು, ವೀಲಿಂಗ್, ಡ್ರಾಗ್ ರೇಸಿಂಗ್, ವೇಗದ ಚಾಲನೆಯು ಮತ್ತು ಕರ್ಕಶ ಶಬ್ದ ಉತ್ಪಾದಿಸುವ ಕಾರ್ಯಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ಘಟನೆಗಳನ್ನು ತಡೆಹಿಡಿಯಲು ವಿಶೇಷ ತಂಡಗಳು ನಿಯೋಜಿಸಲಾಗುತ್ತವೆ. 

ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ಸಮುದ್ರ ಬದಿಗಳಲ್ಲಿ ಮದ್ಯಪಾನ ಸೇವಿಸುವುದು, ಅಶ್ಲೀಲ ವರ್ತನೆಗಳು, ಇತರ ಅಶ್ಲೀಲ ಪ್ರದರ್ಶನಗಳು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಹೊಸ ವರ್ಷಾಚರಣೆಯ ನೆಪದಲ್ಲಿ ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ರೀತಿಯಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ನಿಷೇಧಿಸಲಾಗಿದೆ.

Ahead of New Year celebrations, Mangaluru Police Commissioner Sudheer Kumar Reddy has issued strict guidelines to maintain law and order in the city. Organisers must obtain prior permission for any New Year event, and the use of DJ systems has been completely banned, except for permitted sound systems within prescribed noise limits.