ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ; ಸದನದಲ್ಲಿ ದನಿಯೆತ್ತಿದ ಶಾಸಕ ವೇದವ್ಯಾಸ ಕಾಮತ್ 

19-12-25 08:22 pm       Mangalore Correspondent   ಕರಾವಳಿ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇರ ಪಾವತಿ ಅಥವಾ ಖಾಯಂಗೊಳಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಮಂಗಳೂರು, ಡಿ.19 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಲವಾರು ವರ್ಷಗಳಿಂದ ಒಳಚರಂಡಿ, ಘನತ್ಯಾಜ್ಯ, ಕುಡಿಯುವ ನೀರು ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಅನೇಕರ ಬದುಕಿಗೆ ಸೇವಾ ಭದ್ರತೆಯೇ ಇಲ್ಲವಾಗಿದ್ದು ಅವರೆಲ್ಲರನ್ನು ನೇಮಕಾತಿ / ನೇರ ಪಾವತಿ ಅಥವಾ ಖಾಯಂಗೊಳಿಸಬೇಕು ಎಂದು ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಈ ವರ್ಗದ ಎಲ್ಲಾ ಕಾರ್ಮಿಕರು ಬಹಳ ಕಷ್ಟಪಟ್ಟು ದುಡಿಯುವವರು. ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಇದರಲ್ಲಿ ಹೆಚ್ಚಾಗಿದ್ದು ನಗರದ ಸ್ವಚ್ಛತೆಯ ಹಿಂದೆ ಅವರ ಅಪಾರ ಶ್ರಮವಿದೆ. ಒಂದು ದಿನ ಅವರೆಲ್ಲರೂ ಕರ್ತವ್ಯಕ್ಕೆ ಗೈರಾದರೆ ನಗರದ ಸ್ವಚ್ಛತೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗುತ್ತದೆ. ಇವರಿಗೆ ಯಾವುದೇ ಪಿಂಚಣಿ ಇಲ್ಲ. ಹೀಗಾಗಿ ಭವಿಷ್ಯದಲ್ಲಿ ಇವರು ತೀವ್ರ ಸಂಕಷ್ಟ ಎದುರಿಸಬೇಕಾದ ಪರಿಸ್ಥಿತಿ ಬರುತ್ತದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆದಾಗೆಲ್ಲ ಆ ಪ್ರಸ್ತಾವನೆ ನಮ್ಮ ಮುಂದಿದೆ ಎಂದು ಹೇಳುತ್ತಾ ಇದೀಗ ಎರಡೂವರೆ ಎರಡು ವರ್ಷ ಕಳೆದಿವೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ. 

ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಭಗವಾನ್ ದಾಸ್ ಮತ್ತು ಇತರರು ಪ್ರಕರಣದಲ್ಲಿ ಉಚ್ಚ ನ್ಯಾಯಾಲಯ ನೀಡಿರುವ ಆದೇಶವನ್ನು ಸರ್ಕಾರ ಪಾಲಿಸಿಲ್ಲ ಎಂದು ಶಾಸಕ ಕಾಮತ್ ಸದನದ ಗಮನ ಸೆಳೆದರು.

ಈ ಕಾರ್ಮಿಕರು ಮಂಗಳೂರಿನಲ್ಲಿ ಎರಡೆರಡು ಬಾರಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ನಾವು ಅವರ ನ್ಯಾಯಯುತ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಹಾಗೂ ಇಲಾಖೆಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದೇವೆ. ಸರ್ಕಾರ ಇನ್ನೂ ಸಹ ನಿರ್ಲಕ್ಷ್ಯ ತೋರಿದರೆ ಮುಂದಿನ ದಿನಗಳಲ್ಲಿ ನಾವೂ ಸಹ ಅವರೊಂದಿಗೆ ಪ್ರತಿಭಟನೆಯಲ್ಲಿ ಸೇರಿಕೊಳ್ಳಬೇಕಾಗುತ್ತದೆ. ಕಸ ಸಾಗಿಸುವ ವಾಹನಗಳಿಗೆ ವಿಮೆಯನ್ನೂ ನವೀಕರಣಗೊಳಿಸದೇ ಬೇಜವಾಬ್ದಾರಿ ತೋರಲಾಗಿದ್ದು ಒಂದು ವೇಳೆ ಯಾವುದೇ ದುರ್ಘಟನೆ ಸಂಭವಿಸಿ ಕಾರ್ಮಿಕರಿಗೆ ತೊಂದರೆಯಾದರೆ ಯಾರು ಹೊಣೆ? ಸರ್ಕಾರದ ಬಳಿ ವಾಹನ ವಿಮೆಗೂ ದುಡ್ಡಿಲ್ಲವೇ ಎಂದು ಶಾಸಕರು ಪ್ರಶ್ನಿಸಿದರು.

MLA Vedavyas Kamath strongly urged the Karnataka government to regularise civic workers of the Mangaluru City Corporation who have been working for many years on an outsourcing basis in departments such as underground drainage, solid waste management, and drinking water supply.