ಬ್ರೇಕಿಂಗ್ ನ್ಯೂಸ್
22-12-25 06:36 pm Mangalore Correspondent ಕರಾವಳಿ
ಮಂಗಳೂರು, ಡಿ.22 : ಕೇಪು ಉಳ್ಳಾಲ್ತಿ ಜಾತ್ರೆಗೆ 800 ವರ್ಷಗಳಿಗೂ ಮಿಕ್ಕಿದ ಇತಿಹಾಸವಿದ್ದು, ಅಲ್ಲಿ ಜೂಜು ರಹಿತ ಕೋಳಿ ಅಂಕ ಹಿಂದಿನಿಂದಲೂ ನಡೆಯುತ್ತ ಬಂದಿದೆ. ಅದು ಅಲ್ಲಿನ ಜನರ, ಭಕ್ತರ ಭಾವನೆಗೆ ಸಂಬಂಧಿಸಿದ ಸಂಪ್ರದಾಯ. ಆದರೆ ಕಾಂಗ್ರೆಸ್ ಸರ್ಕಾರ ಕಾನೂನು ಕಟ್ಟಳೆಯನ್ನು ಮುಂದಿಟ್ಟು ಹಿಂದು ಧಾರ್ಮಿಕ ಕ್ಷೇತ್ರಗಳಿಗೆ ಪೊಲೀಸರನ್ನು ನುಗ್ಗಿಸಿ ಕರಾವಳಿ ಜನರ ಸಂಸ್ಕೃತಿಗೆ, ಭಕ್ತರ ಭಾವನೆಗೆ ಘಾಸಿ ತರುವುದನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂದು ಕಾನೂನು ಕ್ರಮ ಜರುಗಿಸುವುದಕ್ಕೆ ನಮ್ಮ ಆಕ್ಷೇಪ ಇಲ್ಲ, ಆದರೆ ಕೇಪು ಜಾತ್ರೆಯಲ್ಲಿ ಜೂಜು ಇಲ್ಲದ ಕೋಳಿ ಅಂಕ ನಡೆಯುತ್ತದೆ. ಭಕ್ತರು ಭಕ್ತಿಯ ಭಾವನೆಯೊಂದಿಗೆ ಕೋಳಿ ಅಂಕದಲ್ಲಿ ಪಾಲ್ಗೊಳ್ಳುತ್ತಾರೆ. ಆದರೆ ಅಲ್ಲಿಗೆ ಪೊಲೀಸರು ಬೆನ್ನು ಬೆನ್ನಿಗೆ ದಾಳಿ ಮಾಡಿ, ಅಲ್ಲಿ ಹೋದ ಬಿಜೆಪಿ ನಾಯಕರ ಮೇಲೂ ಕೇಸು ಹಾಕಿದ್ದಾರೆ. ಒಂದು ಕಡೆ ಜಿಲ್ಲಾ ಉಸ್ತುವಾರಿ ಸಚಿವರೇ ಕೆಡಿಪಿ ಸಭೆಯಲ್ಲಿ ಕಂಬಳ, ಕೋಳಿ ಅಂಕಕ್ಕೆ ತೊಂದರೆ ಮಾಡಬೇಡಿ ಎಂದು ಪೊಲೀಸರಿಗೆ ಹೇಳುತ್ತಾರೆ. ಇಲ್ಲಿ ನೋಡಿದರೆ ಉಸ್ತುವಾರಿ ಸಚಿವರ ಮಾತಿಗೇ ಬೆಲೆ ಇಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದರು.

ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಕೋಳಿ ಅಂಕಕ್ಕೆ ಕ್ರೌರ್ಯದ ನೆಪದಲ್ಲಿ ಕೇಸು ಹಾಕೋದಾದರೆ ಎಷ್ಟು ಕಡೆ ದನ, ಕುರಿಗಳನ್ನು ಅಕ್ರಮವಾಗಿ ಕಡಿಯುವುದಿಲ್ಲ. ಹಬ್ಬದ ಸಂದರ್ಭದಲ್ಲಿ ಸಿಕ್ಕ ಸಿಕ್ಕಲ್ಲಿ ಪ್ರಾಣಿ ವಧೆಯಾಗುತ್ತದೆ. ಪೊಲೀಸರು ಅದಕ್ಕೂ ಕೇಸು ಹಾಕಬೇಕಲ್ವಾ.. ಪ್ರಾಣಿ ಹಿಂಸೆಯೆಂದು ಕಾನೂನು ಕ್ರಮ ಜರುಗಿಸಿದರೆ ಕೋಳಿ, ಮಾಂಸ ತಿನ್ನುವುದೇ ಕಷ್ಟವಾಗಬಹುದು ಎಂದರು. ಆದರೆ ಇಲ್ಲಿ ಕರಾವಳಿಯ ಸಂಸ್ಕೃತಿಯ ಮೇಲೆ ದಾಳಿಯಾಗುತ್ತಿದೆ, ನಾವು ಇದನ್ನು ವಿರೋಧಿಸುತ್ತೇವೆ ಎಂದರು.
ಪೊಲೀಸರು ಕಾನೂನು ಪ್ರಕಾರ ಕ್ರಮ ಜರುಗಿಸಿದ್ದಾರಲ್ವಾ, ಪ್ರಾಣಿ ಹಿಂಸೆ ಕಾಯ್ದೆ ಇದೆಯಲ್ವಾ, ಕಾಯ್ದೆಯಲ್ಲೇ ಲೋಪ ಇದೆ ಎಂದಾಯ್ತಲ್ಲಾ ಎಂದು ಕೇಳಿದ ಪ್ರಶ್ನೆಗೆ, ಕಾಯ್ದೆಯಲ್ಲಿ ಲೋಪ ಇದ್ದರೆ ಅದನ್ನು ಪ್ರಶ್ನೆ ಮಾಡುತ್ತೇವೆ, ಆದರೆ ಸ್ವಾತಂತ್ರ್ಯ ಸಿಕ್ಕ 70 ವರ್ಷಗಳಲ್ಲಿ ಈ ರೀತಿ ಕೇಸು ಹಾಕಿದ್ದು ಇಲ್ಲ. ಭಕ್ತರ ಭಾವನೆಗೆ ಘಾಸಿ ಮಾಡಿದ ಪ್ರಸಂಗ ಆಗಿಲ್ಲ. ಈಗ ಯಾಕೆ ಆಡಳಿತ ನಡೆಸೋರು ಹಿಂದುಗಳ ಮೇಲೆ ಸವಾರಿ ಮಾಡುತ್ತಿದ್ದಾರೆ ಎಂದು ಶಾಸಕ ಭರತ್ ಶೆಟ್ಟಿ ಪ್ರಶ್ನಿಸಿದರು.
ಸುದ್ದಿಗೋಷ್ಟಿಯಲ್ಲಿ ಎಂಎಲ್ಸಿ ಕಿಶೋರ್ ಕುಮಾರ್, ಪ್ರೇಮಾನಂದ ಶೆಟ್ಟಿ, ವಸಂತ ಪೂಜಾರಿ, ಅರುಣ್ ಶೇಟ್ ಇದ್ದರು.
The BJP has strongly condemned the police action at the historic Kepu Ullalthi Jatre, alleging that the Congress government is hurting the cultural sentiments of Hindus by disrupting the traditional, non-gambling cock ritual that has been practiced for over 800 years.
22-12-25 06:29 pm
HK News Desk
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
22-12-25 06:32 pm
HK News Desk
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
22-12-25 06:36 pm
Mangalore Correspondent
ಕೋಳಿ ಅಂಕದಲ್ಲಿ ಪೆಟ್ಟು ಕೊಡಲು ಇವರ ಅಪ್ಪನ ಜಾಗವಾ?...
22-12-25 12:26 pm
ಕೇಪು ಜಾತ್ರೆ ಕೋಳಿ ಅಂಕಕ್ಕೆ ಎರಡನೇ ದಿನವೂ ಪೊಲೀಸ್ ದ...
21-12-25 11:04 pm
ಕೇಪು ಜಾತ್ರೆ ಕೋಳಿ ಅಂಕ ಮಾಡಿಸಿದ ಶಾಸಕರ ವಿರುದ್ಧ ಕೇ...
20-12-25 10:53 pm
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
22-12-25 04:00 pm
Mangalore Correspondent
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm
Cyber Fraud: ಸೈಬರ್ ವಂಚಕರಿಗೆ 22 ಲಕ್ಷ ವರ್ಗಾವಣೆ...
21-12-25 08:55 pm