ಬ್ರೇಕಿಂಗ್ ನ್ಯೂಸ್

Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಲೈಂಗಿಕ ದೌರ್ಜನ್ಯ ; ಬೇಕಲ ಶಿಕ್ಷಣಾಧಿಕಾರಿ, ರೈಲ್ವೇ ಉದ್ಯೋಗಿ, ಜಮಾತೆ ಇಸ್ಲಾಮಿ, ಲೀಗ್ ಕಾರ್ಯಕರ್ತರು ಸೇರಿ ಹತ್ತು ಮಂದಿ ಪೊಲೀಸ್ ಬಲೆಗೆ, ಕಾಸರಗೋಡಿನಲ್ಲಿ ಸಂಚಲನ ಮೂಡಿಸಿದ ಪ್ರಕರಣ     |    ಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆಬಂಗ್ಲೆಗುಡ್ಡೆ ಕಾಡಿನಲ್ಲಿ 9 ಕಡೆ ಮನುಷ್ಯನ ಎಲುಬು, ಬುರುಡೆಗಳು ಪತ್ತೆ, ಧರ್ಮಸ್ಥಳ ಪ್ರಕರಣಕ್ಕೆ ಮತ್ತೆ ತಿರುವು, ಎಸ್ಐಟಿ ಶೋಧ ಕಾರ್ಯ ಮುಂದುವರಿಕೆ    |    Mahesh Shetty Timarodi, Arms, FIR: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿಯಲ್ಲಿ ಮತ್ತೊಂದು ಎಫ್ಐಆರ್, ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿ ಕೇಸು ದಾಖಲು    |   

ಗೃಹ ಸಚಿವ ಬೊಮ್ಮಯಿ ಜಸ್ಟ್ ಮಿಸ್ !

11-08-20 08:22 am       Udupi Reporter   ಕರಾವಳಿ

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ.

ಉಡುಪಿ, ಆಗಸ್ಟ್ 10: ಕಡಲ ಕೊರೆತ ಪ್ರದೇಶಗಳ ವೀಕ್ಷಣೆಗೆ ತೆರಳಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಯಿ ಸಮುದ್ರ ಪಾಲಾಗುವುದರಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಘಟನೆ ಉಡುಪಿಯ ಪಡುಬಿದ್ರೆ ಕಡಲ ಕಿನಾರೆಯಲ್ಲಿ ನಡೆದಿದೆ.

ಉಡುಪಿಯಲ್ಲಿ ಕಳೆದ ಕೆಲದಿನಗಳಿಂದ ಧಾರಾಕಾರ ಮಳೆಯಾಗುತ್ತಿದ್ದು ಇಲ್ಲಿಯ ಪರಿಸ್ಥಿತಿ ಪರಿಶೀಲಿಸಲು ಇಂದು ಗೃಹ ಸಚಿವ ಹಾಗು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿ ಉಡುಪಿಗೆ ಬೇಟಿ ನೀಡಿ ನೆರೆ ಪರಿಶೀಲನೆ  ಪ್ರವಾಸ ಕೈಗೊಂಡಿದ್ದರು.

ಪಡುಬಿದ್ರೆ ಕಡಲತೀರಕ್ಕೆ ಭೇಟಿ ನೀಡಿದ ಬೊಮ್ಮಾಯಿ ಬೀಚ್ ನ ಕಡಲ್ಕೊರೆತ ಪ್ರದೇಶ ಗಳನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸಮುದ್ರಕ್ಕಿಳಿದ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭಾರೀ ಅಲೆಯೊಂದು ಅಪ್ಪಳಿಸಿದೆ. ಆದರೆ ಅವರೊಂದಿಗಿದ್ದ ಉಡುಪಿ ಎಸ್ ಪಿ ವಿಷ್ಣುವರ್ಧನ್  ಹಾಗು ಬಿಜೆಪಿ ಮುಖಂಡರು ಸಚಿವರನ್ನು ರಕ್ಷಿಸಿದರು.ಆದರೆ ಸಚಿವರ ಚಪ್ಪಲಿ ಮಾತ್ರ ಸಮುದ್ರ ಪಾಲಾಗಿದೆ.