ಬ್ರೇಕಿಂಗ್ ನ್ಯೂಸ್
08-01-26 08:48 pm Mangalore Correspondent ಕರಾವಳಿ
ಮಂಗಳೂರು, ಜ.8 : ಶ್ರೀಮತ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮಶತಾಬ್ದಿಯ ಮಂಗಳೋತ್ಸವ ಕಾರ್ಯಕ್ರಮವನ್ನು ಕಾಶೀ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಮಂಗಳೂರು ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಇದರ ಪ್ರಯುಕ್ತ ಜ.11 ರಂದು ಸಂಜೆ ಕಾಶೀಮಠ ಕೊಂಚಾಡಿಯಲ್ಲಿರುವ ಶಾಖಾಮಠದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಜನಾ ಸಂಕೀರ್ತನಾ ವ್ಯಾಸಧ್ವಜ ಮತ್ತು ಸ್ವಾಮೀಜಿಯವರ ಪಾದುಕಾ ದಿಗ್ವಿಜಯ ಪಾದಯಾತ್ರೆ ನಡೆಯಲಿದೆ.
ಈ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಕೊಂಚಾಡಿಯಿಂದ ಪಾದಯಾತ್ರೆ ಮೇರಿಹಿಲ್, ಯೆಯ್ಯಾಡಿ, ಕೆಪಿಟಿ, ಬಿಜೈ, ಕೆಎಸ್ ಆರ್ ಟಿಸಿ, ಲಾಲ್ ಭಾಗ್, ಎಂ.ಜಿ.ರಸ್ತೆ, ಪಿ.ವಿ.ಎಸ್ ಜಂಕ್ಷನ್ ನಿಂದ ಬಲಕ್ಕೆ ತಿರುಗಿ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ವೃತ್ತದ ಮೂಲಕ ಕೆನರಾ ಹೈಸ್ಕೂಲ್ ನಲ್ಲಿ ಸೇರಲಿದೆ. ಅಲ್ಲಿ ಹತ್ತು ಸಾವಿರ ಮಂದಿಗೆ ಫಲಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಪಾದಯಾತ್ರೆಯಲ್ಲಿ ವಿವಿಧ ಭಜನಾ ಮಂಡಳಿಗಳು ಪಾಲ್ಗೊಳ್ಳಲಿವೆ. ಚೆಂಡೆ, ಬ್ಯಾಂಡ್ ಸೆಟ್, ಮಕ್ಕಳ ಟ್ಯಾಬ್ಲೋಗಳು, ವೇದಘೋಷ ಸಹಿತ ಸ್ವಾಮೀಜಿಯವರ ಭಾವಚಿತ್ರ- ಪಾದುಕೆಯಿರುವ ಟ್ಯಾಬ್ಲೋ ಸಹಿತ ವಿವಿಧ ಕಲಾಪ್ರಕಾರಗಳು ಇರಲಿವೆ.

ಕಾಶೀ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿ ನೇತೃತ್ವದಲ್ಲಿ ಸ್ವದೇಶಿ ಸ್ಟೋರ್ ಬಳಿಯಿಂದ ಸ್ವರ್ಣ ಲಾಲಕಿಯಲ್ಲಿ ದೇವರೊಂದಿಗೆ ಪಾದಯಾತ್ರೆ ವೆಂಕಟರಮಣ ದೇವಸ್ಥಾನ ತಲುಪಲಿದೆ. ರಾತ್ರಿ 8.30 ರಿಂದ ಮಂಗಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಸಂಯಮೀಂದ್ರ ತೀರ್ಥ ಸ್ವಾಮೀಜಿ ಆರ್ಶೀವಚನ ನೀಡಲಿದ್ದಾರೆ. ಸಾಧಕರನ್ನು ಸ್ವಾಮೀಜಿ ಗೌರವಿಸಲಿದ್ದಾರೆ.
ರಾತ್ರಿ ಭೋಜನ ಪ್ರಸಾದ ವ್ಯವಸ್ಥೆ
ಭಕ್ತರಿಗೆ ನಗರದ ಅಲೋಶಿಯಸ್ ಕಾಲೇಜು ಮೈದಾನ, ಡಿಸಿಸಿ ಬ್ಯಾಂಕ್ ಏರಿಯಾ ಸೇರಿದಂತೆ ವಿವಿಧ ಕಡೆಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ರಾತ್ರಿ ಊಟದ ವ್ಯವಸ್ಥೆಯನ್ನು ಮಾಡಲಾಗಿದ್ದು, ಮಹಾಮಾಯಾ ದೇವಸ್ಥಾನದ ಬಳಿ, ಉಮಾಮಹೇಶ್ವರ ದೇವಸ್ಥಾನದ ಬಳಿ, ಭವಂತಿ ಸ್ಟ್ರೀಟ್ ನಲ್ಲಿರುವ ಹಿಂದಿನ ನ್ಯೂ ಮಂಗಳೂರು ಹೆಲ್ತ್ ಕೇರ್ ಸೆಂಟರ್ ನಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ.
ಸುಧೀಂದ್ರ ತೀರ್ಥ ಸ್ವಾಮೀಜಿಯವರು ಕಾಶೀ ಮಠದ 20ನೇ ಪೀಠಾಧಿಪತಿಗಳಾಗಿದ್ದು 70 ವರ್ಷ ಕಾಲ ಸಮಾಜದ ಏಳಿಗೆಗಾಗಿ ಆರ್ಶೀವದಿಸಿದ್ದಾರೆ. ಅವರ ಜನ್ಮಶತಮಾನೋತ್ಸವ ಅಂಗವಾಗಿ ದೇಶದ ಹಲವು ಕಡೆ ಹತ್ತಾರು ಕಾರ್ಯಕ್ರಮಗಳನ್ನು ಒಂದೂವರೆ ವರ್ಷದಿಂದ ನಡೆಸಲಾಗಿದೆ. ಸಮಾಜದ ಪ್ರತಿ ಮನೆಯಲ್ಲಿ ಘರ್ ಘರ್ ಭಜನೆ, ವ್ಯಾಸೋಪಾಸನೆ ನಡೆಸಲಾಗಿದೆ. ಸ್ವಾಮೀಜಿಯವರ ಸ್ವರ್ಣ ಪಾದುಕೆಯ ದಿಗ್ವಿಜಯ ಯಾತ್ರೆ ಹಿಮಾಲಯದ ಬದ್ರಿಯಿಂದ ತೊಡಗಿ ದಕ್ಷಿಣದಲ್ಲಿ ರಾಮೇಶ್ವರ, ತಿರುವನಂತಪುರದ ತನಕ ನಡೆದಿದೆ. ಒಂದು ಲಕ್ಷ ವಿಷ್ಣು ಸಹಸ್ರನಾಮ ಪಠಣವಾಗಿದ್ದು, ಕಳೆದ ಎಪ್ರಿಲ್ ನಲ್ಲಿ ಹರಿದ್ವಾರದಲ್ಲಿ ಸಂಪನ್ನವಾಗಿದೆ.
ಗೋಷ್ಟಿಯಲ್ಲಿ ಶಾಸಕ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರ ಅಡಿಗೆ ಬಾಲಕೃಷ್ಣ ಶೆಣೈ, ಮೊಕ್ತೇಸರ ಸಿಎ ಜಗನ್ನಾಥ್ ಕಾಮತ್, ಪ್ರಮುಖರಾದ ಕೋಟೇಶ್ವರ ದಿನೇಶ್ ಕಾಮತ್, ವಾಸುದೇವ ಕಾಮತ್, ರಘುವೀರ್ ಭಂಡಾರಕಾರ್, ಟಿ. ಗಣಪತಿ ಪೈ, ಪ್ರಶಾಂತ್ ಪೈ ಉಪಸ್ಥಿತರಿದ್ದರು.
The birth centenary celebrations of Srimath Sudhindra Tirtha Swamiji will be held on January 11 at the Sri Venkataramana Temple, Rathabeedi, Mangaluru, in the presence of Kashi Mathadhipathi Srimath Samyamindra Tirtha Swamiji. As part of the celebrations, a grand bhajana–sankeertana padayatra with Vyasa Dhwaja and Swamiji’s Paduka will be taken out from Kashi Math branch at Konchady to Rathabeedi, with thousands of devotees expected to participate.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
08-01-26 11:21 pm
HK News Desk
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
ಅಧಿಕಾರಕ್ಕಾಗಿ ಶಿವಸೇನೆ ಹೊರಗಿಟ್ಟು ಬಿಜೆಪಿ - ಕಾಂಗ್...
07-01-26 09:37 pm
ದೆಹಲಿಯಲ್ಲಿ ಹಿಂಸಾಚಾರ ; ಮಸೀದಿ ಆವರಣದಲ್ಲಿ ಅಕ್ರಮ ಕ...
07-01-26 04:47 pm
09-01-26 05:47 pm
Mangalore Correspondent
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
ಜ.10- 11ರಂದು ಮಂಗಳೂರು ಲಿಟ್ ಫೆಸ್ಟ್ ; ರಾಜ್ಯಸಭೆ ಸ...
08-01-26 08:09 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm