ಬ್ರೇಕಿಂಗ್ ನ್ಯೂಸ್
01-01-21 12:17 pm Mangalore Correspondent ಕರಾವಳಿ
ಮಂಗಳೂರು, ಜ.1: ಕೊರೊನಾ ಲಾಕ್ಡೌನ್ ಆಗಿ ಸುಮಾರು 10 ತಿಂಗಳ ಬಳಿಕ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಕಾಲೇಜುಗಳು ಕರಾವಳಿಯಲ್ಲಿ ಆರಂಭಗೊಂಡಿದೆ. 6ರಿಂದ 9ನೇ ತರಗತಿ ವರೆಗಿನ ಮಕ್ಕಳು ‘ವಿದ್ಯಾಗಮ-2’ ಕಾರ್ಯಕ್ರಮಕ್ಕಾಗಿ ಶಾಲೆಗಳಲ್ಲಿ ಹಾಜರಾಗಿದ್ದಾರೆ.
ಕಳೆದ ಮಾರ್ಚ್ ತಿಂಗಳ ಅಂತ್ಯದಿಂದ ಶಾಲೆ, ಕಾಲೇಜುಗಳಿಂದ ಹೊರಗೇ ಉಳಿದಿದ್ದ ವಿದ್ಯಾರ್ಥಿಗಳು 2021ರ ಹೊಸ ವರ್ಷದ ಮೊದಲ ದಿನದಿಂದ ಶಾಲೆ, ಕಾಲೇಜು ಆವರಣ ಪ್ರವೇಶಿಸಿದ್ದಾರೆ.
ಮಕ್ಕಳನ್ನು ಸ್ವಾಗತಿಸಲು ಕೆಲವು ದಿನಗಳ ಹಿಂದಿನಿಂದಲೇ ಶಾಲಾ ಕಾಲೇಜು ಆಡಳಿತ ಮಂಡಳಿ ಹಾಗೂ ಶಿಕ್ಷಕರು ಸಿದ್ಧತೆ ನಡೆಸಿದ್ದರು. ಕೆಲವು ಸರಕಾರಿ ಶಾಲೆಗಳನ್ನು ತಳಿರು ತೋರಣಗಳಿಂದ ಅಲಂಕರಿಸಿ ಸಜ್ಜುಗೊಳಿಸಲಾಗಿದೆ.
ತರಗತಿಗಳಿಗೆ ಹಾಗೂ ವಿದ್ಯಾಗಮಕ್ಕೆ ಹಾಜರಾಗುವ ಎಲ್ಲ ವಿದ್ಯಾರ್ಥಿಗಳು ಪಾಲಕರ ಅನುಮತಿ ಪತ್ರಗಳೊಂದಿಗೆ ಹಾಜರಾಗಬೇಕಿದೆ. ಅಲ್ಲದೆ ಎಲ್ಲ ಶಿಕ್ಷಕರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೊಳಗಾಗಿ ನೆಗೆಟಿವ್ ವರದಿ ಪಡೆದೇ ಮಾತ್ರ ಶಾಲೆಗೆ ಆಗಮಿಸಿದ್ದಾರೆ.
ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಶಾಲಾ ಕೊಠಡಿಗಳು, ಶಾಲಾ ಆವರಣ ಹಾಗೂ ಶೌಚಾಲಯಗಳ ಸ್ವಚ್ಛತೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. 6 ಮತ್ತು 7ನೇ ತರಗತಿ ಮಕ್ಕಳಿಗೆ ವಿದ್ಯಾಗಮ ತರಗತಿಗಳು ಪ್ರತಿದಿನ ಬೆಳಗ್ಗೆ 10ರಿಂದ 12.30ರ ವರೆಗೆ ನಡೆಯಲಿದೆ. 8 ಮತ್ತು 9ನೇ ತರಗತಿ ಮಕ್ಕಳಿಗೆ ವಿದ್ಯಾಗಮ ಅಪರಾಹ್ನ 2ರಿಂದ ಸಂಜೆ 4.30ರ ವರೆಗೆ ಶಾಲೆಯ ಆವರಣದಲ್ಲಿ ನಡೆಯಲಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ತರಗತಿಗಳು ಪ್ರತಿದಿನ 10:ರಿಂದ ಮಧ್ಯಾಹ್ನ 1ರ ವರೆಗೆ ಇರುತ್ತದೆ.
The schools have reopened on Friday January 1 after having been closed for nine months because of corona fear. The schools have been spruced up to welcome the students back to schools.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm