ಬ್ರೇಕಿಂಗ್ ನ್ಯೂಸ್
08-02-26 10:10 pm HK News Desk ಕರಾವಳಿ
ಉಡುಪಿ, ಫೆ.8: ಕೇಂದ್ರ ಸರ್ಕಾರದ 'ಜಾಗತಿಕ ಸ್ಪರ್ಧಾತ್ಮಕ ಪ್ರವಾಸಿ ತಾಣಗಳ ಅಭಿವೃದ್ಧಿ ರಾಷ್ಟ್ರೀಯ ಅಭಿಯಾನ' ಅಡಿಯಲ್ಲಿ ಉಡುಪಿ ಜಿಲ್ಲೆಯ ನಾಲ್ಕು ಪ್ರವಾಸಿ ತಾಣಗಳನ್ನು ಗುರುತಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ 'ರಜತಾದ್ರಿ'ಯಲ್ಲಿ ನಡೆದ ಸಭೆಯಲ್ಲಿ ಅವರು ಈ ವಿಷಯ ಹಂಚಿಕೊಂಡರು.
ಕೋಡಿ-ಕನ್ಯಾನ, ಕೋಡಿ-ಕುಂದಾಪುರ, ಬಾರ್ಕೂರು ಬಂದರು ಪ್ರದೇಶ ಮತ್ತು ತ್ರಾಸಿ-ಮರವಂತೆ ಪ್ರವಾಸಿ ತಾಣಗಳನ್ನು ಆಯ್ಕೆ ಮಾಡಲಾಗಿದೆ. ಅಂತಿಮವಾಗಿ ಒಂದು ತಾಣವನ್ನು ಸಮಗ್ರ ಅಭಿವೃದ್ಧಿಗೆ ಆಯ್ಕೆ ಮಾಡಲಿದ್ದು ಆಯ್ಕೆಯಾದ ತಾಣದಲ್ಲಿ ನವೀಕರಿಸಬಹುದಾದ ಇಂಧನ ಬಳಕೆ, ಮೂಲಸೌಕರ್ಯ ವೃದ್ಧಿ, ಜಾಗತಿಕ ಮಟ್ಟದ ಪ್ರಚಾರ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ಸೌಲಭ್ಯಗಳನ್ನು ಒದಗಿಸಲಾಗುವುದು.
ಯೋಜನೆಯಡಿ ದೇಶಾದ್ಯಂತ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ₹300 ಕೋಟಿ ಅನುದಾನ ಮೀಸಲಿಟ್ಟಿದೆ. ಪರಿಸರ ಸಹ್ಯ ಜವಾಬ್ದಾರಿಯುತ ಪ್ರವಾಸೋದ್ಯಮವನ್ನು ಉತ್ತೇಜಿಸುವುದು ಈ ಯೋಜನೆಯ ಮುಖ್ಯ ಗುರಿ. ನೈಸರ್ಗಿಕ ಮತ್ತು ಸಾಂಸ್ಕೃತಿಕ ಸಂಪನ್ಮೂಲಗಳನ್ನು ರಕ್ಷಿಸುವುದರೊಂದಿಗೆ, ಪರಿಸರ ಸ್ನೇಹಿ ರೀತಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಮೂಲಸೌಕರ್ಯ ಒದಗಿಸಲಾಗುವುದು. ಯೋಜನೆಯಲ್ಲಿ ಭೂಮಿಯನ್ನು ಸರ್ಕಾರ ನೀಡಲಿದ್ದು, ಖಾಸಗಿ ವಲಯದ ಸಹಭಾಗಿತ್ವಕ್ಕೂ ಅವಕಾಶ ನೀಡಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ್ ಮಾತನಾಡಿ, "ಉಡುಪಿ ಜಿಲ್ಲೆಯು 98 ಕಿ.ಮೀ ಉದ್ದದ ಕರಾವಳಿ, ಪಶ್ಚಿಮ ಘಟ್ಟಗಳ ನೈಸರ್ಗಿಕ ಸೌಂದರ್ಯ, ಕೆರೆ-ನದಿಗಳನ್ನು ಹೊಂದಿದ್ದು, ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿವೆ ಎಂದರು. ಸಭೆಯಲ್ಲಿ ಐಪಿಇ ಗ್ಲೋಬಲ್‌ನ ಹೇಮಲತಾ ಅವರು ಯೋಜನೆಯ ತಾಂತ್ರಿಕ ವಿವರಗಳನ್ನು ಮಂಡಿಸಿದರು.
Four tourist destinations in Udupi district have been identified under the Central Government’s National Mission for Development of Globally Competitive Tourist Destinations, said Kota Srinivasa Poojary, Member of Parliament from Udupi–Chikkamagaluru.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am