ಬ್ರೇಕಿಂಗ್ ನ್ಯೂಸ್
10-02-26 08:27 pm Mangalore Correspondent ಕರಾವಳಿ
ಮಂಗಳೂರು, ಫೆ.11: ನಗರದ ಕಾವೂರು ಮೂಲದ ಯುವಕನೊಬ್ಬ ಮ್ಯಾಟ್ರಿಮನಿ ಸೈಟ್ ಮೂಲಕ ಯುವತಿಯರನ್ನು ಪರಿಚಯ ಮಾಡಿಕೊಂಡು ಮದುವೆಯಾಗುತ್ತೇನೆಂದು ನಂಬಿಸಿ ಮುಂಬೈ, ಉಡುಪಿ ಹೀಗೆ ಹಲವೆಡೆ ಯುವತಿಯರನ್ನು ಮದುವೆಯಾಗಿ ಅವರಿಂದ ಹಣ ಪಡೆದು ವಂಚಿಸಿದ್ದಲ್ಲದೆ, ಇನ್ನೂ ಹಲವು ಯುವತಿಯರನ್ನು ಮದುವೆಯಾಗುವ ಭರವಸೆ ನೀಡಿ ಹಣ ಪಡೆದು ಮೋಸಗೈದು ಕಂತ್ರಿ ಬುದ್ಧಿ ತೋರಿಸಿ ಕಾವೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಕಾವೂರು ಮೂಲದ ಸುಶಾಂತ್ ಪೂಜಾರಿ ಅಲಿಯಾಸ್ ಸುಶಾಂತ್ ಅಂಕುಶ್ ಪೂಜಾರಿ, ಸುಶಾಂತ್ ಜಿ. ಕರ್ಕೇರಾ (32) ಎಂದು ಕರೆಸಿಕೊಳ್ಳುತ್ತಿದ್ದ ಯುವಕ ಮತ್ತು ಈತನಿಗೆ ಮುಂಬೈನಲ್ಲಿ ಮದುವೆಯಾಗಲು ಸಹಕರಿಸಿದ್ದ ಮುಲ್ಕಿ ನಿವಾಸಿ ಭಾಸ್ಕರ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಮುಂಬೈ ಮೂಲದ ಮಹಿಳೆಗೆ ಸುಶಾಂತ್ ಪೂಜಾರಿ ಎಂಬ ವ್ಯಕ್ತಿ ಮ್ಯಾಟ್ರಿಮೊನಿ ಸೈಟ್ ಮೂಲಕ ಪರಿಚಯವಾಗಿದ್ದು ಮಹಾರಾಷ್ಟ್ರದ ಘನಸೋಳಿಯ ನವ ಮುಂಬೈ ನಲ್ಲಿ 2025ರ ಫೆ.2ರಂದು ಆಕೆಯನ್ನು ಮದುವೆಯಾಗಿದ್ದ. ಆನಂತರ, ಹಂತ ಹಂತವಾಗಿ 6,60,000 ರೂ. ಹಣವನ್ನು ಪಡೆದು ಕಳೆದ ನವೆಂಬರ್ 15ರಂದು ನಾಪತ್ತೆಯಾಗಿದ್ದ. ನಂತರದ ದಿನಗಳಲ್ಲಿ ಮಹಿಳೆ ಅನುಮಾನಗೊಂಡು ಆತನ ಬಗ್ಗೆ ವಿಚಾರಿಸಿದಾಗ ಇದೇ ರೀತಿ ಹಲವಾರು ಕಡೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ಯುವತಿಯರನ್ನು ಮೋಸ ಮಾಡಿರುವ ವಿಷಯ ತಿಳಿದುಬಂದಿದೆ.
ಅಲ್ಲದೆ, ಈತನಿಗೆ ಈ ಮೊದಲು ಒಂದು ಮದುವೆ ಆಗಿರುವ ವಿಚಾರವೂ ತಿಳಿದ ಮೇರೆಗೆ ನೊಂದ ಮುಂಬೈ ಮೂಲದ ಮಹಿಳೆ ಮಂಗಳೂರಿನ ಕಾವೂರು ಠಾಣೆಯಲ್ಲಿ ಅಕ್ರ: 184/2025 ಕಲಂ: 318(4), 316(2), 316(1), 336(3), 340(1) ಬಿ ಎನ್ ಎಸ್ ರಂತೆ ಪ್ರಕರಣ ದಾಖಲಿಸಿದ್ದರು. ಸದ್ರಿ ಪ್ರಕರಣದ ಆರೋಪಿ ಸುಶಾಂತ್ ಪೂಜಾರಿಯನ್ನು ಫೆ.05ರಂದು ಪತ್ತೆಹಚ್ಚಿ ದಸ್ತಗಿರಿ ಮಾಡಲಾಗಿದೆ. ವಿಚಾರಣೆ ನಡೆಸಿದಾಗ ಆರೋಪಿ ಸುಶಾಂತ್ ಮ್ಯಾಟ್ರಿಮನಿ ಸೈಟ್ ಮೂಲಕ ಪರಿಚಯ ಮಾಡಿಕೊಂಡು ಈ ಮೊದಲು 2021ರಲ್ಲಿ ಉಡುಪಿ ಮೂಲದ ಯುವತಿಯೊಬ್ಬಳನ್ನು ಮದುವೆ ಆಗಿರುತ್ತಾನೆ. ಉಡುಪಿಯಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದಿದ್ದಾನೆ. ಮುಂಬೈನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ಮೋಸ ಮಾಡಿರುತ್ತಾನೆ.
ಬೆಂಗಳೂರಿನಲ್ಲಿ ಇಬ್ಬರು ಹುಡುಗಿಯರನ್ನು ಮದುವೆಯಾಗುವ ಭರವಸೆಯಿಂದ ಮೋಸ ಮಾಡಿದ್ದಾನೆ. ಕಾರ್ಕಳದಲ್ಲಿ ಒಬ್ಬಳು ಹುಡುಗಿಯನ್ನು ಮದುವೆ ಆಗುವುದಾಗಿ ನಂಬಿಸಿ ಮೋಸ ಮಾಡಿರುವ ಬಗ್ಗೆಯೂ ಪೊಲೀಸರ ತನಿಖೆಯಲ್ಲಿ ಒಪ್ಪಿಕೊಂಡಿದ್ದಾನೆ. ಆರೋಪಿ ಸುಶಾಂತ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

ಸದ್ರಿ ಪ್ರಕರಣದಲ್ಲಿ ಆರೋಪಿ ಸುಶಾಂತ್ ಪೂಜಾರಿಗೆ ಮುಂಬೈನಲ್ಲಿ ಮದುವೆಯಾಗಲು ಮುಲ್ಕಿ ನಿವಾಸಿ ಭಾಸ್ಕರ್ ಎಂಬಾತ ಸಹಕರಿಸಿದ್ದಾನೆ. ಮುಂಬೈನ ಮಹಿಳೆಯ ಕುಟುಂಬದವರಿಗೆ ನಂಬಿಸುವ ಉದ್ದೇಶದಿಂದ ಆರೋಪಿ ಸುಶಾಂತ್ ತನ್ನ ಅಳಿಯ ಎಂದು ಹೇಳಿಕೊಂಡು ನಂಬಿಸಿ ಮೋಸ ಮಾಡಿದ್ದಾನೆ. ಸುಶಾಂತ್ ಪೂಜಾರಿ ಕುಟುಂಬಸ್ಥರ ಪರವಾಗಿ ಮುಂಬೈನಲ್ಲಿ ಧಾರ್ಮಿಕ ವಿಧಿ ವಿಧಾನದಲ್ಲಿ ಪಾಲ್ಗೊಂಡಿದ್ದ. ಇದಕ್ಕಾಗಿ ಈತನನ್ನೂ ದಸ್ತಗಿರಿ ಮಾಡಿದ್ದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.
ಹಲವಾರು ಹೆಂಡಿರ ಮುದ್ದಿನ ಗಂಡ ಆರೋಪಿ ಸುಶಾಂತ್ ಪೂಜಾರಿ ವಿರುದ್ದ ಮಂಗಳೂರು ಉರ್ವಾ ಪೊಲೀಸ್ ಠಾಣೆಯಲ್ಲಿ ಅ.ಕ್ರ: 202/2017 ಕಲಂ: 406, 420 ಐಪಿಸಿ, ಉಡುಪಿ ಜಿಲ್ಲೆಯ ಕೋಟಾ ಪೊಲೀಸ್ ಠಾಣಾ ಅ.ಕ್ರ: 132/2022 ಕಲಂ: 379 ಐಪಿಸಿ ಮತ್ತು ಮಹಾರಾಷ್ಟ್ರ ರಾಜ್ಯದ ಅರ್ನಾಲ್ ಪೊಲೀಸ್ ಠಾಣಾ ಅ.ಕ್ರ:354/2022 ಕಲಂ:336(ಎ), 370, 370(4), 376(2), (ಎನ್) 342, ಜೊತೆಗೆ 34 ಐಪಿಸಿ ಕಲಂ:3, 4, 5 ಸೇರಿದಂತೆ ಕಲಂ:4, 8, 12 ಪೋಕ್ಸೋ ಕಾಯ್ದೆಯಡಿ ಪ್ರಕರಣಗಳು ದಾಖಲಾಗಿವೆ.
A 32-year-old man from Kavoor, identified as Sushanth Poojari alias Sushanth Ankush Poojari, has been arrested for allegedly cheating multiple women across Mumbai, Udupi, Bengaluru, and Karkala after befriending them through matrimonial websites.
02-05-26 04:48 pm
HK News Staffer
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm