ಬ್ರೇಕಿಂಗ್ ನ್ಯೂಸ್
19-02-26 06:08 pm mangalore ಕರಾವಳಿ
ಮಂಗಳೂರು, ಫೆ.19 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಟೋಲ್ ಗೇಟ್ ಗಳನ್ನು ತೆರಯಲು ಸಿದ್ಧತೆಗಳು ಬಿರುಸುಗೊಳ್ಳುತ್ತಿರುವಂತೆಯೇ ಬಿ.ಸಿ.ರೋಡ್ ನಲ್ಲಿ ಬಂಟ್ವಾಳ ತಾಲೂಕಿನ ಸಮಾನ ಮನಸ್ಕ ಸಂಘಟನೆಗಳು, ಟೋಲ್ ವಿರೋಧಿ ಹೋರಾಟಗಾರರು ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಹೋರಾಟದ ಕುರಿತಾಗಿ ಸಮಾಲೋಚನಾ ಸಭೆ ನಡೆಸಿದರು.
ಮಾಜಿ ಸಚಿವ ಬಿ ರಮಾನಾಥ ರೈ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮಾನ ಮನಸ್ಕ ವಿವಿಧ ಸಂಘಟನೆಗಳು, ಪಕ್ಷಗಳಿಗೆ ಸೇರಿದ ಪ್ರತಿನಿಧಿಗಳು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಟೋಲ್ ಗೇಟ್ ತೆರವಿಗೆ ನಡೆಸಬೇಕಾದ ಮುಂದಿನ ಹೋರಾಟಗಳ ಕುರಿತು ಮಾರ್ಗದರ್ಶನ ಮಾಡಿದರು.


ಸಭೆಯ ಕೊನೆಯಲ್ಲಿ "ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ" ರಚಿಸಲು, ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳ್ಳುವವರೆಗೂ ಅವಿರತ ಹೋರಾಟ ನಡೆಸಲು ಸಭೆ ನಿರ್ಧರಿಸಿತು. ಹೋರಾಟ ಸಮಿತಿಗೆ ಬಿ ರಮಾನಾಥ ರೈ ಅವರನ್ನು ಗೌರವಾಧ್ಯಕ್ಷರಾಗಿ, ಬಿ ಶೇಖರ್ ಹಾಗು ಮೋಹನ್ ಶೆಟ್ಟಿ ಅವರನ್ನು ಸಂಚಾಲಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಮುಂದಿನ ದಿನದಲ್ಲಿ ಸಮಾನ ಮನಸ್ಕರಾದ ಎಲ್ಲರನ್ನು ಒಳಗೊಂಡ ಸಮಾವೇಶ ನಡೆಸಿ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.
ಮಾರ್ಚ್ 3ರಂದು ಸಾಮೂಹಿಕ ಧರಣಿ
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ನೂತನ ಸಮಿತಿ ವತಿಯಿಂದ, ಸಮಾನ ಮನಸ್ಕ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಮಾರ್ಚ್ 3 ರಂದು ಬ್ರಹ್ಮರಕೂಟ್ಲು ಟೋಲ್ ಗೇಟ್ ಸಮೀಪ ಬೆಳಗ್ಗೆ 9 ರಿಂದ ಮಧ್ಯಾಹ್ನ 12ರ ವರೆಗೆ ಬೃಹತ್ ಸಾಮೂಹಿಕ ಧರಣಿ ನಡೆಸುವುದಾಗಿ ಸಭೆ ತೀರ್ಮಾನಿಸಿತು. ಮುಂದಿನ ಹಂತದಲ್ಲಿ ಮತ್ತಷ್ಟು ತೀವ್ರ ಹೋರಾಟ ಸಂಘಟಿಸುವುದು, ಟೋಲ್ ಗೇಟ್ ತೆರವುಗೊಳಿಸಿಯೇ ವಿಶ್ರಮಿಸುವುದು ಎಂದು ಸಭೆಯಲ್ಲಿ ನಿರ್ಧಾರಕ್ಕೆ ಬರಲಾಯಿತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am