ಬ್ರೇಕಿಂಗ್ ನ್ಯೂಸ್
20-02-26 04:18 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಸರಕಾರಿ ಭೂಮಿಯ ಅತಿಕ್ರಮಣಕಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಪಟ್ಟಣ ವ್ಯಾಪ್ತಿಯ ಬಡ ವಸತಿ ರಹಿತರಿಗೆ ನಿವೇಶನ ಹಂಚುವಂತೆ ಬಿಜೆಪಿ ಅಧಿಕಾರದ ಆಡಳಿತವನ್ನೇ ನಿರಂತರವಾಗಿ ಪ್ರಶ್ನಿಸಿ ಕೊನೆಗೆ ಅದೇ ವಿಚಾರದಲ್ಲಿ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಧರಣಿಯನ್ನೂ ನಡೆಸಿದ್ದ ಕೋಟೆಕಾರು ಪಟ್ಟಣ ಪಂಚಾಯತ್ ಸದಸ್ಯ ಸುಜಿತ್ ಮಾಡೂರು ಅವರನ್ನ ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ಬಿಜೆಪಿ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಫೆ.19ರಂದು ಈ ಆದೇಶ ಮಾಡಿದ್ದು ಸುಜಿತ್ ಮಾಡೂರು ಅವರು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಆದೇಶದ ಪ್ರತಿಯನ್ನು ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಅವರಿಗೆ ಕಳುಹಿಸಲಾಗಿದ್ದು ಆ ಪ್ರತಿಯು ನಿನ್ನೆಯೇ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇಂದು ಮಧ್ಯಾಹ್ನ ಸುಜಿತ್ ಮಾಡೂರು ಕೈ ಸೇರಿದೆ.



ಕಳೆದ ಆಗಸ್ಟ್ ತಿಂಗಳಲ್ಲಿ ಕೋಟೆಕಾರು ಪ.ಪಂ ನಲ್ಲಿ ಸತತ ಎರಡನೇ ಬಾರಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿತ್ತು. ಪ್ರತೀ ತಿಂಗಳ ಸಾಮಾನ್ಯ ಸಭೆಯಲ್ಲಿ ಆಡಳಿತ ಬಿಜೆಪಿ ಪಕ್ಷದ ಕೌನ್ಸಿಲರ್ ಸುಜಿತ್ ಮಾಡೂರು ಅವರು ಕಳೆದ 15 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಬಡ ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಧ್ವನಿ ಎತ್ತುತ್ತಲೇ ಬಂದಿದ್ದರು.
ಕಳೆದ ಜನವರಿ 29 ರಂದು ನಡೆದಿದ್ದ ಸಾಮಾನ್ಯ ಸಭೆಯಲ್ಲಿ ಸುಜಿತ್ ಮಾಡೂರು ಅವರು ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಮಾಡದಿರುವ ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತ ಪಡಿಸಿದ್ದಲ್ಲದೆ, ವಿಪಕ್ಷದವರ ಜತೆ ಸಾಮಾನ್ಯ ಸಭೆಯ ಬಾವಿಗಿಳಿದು ಪ್ರತಿಭಟನೆ ನಡೆಸಿ ತಹಶೀಲ್ದಾರ್ ಹಾಗೂ ಗ್ರಾಮ ಕರಣಿಕರಿಗೆ ಧಿಕ್ಕಾರ ಕೂಗಿದ್ದರು.
ಕೋಟೆಕಾರು ಪಟ್ಟಣ ವ್ಯಾಪ್ತಿಯಲ್ಲಿ ಸಾಕಷ್ಟು ಸರಕಾರಿ ಭೂಮಿಯಿದ್ದರೂ ಅಧಿಕಾರಿಗಳು ವಸತಿ ರಹಿತ ಬಡವರಿಗೆ ನಿವೇಶನ ಹಂಚುವ ಕಾರ್ಯ ನಡೆಸಿಲ್ಲ. ಆದರೆ ನಡುಕುಮೇರು ಎಂಬಲ್ಲಿ ಪಟ್ಟಣ ಪಂಚಾಯತ್ಗೆ ಸೇರಿರುವ ಸರಕಾರಿ ಜಾಗದಲ್ಲಿ ಭೂ ಮಾಫಿಯಗಳು ಕಟ್ಟಿರುವ ನಿವೇಶನಗಳನ್ನ ನೆಲಸಮ ಮಾಡುವಂತೆ ಪ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡರೂ ಸಹ ಯಾವುದೇ ತಾರ್ಕಿಕ ಕ್ರಮ ಕೈಗೊಳ್ಳದ ಪಂಚಾಯತ್ ಆಡಳಿತ ವಿರುದ್ಧ ಸುಜಿತ್ ಅವರು ಸಾಮಾನ್ಯ ಸಭೆಗಳಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅಕ್ರಮ ಕಟ್ಟಡಗಳನ್ನ ತೆರವುಗೊಳಿಸುವ ವಿಚಾರದಲ್ಲಿ ಕುಂಟು ನೆಪ ಹೇಳಿ ಜವಬ್ದಾರಿಯಿಂದ ನುಣುಚಿಕೊಳ್ಳುವ ಅಧಿಕಾರಿಗಳನ್ನೂ ಸಹ ಸುಜಿತ್ ಅವರು ನಿರಂತರವಾಗಿ ಜಾಡಿಸುತ್ತಿದ್ದರು.
ಬಡವರಿಗೆ ನಿವೇಶನ ನೀಡಲು ಹೋರಾಟ ನಡೆಸುತ್ತಿರುವ ಕೌನ್ಸಿಲರನ್ನು ಪಕ್ಷದಿಂದ ಉಚ್ಚಾಟನೆ ನಡೆಸಿರುವ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರೇ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am