ಬ್ರೇಕಿಂಗ್ ನ್ಯೂಸ್
21-02-26 09:02 pm Mangaluru Staffer ಕರಾವಳಿ
ಉಳ್ಳಾಲ, ಫೆ.21: ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡಾ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗಳೊಬ್ಬಳು ಆಟದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಸಮೀಪದ ಕೊಲ್ಯ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಧೂರು ಉಳಿಯತಡ್ಕ ನಿವಾಸಿ ರಾಜೇಶ್ ಗಟ್ಟಿ ಮತ್ತು ರಾಜೇಶ್ವರಿ ದಂಪತಿಯ ಎರಡನೇ ಪುತ್ರಿ ತನುಷ್ಕ (8) ಮೃತ ದುರ್ದೈವಿ. ಮೃತ ತನುಷ್ಕ ಅವರ ತಾಯಿ ಉಳ್ಳಾಲದ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಉದ್ಯೋಗಕ್ಕೆ ತೆರಳಲು ಹತ್ತಿರವಾಗಲು ಕುಟುಂಬ ಸಮೇತ ಕೊಲ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಇಂದು ಮಧ್ಯಾಹ್ನ ಶಾಲೆಗೆ ರಜೆ ಇದ್ದ ಕಾರಣ ರಾಜೇಶ್ವರಿ ಅವರ ಎರಡನೇ ಮಗಳು ತನುಷ್ಕ ತನ್ನ ಅಣ್ಣ ಮತ್ತು ತಂಗಿಯ ಜತೆ ಲೂಡೊ ಆಟದಲ್ಲಿ ತೊಡಗಿದ್ದಳಂತೆ.


ಈ ವೇಳೆ ತನುಷ್ಕಾ ಲೂಡೊ ಆಟದಲ್ಲಿ ಬಳಸಲಾಗುವ ಹೊಸ ಶಂಕು ಆಕಾರದ ಕಾಯ್ನ್ ಅನ್ನು ನುಂಗಿ ಏಕಾಏಕಿ ಉಸಿರು ಗಟ್ಟಿದ ಸ್ಥಿತಿಯಲ್ಲಿ ಗಂಭೀರಗೊಂಡಿದ್ದು ಗಾಬರಿಗೊಂಡ ಆಕೆಯ ತಾಯಿ ನೆರೆಹೊರೆಯವರ ಸಹಾಯದಿಂದ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ಆಕೆಯನ್ನ ಚಿಕಿತ್ಸೆಗೆ ಒಯ್ದಿದ್ದಾರೆ. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆಂದು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿನ ವೈದ್ಯರು ತನುಷ್ಕ ಮೃತ ಪಟ್ಟಿರುವುದಾಗಿ ಘೋಷಿಸಿದ್ದಾರೆ.
ಬಾಲಕಿಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದಾಗ ಆಕೆಯ ಶ್ವಾಸಕೋಶದಲ್ಲಿ ಪ್ಲಾಸ್ಟಿಕ್ ಕಾಯ್ನ್ ಲಭಿಸಿದೆ. ತನುಷ್ಕ ತೊಕ್ಕೊಟ್ಟುವಿನ ಸಂತ ಸೆಬಾಸ್ಟಿಯನ್ ಹೈಸ್ಕೂಲ್ ನಲ್ಲಿ ಎರಡನೇ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದಳು. ಆಕೆಯ ದಿಢೀರ್ ಸಾವಿನಿಂದ ಪೋಷಕರು ಸೇರಿದಂತೆ ಇಡೀ ಕುಟುಂಬವೇ ಆಘಾತಕ್ಕೊಳಗಾಗಿ ಆಸ್ಪತ್ರೆಯಲ್ಲಿ ಸೇರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am