ಬ್ರೇಕಿಂಗ್ ನ್ಯೂಸ್
01-01-21 10:00 pm Mangaluru Correspondent ಕರಾವಳಿ
ಮಂಗಳೂರು, ಜ.1: ನಮ್ಮ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿಲ್ಲ. ಈ ಬಗ್ಗೆ ಯಾವುದೇ ರೀತಿಯ ನಿಷ್ಪಕ್ಷಪಾತ ತನಿಖೆ ನಡೆಸಲಿ. ಪ್ರಕರಣದಲ್ಲಿ ಬಂಧಿತ ಅಮಾಯಕರನ್ನು ತಕ್ಷಣ ಬಿಡುಗಡೆ ಮಾಡಬೇಕು. ಇಲ್ಲದೇ ಇದ್ದರೆ ಮೂರು ದಿನಗಳ ಬಳಿಕ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಲಾಗುವುದು ಎಂದು ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಶ್ರಫ್ ಮಾಚಾರ್ ತಿಳಿಸಿದ್ದಾರೆ.
ತಿರುಚಿದ ವೀಡಿಯೋ ಒಂದರಲ್ಲಿ ಪಾಕಿಸ್ತಾನ ಪರ ಘೋಷಣೆ ಇದೆ ಎಂದು ಆರೋಪಿಸಿ ಎಸ್ಡಿಪಿಐ ಪಕ್ಷದ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇದರ ಹಿಂದೆ ಎಸ್ಡಿಪಿಐ ಬೆಳವಣಿಗೆಯನ್ನು ಸಹಿಸದೆ ಇರುವವರ ಷಡ್ಯಂತ್ರ ಇದೆ. ಈ ಹಿಂದೆ ಸಿಂಧಗಿಯಲ್ಲಿ ಪಾಕಿಸ್ತಾನದ ಧ್ವಜ ಹಾರಿಸಿದ ರೀತಿಯ ಷಡ್ಯಂತ್ರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ತಿರುಚಿದ ವೀಡಿಯೋ ಪೊಲೀಸರಿಗೆ, ಮಾಧ್ಯಮಗಳಿಗೆ ಎಲ್ಲಿಂದ ಬಂದಿದೆ ಎನ್ನುವ ಸತ್ಯ ವಿಚಾರ ಬಹಿರಂಗವಾಗಬೇಕು. ಈ ಹಿಂದೆ ಸಂಘ ಪರಿವಾರದ ಮುಖಂಡರೊಬ್ಬರು ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿದ್ದಾರೆ. ಇದೇ ಸಂಘಟನೆಯ ವತಿಯಿಂದ ಈ ರೀತಿಯ ಷಡ್ಯಂತ್ರ ನಡೆಯುತ್ತಿದೆ ಎಂದು ಅಶ್ರಫ್ ಮಾಚಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ, ಎಸ್ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಹುಲ್ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಘಟಕದ ಅಧ್ಯಕ್ಷ ಹೈದರ್ ನಿರ್ಸಾಲ್ ಮೊದಲಾದವರು ಉಪಸ್ಥಿತರಿದ್ದರು.
The SDPI has warned of Gherao of Sp's office in Mangalore in regards to Pro-Pakistan Slogan at Ujre, Belthangady, Mangalore for arresting the innocents of SDPI members.
26-06-26 05:10 pm
HK News Staffer
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 02:14 pm
HK News Staffer
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
26-06-26 04:26 pm
HK News Staffer
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm