ಬ್ರೇಕಿಂಗ್ ನ್ಯೂಸ್
25-02-26 05:41 pm HK News Staffer ಕರಾವಳಿ
ಮಂಗಳೂರು, ಫೆ.25: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2025-26ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಗೆ ಯಕ್ಷಗಾನ ರಂಗದ ಹಿರಿಯ ಕಲಾವಿದ ಕಪ್ಪೆಕೆರೆ ಸುಬ್ರಾಯ ಭಾಗವತ, ಯಕ್ಷಗಾನ ಗುರುಗಳಾದ ಮಾಂಬಾಡಿ ಸುಬ್ರಹ್ಮಣ್ಯ ಭಟ್, ಹಿರಿಯ ಯಕ್ಷಗಾನ ಅರ್ಥಧಾರಿ ಜಬ್ಬಾರ್ ಸಮೊ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ಕೃಷ್ಣಪ್ರಕಾಶ್ ಉಳಿಯತ್ತಾಯ ಅವರ 'ಬಲಿಪ ಮಾರ್ಗ ಹಾಗೂ ಅಗರಿಮಾರ್ಗ' ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿ 10,000 ರೂ ನಗದು, ಪ್ರಶಸ್ತಿ , ಸ್ಮರಣಿಕೆಗಳನ್ನೊಳಗೊಂಡಿದೆ.
ಕಪ್ಪೆಕೆರೆ ಸುಬ್ರಾಯ ಭಾಗವತ:
ಕಪ್ಪೆಕೆರೆ ಸುಬ್ರಾಯ ಭಾಗವತರು ಬಡಗುತಿಟ್ಟು ಯಕ್ಷಗಾನ ರಂಗದ ಹಿರಿಯ ತಲೆಮಾರಿನ ಅಗ್ರಮಾನ್ಯ ಕಲಾವಿದರಾಗಿದ್ದಾರೆ. ಉತ್ತರ ಕನ್ನಡದ ಹೊನ್ನಾವರ ತಾಲೂಕಿನ ಹಡಿನಬಾಳ ಎಂಬಲ್ಲಿ 1947 ರಲ್ಲಿ ಈಶ್ವರ ಹೆಗಡೆ -ಗೋಪಿ ಹೆಗಡೆ ದಂಪತಿಯ ಸುಪುತ್ರರಾಗಿ ಜನಿಸಿದ ಅವರು ಹದಿನಾರರ ಹರೆಯದಲ್ಲೇ ಯಕ್ಷಗಾನ ರಂಗಕ್ಕೆ ಪಾದಾರ್ಪಣೆ ಮಾಡಿದರು. ಸರ್ವಾಂಗೀಣ ಕಲಾವಿದರಾಗಿ, ನಾಡಿನ ಓರ್ವ ಶ್ರೇಷ್ಠ ಭಾಗವತರಾಗಿ ಗುರುತಿಸಿದ್ದಾರೆ. ಗುಂಡುಬಾಳ, ಇಡಗುಂಜಿ, ಅಮೃತೇಶ್ವರಿ, ಕಮಲಶಿಲೆ, ಸಾಲಿಗ್ರಾಮ, ಬಚ್ಚಗಾರು, ಪಂಚಲಿಂಗ ಮೇಳಗಳಲ್ಲಿ ಐದು ದಶಕಗಳಿಗೂ ಹೆಚ್ಚು ಕಾಲ ಸೇವೆಗೈದಿದ್ದಾರೆ.
ಮಾಂಬಾಡಿ ಸುಬ್ರಹ್ಮಣ್ಯ ಭಾಗವತ:
ಯಕ್ಷಗಾನ ಕ್ಷೇತ್ರದಲ್ಲಿ ಹಿಮ್ಮೇಳ ವಾದಕರಾಗಿ ಮೇಳದ ತಿರುಗಾಟದ ಜೊತೆಗೆ ಯಕ್ಷಗಾನ ಗುರುಗಳಾಗಿ ಗುರು ಪರಂಪರೆಯನ್ನು ಮೆರೆಸಿದ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರು ಯಕ್ಷಗಾನ ರಂಗದ ಹಿರಿಯ ಸಾಧಕರು. ಮಾಂಬಾಡಿ ನಾರಾಯಣ ಭಾಗವತರ ಸುಪುತ್ರರಾಗಿ ತಂದೆಯ ಮಾರ್ಗದರ್ಶನದಲ್ಲಿ ಮುಂದುವರಿದು ಕಟೀಲು, ಕರ್ನಾಟಕ, ಕದ್ರಿ ಮೊದಲಾದ ಮೇಳಗಳಲ್ಲಿ ತಿರುಗಾಟ ಮಾಡಿದ್ದಾರೆ. ಕಾಸರಗೋಡು, ದ.ಕ. ಜಿಲ್ಲೆಯ ನಾನಾ ಕಡೆ ಯಕ್ಷಗಾನದ ಹಿಮ್ಮೇಳ ತರಗತಿಗಳನ್ನು ನಡೆಸಿ ನೂರಾರು ಶಿಷ್ಯಂದಿರಿಗೆ ಹಿಮ್ಮೇಳದ ಶಿಕ್ಷಣ ನೀಡಿದ್ದಾರೆ. ಇವರಲ್ಲಿ ಕಲಿತ ಅನೇಕ ಶಿಷ್ಯರು ವೃತ್ತಿಪರ ಕಲಾವಿದರಾಗಿ, ಹವ್ಯಾಸಿ ಕಲಾವಿದರಾಗಿ ಸೇವೆಗೈಯ್ಯುತ್ತಿದ್ದಾರೆ.
ಜಬ್ಬಾರ್ ಸಮೋ:
ಯಕ್ಷಗಾನ ರಂಗದ ಹಿರಿಯ ತಾಳಮದ್ದಳೆಯ ಅರ್ಥಧಾರಿಯಾಗಿರುವ ಜಬ್ಬಾರ್ ಸಮೊ ಅವರು ಸಂಪಾಜೆಯ ಮೊಯ್ದಿನ್ ಕುಂಞಿ ಹಾಗೂ ಬಿಪಾತುಮ್ಮ ದಂಪತಿಯ ಪುತ್ರರಾಗಿ 1963 ರಲ್ಲಿ ಜನಿಸಿದರು. ಎಳವೆಯಲ್ಲಿಯೇ ಯಕ್ಷಗಾನದ ಆಸಕ್ತಿಯನ್ನು ಬೆಳೆಸಿಕೊಂಡಿದ್ದ ಅವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದರು. ವಳಕುಂಜ ಕುಮಾರ ಸುಬ್ರಹ್ಮಣ್ಯ ಭಟ್ ಅವರ ಮೊದಲ ಗುರುವಾಗಿದ್ದು,
ಆರಂಭದಲ್ಲಿ ದ್ರೋಣ, ಜಾಬಾಲಿ, ಈಶ್ವರ, ಸಂಜಯ, ಅಕ್ರೂರ, ಬ್ರಹ್ಮ, ಕಂಸ ಮೊದಲಾದ ಪಾತ್ರಗಳನ್ನು ಮಾಡಿದ್ದರು.

1990ರ ಬಳಿಕ ತಾಳಮದ್ದಳೆಯಲ್ಲಿ ತೊಡಗಿಸಿ ವಾಲಿ, ಮಾಗಧ, ಕರ್ಣ, ಅರ್ಜುನ, ಶಲ್ಯ,ಸುಗ್ರೀವ, ಭೀಷ್ಮ,ಕೌರವ, ಶುಂಭ, ರಕ್ತಬೀಜ, ಧರ್ಮಾಂಗದ, ಭರತ, ಶತ್ರುಘ್ನ, ಹನುಮಂತ, ವೀರಮಣಿ, ಈಶ್ವರ, ಬಲರಾಮ, ರುಕ್ಮ, ಭೀಷ್ಮ, ಜಾಂಬವಂತ, ಶತ್ರುಪ್ರಸೂದನ, ಬಲಿ, ಶುಕ್ರಾಚಾರ್ಯ ಮುಂತಾದ ಪಾತ್ರಗಳು ಅವರಿಗೆ ಖ್ಯಾತಿಯನ್ನು ತಂದಿದೆ. ಪಾಂಡಿತ್ಯಪೂರ್ಣ ಸಂಭಾಷಣೆ, ಆಕರ್ಷಕ ಪದಪ್ರಯೋಗ ಮತ್ತು ಭಾವಪೂರ್ಣ ನಟನೆಯು ಅವರಿಗೆ ಎಲ್ಲಾ ಸಮುದಾಯಗಳಿಂದ ಅಪಾರ ಅಭಿಮಾನಿಗಳನ್ನು ಗಳಿಸಿಕೊಟ್ಟಿದೆ.
'ಬಲಿಪ ಮಾರ್ಗ, ಅಗರಿ ಮಾರ್ಗ'ಕ್ಕೆ ಕೃತಿ ಪ್ರಶಸ್ತಿ:
ಕೃಷ್ಣಪ್ರಕಾಶ ಉಳಿತ್ತಾಯರು ಖ್ಯಾತ ಹಿಮ್ಮೇಳ ಕಲಾವಿದರಾಗಿದ್ದು 'ಬಲಿಪ ಮಾರ್ಗ' ಹಾಗೂ 'ಅಗರಿ ಮಾರ್ಗ' ಕೃತಿಗಳ ಲೇಖಕರು. ಬಲಿಪ ಮಾರ್ಗ ಕೃತಿಯು ಯಕ್ಷಗಾನ ರಂಗದ ಹಿರಿಯ ಕಲಾವಿದರಾದ ಬಲಿಪ ನಾರಾಯಣ ಭಾಗವತರು ಹಾಗೂ ಕಿರಿಯ ಬಲಿಪ ನಾರಾಯಣ ಭಾಗವತರ ಬದುಕು, ಗಾನ ಮಾರ್ಗ ಇವುಗಳನ್ನು ನಿರೂಪಿಸುವ ಕೃತಿಯಾಗಿದೆ. ಅಗರಿ ಮಾರ್ಗ ಕೃತಿಯು ತೆಂಕುತಿಟ್ಟಿನ ಯಕ್ಷಗಾನ ಪ್ರದರ್ಶನ ಕಲೆಯಲ್ಲಿ ಯಕ್ಷಬ್ರಹ್ಮ ಎಂದು ಪ್ರಸಿದ್ದರಾದ ಅಗರಿ ಶ್ರೀನಿವಾಸ ಭಾಗವತರ ಬದುಕು, ಹಾಡುವ ಕ್ರಮ, ರಚನೆ, ಸಾಹಿತ್ಯ ವೈಶಿಷ್ಟ್ಯತೆಯನ್ನು ತೆರೆದಿಡುವ ಮಹತ್ವದ ಕೃತಿಯಾಗಿದೆ.
ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್, ಯಕ್ಷಗಾನ ಸಂಘಟಕ ಮುರಲೀ ಕಡೆಕಾರ್ ಹಾಗೂ ಕೇಂದ್ರದ ನಿರ್ದೆಶಕರಾದ ಡಾ.ಧನಂಜಯ ಕುಂಬ್ಳೆ ಅವರನ್ನು ಒಳಗೊಂಡಿರುವ ಆಯ್ಕೆ ಸಮಿತಿ ಇವರ ಹೆಸರನ್ನು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಮಂಗಳೂರು ವಿವಿ ಕುಲಪತಿ ಪ್ರೊ.ಪಿಎಲ್.ಧರ್ಮ ಅಧ್ಯಕ್ಷತೆಯಲ್ಲಿ ಮಾರ್ಚ್ ನಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಮತ್ತು ಕೃತಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಗಳೂರು ವಿವಿ ಕುಲಸಚಿವರಾದ ಪ್ರೊ.ಗಣೇಶ್ ಸಂಜೀವ್ ಹಾಗೂ ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೆಶಕರಾದ ಡಾ.ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಂದ್ರಕ್ಕೆ ದಯಾನಂದ ಪೈಗಳಿಂದ ಒಂದು ಕೋಟಿ ಅನುದಾನ:
ಮಂಗಳೂರು ವಿಶ್ವವಿದ್ಯಾನಿಲಯದ ಡಾ.ದಯಾನಂದ ಪೈ - ಸತೀಶ್ ಪೈ ಯಕ್ಷಗಾನ ಕೇಂದ್ರದಲ್ಲಿ ಅಧ್ಯಯನ ಸಂಶೋಧನೆಯನ್ನು ವಿಸ್ತರಿಸುವ ಉದ್ದೇಶಕ್ಕಾಗಿ ಬೆಂಗಳೂರಿನ ಉದ್ಯಮಿ ಡಾ.ದಯಾನಂದ ಪೈ ಒಂದು ಕೋಟಿ ವಿಶೇಷ ಅನುದಾನ ನೀಡುವುದಾಗಿ ತಿಳಿಸಿದ್ದಾರೆ ಎಂದು ವಿವಿ ಕುಲಪತಿ ಪ್ರೊ.ಪಿ.ಎಲ್ ಧರ್ಮ ತಿಳಿಸಿದ್ದಾರೆ. ಯಕ್ಷಮಂಗಳ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ದಯಾನಂದ ಪೈಗಳು ಭಾಗವಹಿಸಲಿದ್ದು ಆ ದಿನ ಈ ಮೊತ್ತವನ್ನು ಹಸ್ತಾಂತರಿಸಲಿದ್ದಾರೆ. ವಿವಿಯ ಶೈಕ್ಷಣಿಕ ಪ್ರಗತಿಗೆ ಕೈ ಜೋಡಿಸಿದ ಪೈಗಳನ್ನು ಕುಲಪತಿಗಳು ಅಭಿನಂದಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am