ಬ್ರೇಕಿಂಗ್ ನ್ಯೂಸ್
03-03-26 02:39 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 3: ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವಕ್ತಾರರಾಗಿದ್ದ ಮತ್ತು ಸುದೀರ್ಘ ಕಾಲದಿಂದ ನ್ಯಾಯ ನಿಷ್ಠೆಯಿಂದ ರಾಜಕೀಯ ಜೀವನದಲ್ಲಿದ್ದ ನಗರದ ರಥಬೀದಿ ನಿವಾಸಿ ಸತೀಶ್ ಪ್ರಭು(59) ಇಂದು ಬೆಳಗ್ಗೆ ನಿಧನರಾಗಿದ್ದಾರೆ.
ರಥಬೀದಿಯ ತಮ್ಮ ಮನೆಯಲ್ಲಿದ್ದಾಗ ಕುಸಿದು ಬಿದ್ದ ಅವರನ್ನು ಕೂಡಲೇ ಯೆನಪೋಯ ಆಸ್ಪತ್ರೆಗೆ ಒಯ್ಯಲಾಗಿತ್ತು. ವೈದ್ಯರು ಪರೀಕ್ಷಿಸಿ ಬ್ರೇನ್ ಹೇಮರೇಜ್ ಆಗಿರುವುದಾಗಿ ಹೇಳಿದ್ದು ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ ಮತ್ತು ಏಕೈಕ ಪುತ್ರನನ್ನು ಅಗಲಿದ್ದಾರೆ.
ಸಂಘನಿಕೇತನದ ಕೇಶವ ಸಂವರ್ಧನ ಸಮಿತಿಯ ಉಪಾಧ್ಯಕ್ಷ, ರಥಬೀದಿ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದ ಸತೀಶ್ ಪ್ರಭು ಅವರು ಬಾಲ್ಯದಿಂದಲೇ ಸಂಘದ ಸ್ವಯಂಸೇವಕರು. ಸಂಘನಿಕೇತನದ ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿಯಾಗಿ ಮುಂಚೂಣಿಯಲ್ಲಿದ್ದು ಸೇವಾ ಚಟುವಟಿಕೆ ನಡೆಸುತ್ತಿದ್ದರು. ಕುದ್ರೋಳಿಯಲ್ಲಿ ವಿವೇಕಾನಂದ ಪ್ರಿಂಟರ್ಸ್ ಎನ್ನುವ ಸಣ್ಣ ಮುದ್ರಣ ಸಂಸ್ಥೆಯನ್ನು ಹೊಂದಿದ್ದ ಸತೀಶ್ ಪ್ರಭು, ಅದರಲ್ಲೇ ಜೀವನ ತೃಪ್ತಿ ಕಂಡವರು. ಆರೆಸ್ಸೆಸ್, ಬಿಜೆಪಿಯಲ್ಲಿ ದೊಡ್ಡವರ ಸಂಪರ್ಕ ಇದ್ದರೂ, ಅದನ್ನು ಮುಂದಿಟ್ಟು ರಾಜಕೀಯ ಮಾಡಿದವರಲ್ಲ. ಕಳೆದ ಬಾರಿ ಬಿಜೆಪಿ ಒಳಗಡೆ ಅಸಮಧಾನಗೊಂಡು ಕೆಲವು ಸಮಯ ಪಕ್ಷವನ್ನು ತ್ಯಜಿಸಿ ಕಾಂಗ್ರೆಸ್ ಸೇರಿದ್ದರು. ಆದರೆ ಅಲ್ಲಿ ಒಗ್ಗಿಕೊಳ್ಳಲು ಸಾಧ್ಯವಾಗದೆ ಮತ್ತೆ ಮಾತೃಪಕ್ಷಕ್ಕೆ ಸೇರಿ ಸಕ್ರಿಯವಾಗಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am