ಬ್ರೇಕಿಂಗ್ ನ್ಯೂಸ್
03-03-26 03:10 pm HK News Staffer ಕರಾವಳಿ
ಮಂಗಳೂರು, ಮಾ.2: ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ ಲಂಚಕ್ಕೆ ಕೈಯೊಡ್ಡಿದ್ದಾಗಲೇ ಮಂಗಳೂರು ವಿದ್ಯುತ್ ಉಪ ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕಚೇರಿಯ ಸೆಕೆಂಡ್ ಡಿವಿಶನ್ ಕ್ಲರ್ಕ್ ಸಂಪತ್ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕರ್ನಾಟಕ ಸರ್ಕಾರದ ಮಾನ್ಯತೆ ಪಡೆದ ಇಲೆಕ್ಟ್ರಿಕಲ್ ಪ್ರಥಮ ದರ್ಜೆ ಗುತ್ತಿಗೆದಾರರಾಗಿ ಕೆಲಸ ಮಾಡಿಕೊಂಡಿದ್ದು, 2025ರಲ್ಲಿ ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ಗಳಿಗೆ ಒಳಪಟ್ಟ ದಾರಿ ದೀಪ ವಿಸ್ತರಣೆಯ ಕಾಮಗಾರಿಗಳನ್ನು ನಿರ್ವಹಿಸಿದ್ದು, ಸದರಿ ಕೆಲಸದ ಬಿಲ್ಗೆ 4 ಪರ್ಸೆಂಟ್ನಂತೆ ಒಟ್ಟು ರೂ. 22,600/- ಕೊಡಬೇಕು ಎಂಬುದಾಗಿ ಮಂಗಳೂರಿನ ವಿದ್ಯುತ್ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಎಸ್.ಡಿ.ಎ ಆಗಿರುವ ಸಂಪತ್ ಎಂಬವರು ಫಿರ್ಯಾದುದಾರರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೋಮವಾರ ಮಾರ್ಚ್ 02 ರಂದು ಆರೋಪಿ ಸಂಪತ್ ಅವರು ಫಿರ್ಯಾದುದಾರರಿಂದ ರೂ. 22,600/- ಲಂಚದ ಹಣವನ್ನು ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುತ್ತಾರೆ. ಸದರಿಯವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕಾರ್ಯಾಚರಣೆಯನ್ನ ಪೊಲೀಸ್ ಅಧೀಕ್ಷಕ ಬಿ.ಪಿ ದಿನೇಶ್ ಕುಮಾರ್ ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ಉಪಾಧೀಕ್ಷಕ ಸುರೇಶ್ ಕುಮಾರ್ ಪಿ, ಡಾ. ಗಾನ ಪಿ ಕುಮಾರ್, ಪಿ.ಐ ಶ್ರೀಮತಿ ಭಾರತಿ ಜಿ, ರವರ ಉಸ್ತುವಾರಿಯಲ್ಲಿ ಪೊಲೀಸ್ ನಿರೀಕ್ಷಕರಾದ ಚಂದ್ರಶೇಖರ್ ಕೆ.ಎನ್. ಅವರು ಸಿಬ್ಬಂದಿಗಳಾದ ರಾಜಪ್ಪ, ಮಹೇಶ್, ಆದರ್ಶ್, ರಾಮ ನಾಯ್ಕ, ಗಂಗಣ್ಣ, ಮಹಾದೇವ, ಪವಿತ್ರ, ಲಕ್ಷ್ಮೀ, ರವಿ ಪವಾರ್, ನವೀನ್ ಪಾಲ್ಗೊಂಡಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am