ಬ್ರೇಕಿಂಗ್ ನ್ಯೂಸ್
04-03-26 10:54 am HK News Staffer ಕರಾವಳಿ
ಉಡುಪಿ, ಮಾರ್ಚ್ 04: ಪ್ರೇಮ ಪ್ರಕರಣದ ರಾಜಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ ಚಾಕು ಇರಿತ ನಡೆದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡಿರುವ ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಪ್ರಾಣಾಪಾಯದಿಂದ ಪಾರಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಲ್ಪೆ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ಪ್ರೇಮ ಸಂಬಂಧದ ಕುರಿತು ಮಾತುಕತೆಗೆ ಇಬ್ಬರು ಕಡೆಯವರೂ ಸೇರಿದ್ದರು. ಈ ವೇಳೆ ಉದ್ವಿಗ್ನತೆ ಉಂಟಾಗಿ, ಯುವತಿಯ ಕಡೆಯವರಿಂದ ಮಂಜು ಕೊಳ ಮೇಲೆ ಚಾಕು ಇರಿತ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಗಾಯಗೊಂಡ ಮಂಜು ಕೊಳ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಘಟನೆಯ ನಂತರ ಸ್ಥಳೀಯರು ಆರೋಪಿಗಳನ್ನು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ಸಂಬಂಧ ಮಲ್ಪೆ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ.
ಉಡುಪಿ ಜಿಲ್ಲಾ ಎಸ್ಪಿ ಹರಿರಾಮ್ ಶಂಕರ್ ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಘಟನೆ ವೈಯಕ್ತಿಕ ಕಾರಣಗಳಿಂದ ನಡೆದಿದೆ. ಪ್ರಕರಣಕ್ಕೆ ಯಾವುದೇ ಕೋಮು ಹಿನ್ನೆಲೆ ಇಲ್ಲ. ಸಾರ್ವಜನಿಕರು ವದಂತಿಗಳನ್ನು ಹರಡಬಾರದು ಎಂದು ಅವರು ಮನವಿ ಮಾಡಿದ್ದಾರೆ.
ಪ್ರಸ್ತುತ ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am