ಬ್ರೇಕಿಂಗ್ ನ್ಯೂಸ್
06-03-26 12:17 pm supritha Jain ಕರಾವಳಿ
ಮಂಗಳೂರು, ಮಾರ್ಚ್ 06: ವಿವಾದಾತ್ಮಕ ಚಿತ್ರ ‘ದಿ ಕೇರಳ ಸ್ಟೋರಿ 2′ ಬಿಡುಗಡೆಗೂ ಮುನ್ನವೇ ರಾಜಕೀಯ ಹಾಗೂ ಸಾಮಾಜಿಕ ಚರ್ಚೆಗೆ ಕಾರಣವಾಗಿತ್ತು. ಚಿತ್ರದಲ್ಲಿನ ಲವ್ ಜಿಹಾದ್ ಹಾಗೂ ಬಲವಂತದ ಮತಾಂತರದ ವಿಷಯಗಳ ಚಿತ್ರಣ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತದೆ ಎಂಬ ಆರೋಪಗಳು ಕೇಳಿ ಬಂದಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಚಿತ್ರದ ಉಚಿತ ಪ್ರದರ್ಶನ ಆಯೋಜನೆ ಮಾಡಲಾಗಿದ್ದು, ಇದರ ಸುತ್ತ ಹೊಸ ವಿವಾದಗಳು ಸೃಷ್ಟಿಯಾಗಿದೆ.
ಪುತ್ತೂರಿನ ಜಿಎಲ್ ಒನ್ ಮಾಲ್‌ನಲ್ಲಿ ಸೀತಾ ಪರಿವಾರ ಸಂಘಟನೆಯ ವತಿಯಿಂದ 16 ರಿಂದ 22 ವರ್ಷದ ಕಾಲೇಜು ವಿದ್ಯಾರ್ಥಿನಿಯರಿಗೆ ಉಚಿತ ಸಿನಿಮಾ ಪ್ರದರ್ಶನ ಆಯೋಜಿಸಲಾಗಿತ್ತು. ನಿನ್ನೆ ಸಂಜೆ ಮೂರು ಪ್ರದರ್ಶನಗಳು ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕೆಲವು ರಾಜಕೀಯ ಹಾಗೂ ಸಂಘಟನೆಗಳ ಮುಖಂಡರು ಬೆಂಬಲ ವ್ಯಕ್ತಪಡಿಸಿದ್ದರು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಈ ಕಾರ್ಯಕ್ರಮದ ಕುರಿತು ವಿವಾದಾತ್ಮಕ ಸಂದೇಶಗಳು ಹರಿದಾಡಿದ್ದು, ಮಾಲ್ ಅನ್ನು ಬಹಿಷ್ಕರಿಸುವಂತೆ ಕೆಲವರು ಕರೆ ನೀಡಿರುವ ಆರೋಪಗಳು ಕೇಳಿಬಂದಿವೆ. ಜೊತೆಗೆ ಮುಸ್ಲಿಂ ಸಮುದಾಯದ ಯುವತಿಯರು ಮಾಲ್‌ಗೆ ಹೋಗುವಾಗ ಎಚ್ಚರಿಕೆ ವಹಿಸಬೇಕು ಎಂಬ ರೀತಿಯ ಸಂದೇಶಗಳೂ ವೈರಲ್ ಆಗಿದ್ದು, ಈ ವಿಚಾರ ತೀವ್ರ ಚರ್ಚೆಗೆ ಕಾರಣವಾಗಿದೆ.
ಸಿನಿಮಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ಬೆದರಿಕೆ ಕರೆಗಳು ಬಂದಿರುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದ ಬುಕ್ಕಿಂಗ್‌ಗಾಗಿ ನೀಡಲಾಗಿದ್ದ ಮಹಿಳೆಯರ ಮೊಬೈಲ್ ಸಂಖ್ಯೆಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಕೆಲ ಕರೆಗಳು ವಿದೇಶಗಳಿಂದ ಬಂದಿರುವ ಸಾಧ್ಯತೆಯೂ ಇದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿ, ಸ್ಥಳೀಯ ಹಾಗೂ ವಿದೇಶ ಮೂಲದ ಕೆಲ ಶಕ್ತಿಗಳು ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿರುವುದಾಗಿ ಆರೋಪಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ಜಗ್ಗದೆ ಸಮಾಜದಲ್ಲಿ ಜಾಗೃತಿ ಕಾರ್ಯ ಮುಂದುವರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಘಟನೆ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಬಿಗಿ ಭದ್ರತೆ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am