ಬ್ರೇಕಿಂಗ್ ನ್ಯೂಸ್
12-03-26 02:44 pm HK News Staffer ಕರಾವಳಿ
ಬೆಂಗಳೂರು, ಮಾರ್ಚ್ 12: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ ಎಂಬವರನ್ನು ಬಂಧಿಸಲಾಗಿದೆ.
ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಡೆಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ), 1 ಕಾರನ್ನು ವಶಕ್ಕೆ ಪಡೆಯಲಾಗಿದೆ.
ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ:
ಚೀನಾ ಲಿಂಕ್ ಹೊಂದಿರುವ ಮ್ಯೂಲ್ ಅಕೌಂಟ್ ದಂಧೆ ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ, ಬಂಧಿತ ಆರೋಪಿಗಳು ಭಾರತೀಯರಿಂದ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿಯನ್ನು ಖರೀದಿ ಮಾಡುತ್ತಿದ್ದರು. ವಾಟ್ಸಾಪ್ ಮತ್ತು ಟೆಲಿಗ್ರಾಮ್ ಮೂಲಕ ಅವರು ಚೀನಾದ ಸೈಬರ್ ವಂಚಕರೊಂದಿಗೆ ಸಂಪರ್ಕದಲ್ಲಿದ್ದು, ಬಳಿಕ ಅದೇ ಕ್ರಿಪ್ಟೋಕರೆನ್ಸಿಯನ್ನು ಅವರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಕ್ರಿಪ್ಟೊ ವ್ಯವಹಾರದ ಬದಲಾಗಿ ಆರೋಪಿಗಳು ರೂಪಾಯಿ ರೂಪದಲ್ಲಿ ಹಣವನ್ನು ವಾಪಸ್ ಪಡೆಯುತ್ತಿದ್ದರು. ಇದಕ್ಕಾಗಿ ಮಂಗಳೂರು ನಗರದ ಸಾರ್ವಜನಿಕರಿಂದ ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸುತ್ತಿದ್ದರು.
ಸುಮಾರು 70ಕ್ಕೂ ಹೆಚ್ಚು ಬ್ಯಾಂಕ್ ಖಾತೆಗಳನ್ನು ಸಂಗ್ರಹಿಸಿ ಚೀನಾದವರಿಗೆ ನೀಡಲಾಗಿತ್ತು. ನಂತರ ಚೀನಾದ ಸೈಬರ್ ವಂಚಕರು ಆ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸುತ್ತಿದ್ದರು. ಆದರೆ ಆ ಹಣ ಸೈಬರ್ ವಂಚನೆಯ ಮೂಲಕ ಪಡೆದದ್ದಾಗಿತ್ತು ಎಂದು ತಿಳಿದುಬಂದಿದೆ. ಚೀನಾದವರ ಸೈಬರ್ ವಂಚನೆ ಬಗ್ಗೆ ಆರೋಪಿಗಳಿಗೆ ತಿಳಿದಿದ್ದರೂ ಸಹ, ಹಣದ ಆಸೆಗೆ ಅವರು ಅವರಿಗೆ ಸಾಥ್ ನೀಡಿದ್ದಾರೆ. ಪ್ರಕರಣದಲ್ಲಿ ಬಳಸಲಾಗಿದ್ದ 37 ಬ್ಯಾಂಕ್ ಖಾತೆಗಳ ವಿರುದ್ಧ ದೇಶದಾದ್ಯಂತ 88ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am