ಬ್ರೇಕಿಂಗ್ ನ್ಯೂಸ್
12-03-26 10:47 pm mangalore ಕರಾವಳಿ
ಸುಳ್ಯ, ಮಾರ್ಚ್ 12: ಸುಳ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಮಂಜು ಪಿ (42) ಅವರು ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ದುರ್ಘಟನೆ ಗುರುವಾರ ಸಂಭವಿಸಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಮೆಡಿಕಲ್ ಶಾಪ್ಗೆ ತೆರಳಿದ್ದ ಮಂಜು ಅವರು ಅಲ್ಲಿಯೇ ಬಿದ್ದು ಕೊನೆಯುಸಿರೆಳೆದಿದ್ದಾರೆ.
ಮಂಜು ಅವರು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಬೆರಿಯಾ ಮೂಲದವರಾಗಿದ್ದು ಎಂದಿನಂತೆ ಇಂದು ಕಾಲೇಜಿಗೆ ಆಗಮಿಸಿ ವಿದ್ಯಾರ್ಥಿಗಳಿಗೆ ಪಾಠ ಬೋಧಿಸಿದ್ದರು. ಮಧ್ಯಾಹ್ನದ ಹೊತ್ತಿಗೆ ಆರೋಗ್ಯದಲ್ಲಿ ವ್ಯತ್ಯಾಸವಾದ ಹಿನ್ನೆಲೆಯಲ್ಲಿ ವಿಶ್ರಾಂತಿ ಪಡೆಯಲು ತಮ್ಮ ಕೊಠಡಿಗೆ ತೆರಳುವುದಾಗಿ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ.
ಬಳಿಕ ಅವರು ಸುಳ್ಯದ ಶ್ರೀರಾಮಪೇಟೆ ಪ್ರದೇಶದಲ್ಲಿರುವ ಮೆಡಿಕಲ್ ಶಾಪ್ಗೆ ಔಷಧ ಪಡೆಯಲು ತೆರಳಿದ್ದು ಅಲ್ಲಿಯೇ ಏಕಾಏಕಿ ಕುಸಿದು ಬಿದ್ದಿದ್ದಾರೆ. ಸ್ಥಳದಲ್ಲಿದ್ದವರು ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದರೂ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಮೃತಪಟ್ಟಿದ್ದಾರೆ. ಹೃದಯಾಘಾತ ಈ ದುರಂತಕ್ಕೆ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ.
ಮಂಜು ಅವರು ಶಿಕ್ಷಣ ಕ್ಷೇತ್ರದಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿದ್ದವರು. ಕೆ.ಆರ್.ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸುಮಾರು 10 ವರ್ಷ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಬಳಿಕ, 2024ರಲ್ಲಿ ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಕನ್ನಡ ಉಪನ್ಯಾಸಕರಾಗಿ ನೇಮಕಗೊಂಡಿದ್ದರು. ವಿದ್ಯಾರ್ಥಿಗಳೊಂದಿಗೆ ಆತ್ಮೀಯವಾಗಿ ಬೆರೆತು ಪಾಠ ಬೋಧಿಸುವ ಶಿಕ್ಷಕರಾಗಿ ಅವರು ಗುರುತಿಸಿಕೊಂಡಿದ್ದರು ಎಂದು ಸಹೋದ್ಯೋಗಿಗಳು ಹೇಳಿದ್ದಾರೆ.
ಅವರ ಆಕಸ್ಮಿಕ ನಿಧನ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳಲ್ಲಿ ದುಃಖದ ಛಾಯೆ ಮೂಡಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am