ಬ್ರೇಕಿಂಗ್ ನ್ಯೂಸ್
13-03-26 01:51 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 13 : ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿರುವ ನಡುವೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸ್ಪಷ್ಟಪಡಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಡಿ. ನಾಗರಾಜ್ ಮಾತನಾಡಿ, ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್ ತಾತ್ಕಾಲಿಕ ನಿಲ್ಲಿಸಿರುವುದರಿಂದ ಹೋಟೆಲ್ಗಳು, ದೇವಸ್ಥಾನಗಳು ಹಾಗೂ ದೊಡ್ಡ ಪ್ರಮಾಣದಲ್ಲಿ ಸಿಲಿಂಡರ್ ಬಳಸುವ ಸಂಸ್ಥೆಗಳಿಗೆ ಮಾತ್ರ ತೊಂದರೆ ಉಂಟಾಗಿದೆಯೇ ಹೊರತು ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಿಲ್ಲ ಎಂದಿದ್ದಾರೆ.
“ಗೃಹ ಬಳಕೆಯ ಎಲ್ಪಿಜಿ ಸರಬರಾಜಿನಲ್ಲಿ ಯಾವುದೇ ಕೊರತೆ ಇಲ್ಲ. ಆದರೆ ಕೇಂದ್ರ ಸರ್ಕಾರದ ಸೂಚನೆಯಂತೆ ವಾಣಿಜ್ಯ ಸಂಸ್ಥೆಗಳಿಗೆ ಸಿಲಿಂಡರ್ ಪೂರೈಕೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇದರಿಂದ ವಾಣಿಜ್ಯ ಬಳಕೆದಾರರಿಗೆ ಮಾತ್ರ ಸಮಸ್ಯೆ ಎದುರಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 6,22,454 ಗೃಹ ಬಳಕೆಯ ಎಲ್ಪಿಜಿ ಸಂಪರ್ಕಗಳು ಇದ್ದು, ಸರಬರಾಜಿನಲ್ಲಿ ಯಾವುದೇ ವಿಳಂಬ ಅಥವಾ ವ್ಯತ್ಯಯ ಕುರಿತು ದೂರುಗಳು ಬಂದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದರೆ ಜಿಲ್ಲೆಯಲ್ಲಿ ಇರುವ 38,787 ವಾಣಿಜ್ಯ ಸಂಪರ್ಕಗಳಿಗೆ ಮಾತ್ರ ಸರಬರಾಜು ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಹಲವಾರು ಹೋಟೆಲ್ಗಳು, ದೇವಸ್ಥಾನಗಳು ಹಾಗೂ ಕ್ಯಾಟರಿಂಗ್ ಸೇವೆಗಳು ಪರ್ಯಾಯವಾಗಿ ಕಟ್ಟಿಗೆ ಬಳಕೆ ಮಾಡುವ ಪರಿಸ್ಥಿತಿ ಎದುರಾಗಿದೆ. ನಗರದ ಕಟ್ಟಿಗೆ ಮಾರಾಟ ಅಂಗಡಿಗಳಲ್ಲಿ ಕಳೆದ ಕೆಲವು ದಿನಗಳಿಂದ ವ್ಯಾಪಾರ ಹೆಚ್ಚಾಗಿದೆ ಎಂದು ವ್ಯಾಪಾರಿಗಳು ತಿಳಿಸಿದ್ದಾರೆ. ವ್ಯಾಪಾರಿಗಳ ಪ್ರಕಾರ, ಎಲ್ಪಿಜಿ ಬಳಕೆ ಹೆಚ್ಚಾದ ಬಳಿಕ ಕಟ್ಟಿಗೆ ಬೇಡಿಕೆ ಕುಸಿತವಾಗಿತ್ತು. ಆದರೆ ಈಗ ಮತ್ತೆ ಕಟ್ಟಿಗೆಗೆ ಬೇಡಿಕೆ ಬರುತ್ತಿದ್ದು, ಪ್ರಸ್ತುತ 100 ಕಿಲೋ ವಿಭಜಿತ ಕಟ್ಟಿಗೆಗೆ ಸುಮಾರು ₹1,000 ದರ ಇದೆ ಎಂದಿದ್ದಾರೆ.
ಉಡುಪಿ ಜಿಲ್ಲೆಯಲ್ಲೂ ಕೊರತೆ ಇಲ್ಲ:
ಈ ಮಧ್ಯೆ ಉಡುಪಿ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ. ಮಣಿಪಾಲದಲ್ಲಿ ಎಲ್ಪಿಜಿ ಏಜೆನ್ಸಿಗಳ ಸಭೆ ನಡೆಸಿದ ಅವರು, ಜಿಲ್ಲೆಯಲ್ಲಿ ಹೆಚ್ಚಿನ ಮನೆಗಳಿಗೆ ಎರಡು ಅನಿಲ ಸಂಪರ್ಕಗಳಿದ್ದು, ಒಂದೇ ಸಿಲಿಂಡರ್ ಇರುವ ಮನೆಗಳಿಗೆ ಮೊದಲ ಆದ್ಯತೆ ನೀಡುವಂತೆ ಸೂಚಿಸಿದ್ದಾರೆ. ಗೃಹ ಮತ್ತು ವಾಣಿಜ್ಯ ಸಿಲಿಂಡರ್ಗಳ ಅಕ್ರಮ ಮಾರಾಟ, ಸಂಗ್ರಹ, ಸಾಗಣೆ ಅಥವಾ ದುರುಪಯೋಗ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am