ಬ್ರೇಕಿಂಗ್ ನ್ಯೂಸ್
17-03-26 01:40 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 17: ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳು ಜೈಲು ಅಧೀಕ್ಷಕರು ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆಗೆ ಯತ್ನಿಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದ್ದು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈದಿಗಳಾದ ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಆಫ್ರಿದ್ ಮತ್ತು ಶೇಹರಾಜ್ ಅಲಿಯಾಸ್ ಶಾರೂಕ್ ಎಂಬವರು ಜೈಲಿನಲ್ಲಿ ದಾಂಧಲೆ ನಡೆಸಿದ್ದಾರೆ.
ಮಾರ್ಚ್ 13ರ ರಾತ್ರಿ ಸುಮಾರು 8 ಗಂಟೆಗೆ ಜೈಲು ಅಧೀಕ್ಷಕ ಶರಣಬಸಪ್ಪ ಅವರು ಕರ್ತವ್ಯದಲ್ಲಿದ್ದಾಗ, ವಿಚಾರಣಾಧೀನ ಕೈದಿ ಮೊಹಮ್ಮದ್ ಇಕ್ಬಾಲ್ ಅಧೀಕ್ಷಕರ ಕಚೇರಿಗೆ ನುಗ್ಗಿ ರಂಪಾಟ ಮಾಡಿದ್ದಾನೆ. ಹೊಸದಾಗಿ ಬರುವ ಕೈದಿಗಳನ್ನು ತನ್ನ ಸೂಚನೆಯಂತೆ ತನ್ನ ಕೊಠಡಿಗೇ ಸೇರಿಸಬೇಕು ಎಂದು ಪಟ್ಟು ಹಿಡಿದು ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಜೈಲು ಅಧೀಕ್ಷಕರಿಗೆ “ನೀನೇ ನನ್ನ ಟಾರ್ಗೆಟ್” ಎಂದು ಕೊಲೆ ಬೆದರಿಕೆ ಹಾಕಿದ್ದು, ಹಲ್ಲೆಗೆ ಮುಂದಾಗಿದ್ದಾನೆ. ಇದೇ ವೇಳೆ, ಈತನಿಗೆ ಸಾಥ್ ನೀಡಿದ ಮತ್ತೊಬ್ಬ ಕೈದಿ ಮೊಹಮ್ಮದ್ ಆಫ್ರೀದ್ ಪ್ಲಾಸ್ಟಿಕ್ ಕುರ್ಚಿಯಿಂದ ಸಿಬ್ಬಂದಿಗಳ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಇಬ್ಬರು ಕೈದಿಗಳು ಸೇರಿ ಜೈಲಿನಲ್ಲಿದ್ದ R.O. ವಾಟರ್ ಫಿಲ್ಟರ್ ಮೆಷಿನ್ ಮತ್ತು ಪೈಪ್ಗಳನ್ನು ಧ್ವಂಸಗೊಳಿಸಿದ್ದಾರೆ. ಇದರ ಅಂದಾಜು ಮೌಲ್ಯ ₹12,000 ಎಂದು ಹೇಳಲಾಗಿದೆ.
ಇದೇ ಸಮಯದಲ್ಲಿ ಶೇಹರಾಜ್ ಅಲಿಯಾಸ್ ಶಾರೂಕ್ ಎಂಬ ಕೈದಿ ಕೊಠಡಿಯ ಒಳಗಿನಿಂದಲೇ ಹಾಸಿಗೆ-ಹೊದಿಕೆಗಳಿಗೆ ಬೆಂಕಿ ಹಚ್ಚಿ, ಕ್ಯಾರಂ ಬೋರ್ಡ್ಗಳನ್ನು ಮುರಿದು ಹಲ್ಲೆ ಮಾಡಲು ಪ್ರಚೋದಿಸಿದ್ದಾನೆ. ಅಧೀಕ್ಷಕ ಶರಣಬಸಪ್ಪ ಅವರು ನೀಡಿದ ದೂರಿನ ಮೇರೆಗೆ ಮೂವರು ಕೈದಿಗಳ ವಿರುದ್ಧ ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಜೀವ ಬೆದರಿಕೆ ಮತ್ತು ಸರ್ಕಾರಿ ಸ್ವತ್ತು ನಾಶಪಡಿಸಿದ ಆರೋಪದಡಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am