ಬ್ರೇಕಿಂಗ್ ನ್ಯೂಸ್
26-03-26 10:29 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 26: ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ ಸೃಷ್ಟಿಸಿ ಸೈಬರ್ ವಂಚಕರು ಸಾರ್ವಜನಿಕರನ್ನು ಖೆಡ್ಡಾಕ್ಕೆ ಬೀಳಿಸಲು ಯತ್ನಿಸಿರುವ ಅಂಶ ಬೆಳಕಿಗೆ ಬಂದಿದ್ದು ಈ ಬಗ್ಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರು ನಗರದ ಸೈಬರ್ ಕ್ರೈಂ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರೇವಣ ಸಿದ್ದಪ್ಪ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮಾರ್ಚ್ 25ರಂದು ಸೈಬರ್ ವಿಭಾಗದ ಅಧಿಕಾರಿಗಳು ಗೂಗಲ್ ಪರಿಶೀಲಿಸುತ್ತಿದ್ದಾಗ, ‘ಮಂಗಳೂರು ಸಿಟಿ ಪೊಲೀಸ್’ ಹೆಸರಿನಲ್ಲಿ ಪ್ರತ್ಯೇಕ ನಕಲಿ ವೆಬ್ಸೈಟ್ (https://mangalorecitypolice.com/) ಇರುವುದು ಕಂಡುಬಂದಿದೆ. ಅಮಾಯಕ ಸಾರ್ವಜನಿಕರು ಮತ್ತು ಹಿರಿಯ ನಾಗರಿಕರನ್ನು ನಂಬಿಸಿ, ಅವರಿಂದ ಹಣ ಲೂಟಿ ಮಾಡುವ ದುರುದ್ದೇಶದಿಂದ ಈ ಜಾಲತಾಣವನ್ನು ಸೃಷ್ಟಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ. ಈ ನಕಲಿ ವೆಬ್ಸೈಟ್ನಲ್ಲಿ ಕೇವಲ ಮಾಹಿತಿ ಮಾತ್ರವಲ್ಲದೆ, ಅಪಾಯಕಾರಿ ಆನ್ಲೈನ್ ಗ್ಯಾಂಬ್ಲಿಂಗ್ (ಜೂಜಾಟ) ಗೇಮ್ಗಳನ್ನು ಅಳವಡಿಸಲಾಗಿದೆ.
‘ಗೇಟ್ಸ್ ಆಫ್ ಒಲಿಂಪಸ್’, ‘ಮಾಜಾಂಗ್ ವಿನ್ಸ್ 3’, ‘ಸ್ಟಾರ್ ಲೈಟ್ ಪ್ರಿನ್ಸೆಸ್ 1000’, ‘ಸ್ವೀಟ್ ಬೊನಾಂಜಾ’, ‘ಪೋಕರ್ ಒಮಾಹ’ ಸೇರಿದಂತೆ ನೂರಾರು ಜಾಕ್ಪಾಟ್ ಆಟಗಳು ಈ ಸೈಟ್ನಲ್ಲಿವೆ. ‘ಮಲ್ಟಿ ಸ್ಕ್ಯಾಟರ್ ಪ್ರಾಗ್ಮ್ಯಾಟಿಕ್’ ಎಂಬ ಹೆಸರಿನಡಿ ಈ ಆಟಗಳನ್ನು ಆಡಿಸಿ, ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುವ ಸಂಚು ರೂಪಿಸಲಾಗಿದೆ.
ಪೊಲೀಸ್ ಇಲಾಖೆಯ ಹೆಸರನ್ನು ದುರುಪಯೋಗಪಡಿಸಿ ಸೈಬರ್ ವಂಚನೆ ಎಸಗುತ್ತಿರುವ ಅಪರಿಚಿತ ವ್ಯಕ್ತಿಗಳು ಹಾಗೂ ನಕಲಿ ವೆಬ್ಸೈಟ್ ಸೃಷ್ಟಿಕರ್ತರ ವಿರುದ್ಧ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ಪೊಲೀಸ್ ಇಲಾಖೆಯ ಅಧಿಕೃತ ವೆಬ್ಸೈಟ್ಗಳನ್ನು ಹೊರತುಪಡಿಸಿ, ಇಂತಹ ಯಾವುದೇ ಅನುಮಾನಾಸ್ಪದ ಲಿಂಕ್ಗಳನ್ನು ಕ್ಲಿಕ್ ಮಾಡಬಾರದು. ಅದರಲ್ಲೂ ಹಣದ ಆಮಿಷ ಒಡ್ಡುವ ಆನ್ಲೈನ್ ಜೂಜಾಟದ ಸೈಟ್ಗಳ ಬಗ್ಗೆ ಜಾಗರೂಕರಾಗಿರಬೇಕು ಎಂದು ಸೈಬರ್ ಪೊಲೀಸರು ಮನವಿ ಮಾಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm