ಬ್ರೇಕಿಂಗ್ ನ್ಯೂಸ್
29-03-26 11:11 am HK News Staffer ಕರಾವಳಿ
ಬೆಂಗಳೂರು, ಮಾರ್ಚ್ 29: ಕಳೆದ ನಾಲ್ಕು ವರ್ಷಗಳ ಹಿಂದೆ ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಹತ್ವದ ತಿರುವು ಕಂಡುಬಂದಿದ್ದು, ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು ಎನ್ಐಎ ವಿಶೇಷ ನ್ಯಾಯಾಲಯ ಅಂಗೀಕರಿಸಿದೆ.
ಶಿವಮೊಗ್ಗ ಮೂಲದ 27 ವರ್ಷದ ಶಾರೀಕ್, 2022ರ ನವೆಂಬರ್ 19ರಂದು ಆಟೋರಿಕ್ಷಾದಲ್ಲಿ ಸಾಗಿಸುತ್ತಿದ್ದ ಪ್ರೆಶರ್ ಕುಕ್ಕರ್ ಬಾಂಬ್ ಅವನ ಮಡಿಲಲ್ಲೇ ಸ್ಫೋಟಗೊಂಡ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ. ಟೈಮರ್ ದೋಷದಿಂದ ಸಂಭವಿಸಿದ್ದ ಈ ಸ್ಫೋಟದಲ್ಲಿ ಆಟೋ ಚಾಲಕನೂ ಗಾಯಗೊಂಡಿದ್ದನು. ಬಳಿಕ ಚಿಕಿತ್ಸೆ ಪಡೆದ ಶಾರೀಕ್ ಅನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಅಧಿಕಾರಿಗಳು ಬಂಧಿಸಿದ್ದರು.
ಆರಂಭದಲ್ಲಿ, 2024ರ ಏಪ್ರಿಲ್ 20ರಂದು ನ್ಯಾಯಾಲಯದ ಮುಂದೆ ಶಾರೀಕ್ ತಾನು ನಿರಪರಾಧಿ ಎಂದು ಹೇಳಿದ್ದ. ಆದರೆ ನಂತರ ತನ್ನ ನಿಲುವು ಬದಲಿಸಿಕೊಂಡು, 2025ರ ಡಿಸೆಂಬರ್ನಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್ನ ಸೆಕ್ಷನ್ 229 ಅಡಿಯಲ್ಲಿ ತಪ್ಪೊಪ್ಪಿಗೆ ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಯನ್ನು 2026ರ ಮಾರ್ಚ್ 26ರಂದು ನ್ಯಾಯಾಲಯ ಮಾನ್ಯಗೊಳಿಸಿದೆ.
ಅರ್ಜಿಯಲ್ಲಿ ಹೇಳಿದ್ದೇನು?
ಶಾರೀಕ್ ತನ್ನ ಅರ್ಜಿಯಲ್ಲಿ, “ನಾನು ಕುಕ್ಕರ್ನಲ್ಲಿ ಐಇಡಿ ಇಟ್ಟು ಸ್ಫೋಟ ಮಾಡಿದ್ದೇನೆ. ನನಗೆ ಪಶ್ಚಾತ್ತಾಪವಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಿ” ಎಂದು ಒಪ್ಪಿಕೊಂಡಿದ್ದಾನೆ. ಮೂರು ತಿಂಗಳ ವಿಚಾರಣೆ ಬಳಿಕ ನ್ಯಾಯಾಲಯ ಈ ತಪ್ಪೊಪ್ಪಿಗೆಯನ್ನು ಅಂಗೀಕರಿಸಿದೆ.
ಎನ್ಐಎ ತನಿಖೆಯಲ್ಲಿ ಬಹಿರಂಗವಾದ ಸಂಗತಿಗಳು
ಎನ್ಐಎ ತನಿಖೆಯ ಪ್ರಕಾರ, ಶಾರೀಕ್ ಐಸಿಸ್ ಪ್ರೇರಿತ ಶಿವಮೊಗ್ಗ ಮಾಡ್ಯೂಲ್ನ ಸದಸ್ಯನಾಗಿದ್ದು, 2020ರಿಂದ ಹಲವು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. 2022ರ ಸೆಪ್ಟೆಂಬರ್ನಲ್ಲಿ ಶಿವಮೊಗ್ಗದಲ್ಲಿ ನಡೆದ ಐಇಡಿ ಪರೀಕ್ಷಾ ಪ್ರಕರಣದಲ್ಲೂ ಅವನ ಪಾತ್ರವಿತ್ತು. 2020ರಲ್ಲಿ ಮಂಗಳೂರಿನಲ್ಲಿ ನಡೆದ ರಾಷ್ಟ್ರವಿರೋಧಿ ಗೋಡೆ ಬರಹ ಪ್ರಕರಣದಲ್ಲೂ ಈತ ಬಂಧನಕ್ಕೊಳಗಾಗಿದ್ದನು.
ಇನ್ನಷ್ಟು ಆತಂಕಕಾರಿ ಅಂಶವೆಂದರೆ, 2024ರ ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕಫೆ ಬಾಂಬ್ ಸ್ಫೋಟ ಪ್ರಕರಣದಲ್ಲೂ ಶಾರೀಕ್ ಕೈಜೋಡಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ, ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಾತ್ರ ಆತ ತಪ್ಪೊಪ್ಪಿಕೊಂಡಿದ್ದು, ಇತರೆ ಪ್ರಕರಣಗಳ ಬಗ್ಗೆ ತನಿಖೆ ಮುಂದುವರಿದಿದೆ.
ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಆರೋಪಿ ಶಾರೀಕ್ ತಪ್ಪೊಪ್ಪಿಕೊಂಡಿರುವುದು ತನಿಖೆಗೆ ದೊಡ್ಡ ತಿರುವು ನೀಡಿದ್ದು, ಇತರೆ ಉಗ್ರ ಚಟುವಟಿಕೆಗಳಿಗೂ ಈ ಬೆಳವಣಿಗೆ ಪ್ರಮುಖ ಸುಳಿವು ನೀಡುವ ಸಾಧ್ಯತೆ ಇದೆ.
29-03-26 10:19 am
HK News Staffer
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
29-03-26 11:11 am
HK News Staffer
ಬೇಸಗೆ ಬಿರು ಬಿಸಿಲ ನಡುವೆ ಕರಾವಳಿಯಲ್ಲಿ ಹಲವೆಡೆ ಮಳೆ...
28-03-26 09:08 pm
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
29-03-26 12:41 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷದ ಕಮೆಂಟ್ ; ಖುರಾನ...
28-03-26 07:21 pm
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm