ಬ್ರೇಕಿಂಗ್ ನ್ಯೂಸ್
31-03-26 03:01 pm HK News Staffer ಕರಾವಳಿ
ಮಂಗಳೂರು, ಮಾರ್ಚ್ 31: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಬಳಿಯ ಕಳಿಯ ಗ್ರಾಮದಲ್ಲಿ ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ಅನಿರೀಕ್ಷಿತವಾಗಿ ತೆರೆದುಕೊಂಡು ಒಳಗಡೆ ನಿಂತಿದ್ದ ಇಬ್ಬರು ಸೋದರ ವಿದ್ಯಾರ್ಥಿನಿಯರು ರಸ್ತೆ ಮೇಲೆ ಬಿದ್ದಿದ್ದಾರೆ.
ಪುತ್ತೂರಿನಿಂದ ಧರ್ಮಸ್ಥಳದ ದಾರಿಯಲ್ಲಿ ಸಾಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆ ರೋಡ್ ತಿರುವಿನಲ್ಲಿ ವೇಗವಾಗಿ ಸಾಗುತ್ತಿದ್ದಾಗ ಬಸ್ಸಿನ ಬಾಗಿಲು ಏಕಾಏಕಿ ತೆರೆಯಲ್ಪಟ್ಟಿದೆ. ಈ ವೇಳೆ ಬಸ್‌ನ ಬಾಗಿಲಿನ ಬಳಿಯೇ ನಿಂತಿದ್ದ ಅಕ್ಕ ಮೊದಲಿಗೆ ರಸ್ತೆಗೆ ಬಿದ್ದರೆ, ಅವರನ್ನು ರಕ್ಷಿಸಲು ಮುಂದಾದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಗೆ ಬಿದ್ದಿದ್ದಾರೆ.
ಈ ಘಟನೆ ರಸ್ತೆ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿದ್ದು, ದೃಶ್ಯವು ನೋಡುವವರ ಎದೆ ನಡುಗಿಸುವಂತಿದೆ. ಸ್ಥಳೀಯರು ತಕ್ಷಣ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದೃಷ್ಟವಶಾತ್ ಸಹೋದರಿಯರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯ ಕುರಿತು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
Two sisters fall from a moving KSRTC bus after the door suddenly opens near Belthangady, Mangaluru. Shocking CCTV footage captures the moment. Both sustained minor injuries and were rushed to a private hospital. Locals allege negligence by bus staff. 🚨 pic.twitter.com/IHTIX7OKKa
— Headline Karnataka (@hknewsonline) March 31, 2026
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm