ಬ್ರೇಕಿಂಗ್ ನ್ಯೂಸ್
07-04-26 01:22 pm HK News Staffer ಕರಾವಳಿ
ಮಂಗಳೂರು, , ಏ.7: ಬೆಸೆಂಟ್ ಸಂಧ್ಯಾ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ 11ನೇ ವರ್ಷದ “ಬೆಸೆಂಟ್ ಪ್ರೀಮಿಯರ್ ಲೀಗ್” ಕ್ರೀಡಾಕೂಟವು ಮಂಗಳೂರಿನ ಪದುವಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಉಪಸ್ಥಿತರಿದ್ದರು. ರಾಷ್ಟ್ರೀಯ ಮಹಿಳಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಮಣೇಲ್ ಅಣ್ಣಪ್ಪ ನಾಯಕ್ ಹಾಗೂ ಬೆಸಂಟ್ ನ್ಯಾಷನಲ್ ಪದವಿಪೂರ್ವ ಕಾಲೇಜಿನ ಸಂಚಾಲಕ ಸತೀಶ್ ಕುಮಾರ್ ಭಟ್ ಕಾರ್ಯಕ್ರಮ ಉದ್ಘಾಟಿಸಿದರು.
ಲೀಗ್ನಲ್ಲಿ ಆರು ತಂಡಗಳು ಭಾಗವಹಿಸಿದ್ದವು. ಸೆಮಿಫೈನಲ್ ಹಾಗೂ ಫೈನಲ್ ಹಂತಗಳಿಗೆ ಆಯ್ಕೆ ಮಾಡುವ ಉದ್ದೇಶದಿಂದ ಲೀಗ್ ಪಂದ್ಯಗಳನ್ನು ನಡೆಸಲಾಯಿತು. ಕ್ರೀಡಾಕೂಟದಲ್ಲಿ ಆಟಗಾರರು ಉತ್ತಮ ಪ್ರದರ್ಶನ ನೀಡಿ ಪ್ರೇಕ್ಷಕರ ಮನಗೆದ್ದರು.







ಅಂತಿಮವಾಗಿ ಲೋಹಿತ್ ಬಜಾಲ್ ಅವರ “ಆರೆಂಜ್ ಆರ್ಮಿ” ತಂಡ ಚಾಂಪಿಯನ್ ಪಟ್ಟವನ್ನು ಪಡೆದು ಟ್ರೋಫಿ ಹಾಗೂ ನಗದು ಬಹುಮಾನವನ್ನು ಮುಡಿಗೇರಿಸಿಕೊಂಡಿತು. ಜಿತೇಶ್ ದೇವಾಡಿಗ ಅವರ “ಬ್ಲೂ ಸ್ಟ್ರೈಕ್ಸ್” ತಂಡ ರನ್ನರ್-ಅಪ್ ಸ್ಥಾನವನ್ನು ಪಡೆದು ಟ್ರೋಫಿ ಮತ್ತು ನಗದು ಬಹುಮಾನವನ್ನು ತಮ್ಮದಾಗಿಸಿಕೊಂಡಿತು̤
ವೈಯಕ್ತಿಕ ಪ್ರಶಸ್ತಿಗಳ ವಿಭಾಗದಲ್ಲಿ, ಫೈನಲ್ ಪಂದ್ಯದಲ್ಲಿ ಪುಷ್ಪರಾಜ್ “ಮ್ಯಾನ್ ಆಫ್ ದಿ ಮ್ಯಾಚ್” ಪ್ರಶಸ್ತಿಯನ್ನು ಪಡೆದರು. ಸೀಸನ್ನ ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಬ್ಲೂ ಸ್ಟ್ರೈಕ್ಸ್ ತಂಡದ ರವಿಚಂದ್ರ ಅವರಿಗೆ ನೀಡಲಾಯಿತು. ಉತ್ತಮ ಬ್ಯಾಟ್ಸ್ಮನ್ ಪ್ರಶಸ್ತಿಯನ್ನು ವಿಕ್ಟರಿ ತಂಡದ ಮಧು ಪಡೆದರೆ, ಉತ್ತಮ ಬೌಲರ್ ಪ್ರಶಸ್ತಿಯನ್ನು ಆರೆಂಜ್ ಆರ್ಮಿ ತಂಡದ ನಚಿಕೇತಾ ಪಡೆದರು. ಸೀಸನ್ನ “ಮ್ಯಾನ್ ಆಫ್ ದಿ ಸೀರೀಸ್” ಪ್ರಶಸ್ತಿಯನ್ನು ಆರೆಂಜ್ ಆರ್ಮಿ ತಂಡದ ಪುನೀತ್ ತಮ್ಮದಾಗಿಸಿಕೊಂಡರು.



ಸಮಾರೋಪ ಸಮಾರಂಭದಲ್ಲಿ ಬೆಸೆಂಟ್ ಸಂಧ್ಯಾ ಕಾಲೇಜಿನ ಸಂಚಾಲಕರಾದ ಲಲಿತಾ ಜಿ. ಮಲ್ಲ್ಯ ಭಾಗಿಯಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಪರಶುರಾಮ್ ಜಿ. ಮಾಳಗೆ, ಹಳೆ ವಿದ್ಯಾರ್ಥಿ ಸಂಘದ ಸಲಹೆಗಾರರಾದ ಶ್ರೀವಿದ್ಯಾ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಆದಿತ್ಯ ಶೆಟ್ಟಿ, ಕಾರ್ಯದರ್ಶಿ ರಿತೇಶ್ ಎಂ. ಶೆಟ್ಟಿ, ಕ್ರೀಡಾ ಕಾರ್ಯದರ್ಶಿ ಪ್ರಣವ್ ಗಣೇಶ್, ಖಜಾಂಚಿ ನರೆಶ್ ಕಾಮತ್, ಜೊತೆಗೆ ಕಾರ್ಯದರ್ಶಿಗಳಾದ ನವ್ಯಾ, ಪ್ರದೀಪ್ ಕೆ., ಮೋಹಿತ್ ಶೆಟ್ಟಿ, ಶ್ರೇಯಸ್, ಅವಿನಾಶ್, ಶರಣ್ಯ ಹಾಗೂ ಪ್ರಸ್ತುತ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am