ಬ್ರೇಕಿಂಗ್ ನ್ಯೂಸ್
17-04-26 08:56 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 17 : ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ. ರೋಡ್‌ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿ ನಿರ್ವಹಣೆ, ಬಿ.ಸಿ. ರೋಡ್ ಜಂಕ್ಷನ್‌ನಿಂದ ಗಾಣದಪಡ್ಪು ಹೆದ್ದಾರಿಯನ್ನು ಚತುಷ್ಪಥವನ್ನಾಗಿ ಮೇಲ್ದರ್ಜೆಗೇರಿಸುವುದು ಸೇರಿದಂತೆ ವಿವಿಧ ಹೆದ್ದಾರಿ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಒಟ್ಟು 64 ಕೋಟಿ ರೂ. ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಕಾಮಗಾರಿ ಯೋಜನೆಗಳ ಬಗ್ಗೆ ಮಾಹಿತಿ ನೀಡಿರುವ ಸಂಸದರು, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಬಿ.ಸಿ.ರೋಡ್‌ನಿಂದ ಪುಂಜಾಲಕಟ್ಟೆ ವರೆಗಿನ ಸುಮಾರು 20 ಕಿಮೀ. ಹೆದ್ದಾರಿಯ ನಿರ್ವಹಣೆ ಕಾಮಗಾರಿಗಳಿಗಾಗಿ ಒಟ್ಟು 34.53 ಕೋಟಿ ರೂ.ಗಳ ಅನುದಾನವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಂಜೂರು ಮಾಡಿದೆ. ಜತೆಗೆ, ಬಿ.ಸಿ.ರೋಡ್ ಜಂಕ್ಷನ್‌ನಿಂದ ಬಂಟ್ವಾಳ ಕಡೆಗೆ ಹೋಗುವ ಹೆದ್ದಾರಿಯಲ್ಲಿ ಶ್ರೀ ನಾರಾಯಣಗುರು ಮಂದಿರದ ವರೆಗಿನ ರಸ್ತೆ ಸದ್ಯ ಅಗಲೀಕರಣಕ್ಕೆ ಬಾಕಿಯಿದೆ. ಈ ಭಾಗದ ಹೆದ್ದಾರಿಯನ್ನು ನಾಲ್ಕು ಪಥಗಳ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುವುದಕ್ಕೆ ಒಟ್ಟು 22.59 ಕೋಟಿ ರೂ.ಗಳ ಅನುದಾನ ದೊರೆತಿದೆ ಎಂದು ಕ್ಯಾ. ಚೌಟ ಹೇಳಿದ್ದಾರೆ.
ಹಾಗೆಯೇ, ಇದೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ. ರೋಡ್ ಜಂಕ್ಷನ್, ಚಾರ್ಮಾಡಿ ಘಾಟಿಯಲ್ಲಿ ರಸ್ತೆಗಳ ನಿರ್ವಹಣೆ ಕಾಮಗಾರಿಗಾಗಿ 6.92 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ. ಜಿಲ್ಲೆಯ ಈ ಪ್ರಮುಖ ಹೆದ್ದಾರಿಗಳ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡರೆ ನಮ್ಮ ಭಾಗದ ಸುಗಮ ಸಂಚಾರ ಹಾಗೂ ಆರ್ಥಿಕ ಪ್ರಗತಿಗೆ ಹೊಸ ವೇಗ ನೀಡಲಿದೆ ಎಂದು ಕ್ಯಾ. ಚೌಟ ಸಂತಸ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಕೆಲಸಗಳಿಗೆ ಹಾಗೂ ಕೆಲವು ಕಡೆ ಹೆದ್ದಾರಿ ಮೇಲ್ದರ್ಜೆಗೇರಿಸಲು ಕೇಂದ್ರ ಸರ್ಕಾರದಿಂದ ಅನುದಾನ ದೊರೆಯುತ್ತಿದ್ದು ಜಿಲ್ಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ. ಇದಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಕ್ಯಾ. ಚೌಟ ಹೇಳಿದ್ದಾರೆ.
ಉಜಿರೆ- ಧರ್ಮಸ್ಥಳ- ಪೆರಿಯಶಾಂತಿ ಕಾಮಗಾರಿ ಪ್ರಗತಿಯಲ್ಲಿ
ಉಜಿರೆ -ಧರ್ಮಸ್ಥಳ- ಪೆರಿಯಶಾಂತಿ ಹೆದ್ದಾರಿಯನ್ನು ಕೂಡ ಸುಮಾರು 613.665 ಕೋಟಿ ವೆಚ್ಚದಲ್ಲಿ ದ್ವಿಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿ ಭರದಿಂದ ಸಾಗುತ್ತಿದೆ. ಬಿ.ಸಿ ರೋಡ್‌ನಿಂದ ಪೂಂಜಾಲಕಟ್ಟೆ ವರೆಗಿನ ಹೆದ್ದಾರಿಯಲ್ಲಿ ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಬಿ.ಸಿ ರೋಡ್ ಜಂಕ್ಷನ್ ಬಳಿಯ ಚತುಷ್ಪಥ ರಸ್ತೆ ನಿರ್ಮಾಣ ಕಾಮಗಾರಿಗೂ ಚಾಲನೆ ದೊರೆಯಲಿದೆ. ಆ ಮೂಲಕ, ದಕ್ಷಿಣ ಕನ್ನಡ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ಸಂಪರ್ಕ ಜಾಲ ಮತ್ತಷ್ಟು ಉನ್ನತೀಕರಣಗೊಳ್ಳಲಿದೆ ಎಂದು ಸಂಸದ ಕ್ಯಾ. ಚೌಟ ತಿಳಿಸಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm