ಬ್ರೇಕಿಂಗ್ ನ್ಯೂಸ್
20-04-26 01:02 pm HK News Staffer ಕರಾವಳಿ
ಕಾರವಾರ , ಏಪ್ರಿಲ್ 20: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ ಸೈಲ್ 61ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಗೆದ್ದು ಮಹತ್ವದ ಸಾಧನೆ ಮಾಡಿದ್ದಾರೆ. ಏಪ್ರಿಲ್ 18ರಂದು ಒಡಿಶಾದ ಭುವನೇಶ್ವರದಲ್ಲಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಇಂಡಸ್ಟ್ರಿಯಲ್ ಟೆಕ್ನಾಲಜಿಯಲ್ಲಿ ನಡೆದ ಫಿನಾಲೆಯಲ್ಲಿ ಸಾಧ್ವಿ 29 ಸ್ಪರ್ಧಿಗಳನ್ನು ಹಿಂದಿಕ್ಕಿ ಗೆಲುವು ಸಾಧಿಸಿದ್ದಾರೆ. ಗೋವಾ ಪ್ರತಿನಿಧಿಸಿದ್ದ ಸಾಧ್ವಿ ಸೈಲ್ ಅವರಿಗೆ ಮಾಜಿ ವಿಜೇತೆ ನಿಕಿತಾ ಪೋರ್ವಾಲ್ ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಮಹಾರಾಷ್ಟ್ರದ ರಾಜನಂದಿನಿ ಮೊದಲ ರನ್ನರ್ ಅಪ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀತಿ ಅದ್ವೈತಾ ಎರಡನೇ ರನ್ನರ್ ಅಪ್ ಆಗಿದ್ದಾರೆ. ಕರ್ನಾಟಕದ ಖುಷಿ ರಮೇಶ್ ಟಾಪ್ 15ರಲ್ಲಿ ಸ್ಥಾನ ಪಡೆದಿದ್ದಾರೆ. ಗೆಲುವಿನ ಬಳಿಕ ಸಾಧ್ವಿ ತಂದೆ ಸತೀಶ್ ಸೈಲ್ ಅವರೊಂದಿಗೆ ವಿಡಿಯೋ ಕಾಲ್ ಮೂಲಕ ಸಂತೋಷ ಹಂಚಿಕೊಂಡಿದ್ದಾರೆ.
ಸಾಧ್ವಿ ತಮ್ಮ ಪ್ರತಿಕ್ರಿಯೆಯಲ್ಲಿ, “ಈ ಅವಕಾಶ ಸಿಕ್ಕಿದ್ದು ನನಗೆ ಅತ್ಯಂತ ಕೃತಜ್ಞತೆಯ ವಿಷಯ. ಇಲ್ಲಿ ಬಂದ ಪ್ರತಿಯೊಬ್ಬರೂ ವಿಜೇತರು. ಭಾರತವನ್ನು ಹೆಮ್ಮೆಪಡಿಸುವುದು ನನ್ನ ಗುರಿ” ಎಂದು ಹೇಳಿದ್ದಾರೆ. ಕೆನಡಾದ ಬ್ರಿಟಿಷ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಮತ್ತು ಅಂತರರಾಷ್ಟ್ರೀಯ ಸಂಬಂಧಗಳಲ್ಲಿ ಪದವಿ ಪಡೆದಿರುವ ಅವರು ಸ್ಪರ್ಧೆಗೆ ಮೊದಲು 10 ಕೆಜಿ ತೂಕ ಇಳಿಸಿಕೊಂಡಿದ್ದರು. ಛಾಯಾಗ್ರಹಣ, ಬ್ಯಾಡ್ಮಿಂಟನ್ ಮತ್ತು ಜೇನುಸಾಕಣೆ ಅವರ ಹವ್ಯಾಸಗಳಾಗಿವೆ.
ಇದೀಗ ಸಾಧ್ವಿ ಸೈಲ್ 2026ರ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ವಿಯಟ್ನಾಂನಲ್ಲಿ ನಡೆಯಲಿರುವ ಈ ಸ್ಪರ್ಧೆಯ ಫಿನಾಲೆ ಸೆಪ್ಟೆಂಬರ್ 5ರಂದು ನಡೆಯಲಿದೆ.
ಕಳೆದ ಆವೃತ್ತಿಯ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ನಿಕಿತಾ ಪೋರ್ವಾಲ್ ಅವರು 60ನೇ ಫೆಮಿನಾ ಮಿಸ್ ಇಂಡಿಯಾ ಕಿರೀಟ ಧರಿಸಿದ್ದರು. ಸದ್ಯ ಇವರು 2027ರ ಮಿಸ್ ವರ್ಲ್ಡ್ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿದ್ದು, ಭಾರತ ಪ್ರತಿನಿಧಿಸಲು ತಯಾರಾಗುತ್ತಿದ್ದಾರೆ.


61ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಅಂತಿಮ ಸುತ್ತಿಗೆ 3 ಸ್ಪರ್ಧಿಗಳು ತಲುಪಿದ್ದರು.ಅವರಲ್ಲಿ ಸಾದ್ವಿ ಸತೀಶ್ ಸೈಲ್ ವಿಜೇತರಾದರು. ಇವರು ಮಾಡೆಲ್ ಮಾತ್ರವಲ್ಲದೇ ಸಾಮಾಜಿಕ ಕಾರ್ಯಗಳಲ್ಲಿಯೂ ತೊಡಗಿಸಿಕೊಂಡಿದ್ದಾರೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಪ್ರತಿ ಯುವತಿಯಲ್ಲಿಯೂ ಒಂದು ಕನಸಿನ ಕಿರೀಟ ಅಡಗಿದೆ. ಅದನ್ನು ತಲುಪಲು ಧೈರ್ಯ, ಶ್ರಮ ಮತ್ತು ನಂಬಿಕೆ ಬೇಕು. ಅದಕ್ಕೆ ಈ ಸಾಧ್ವಿ ಸೈಲ್ ಸಾಧನೆ ಉತ್ತಮ ಉದಾಹರಣೆಯಾಗಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm