ಬ್ರೇಕಿಂಗ್ ನ್ಯೂಸ್
21-04-26 02:36 pm HK News Staffer ಕರಾವಳಿ
ಮಂಗಳೂರು, ಎಪ್ರಿಲ್ 21 : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್, ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರಗಳಿಗೆ ಸಂಬಂಧಿಸಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.
ಸೋಮವಾರ ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್ ಸ್ಪೋರ್ಟ್ಸ್ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಚರ್ಚಿಸಲಾಯಿತು.


ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತಾಗಿಯೂ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಕಾನ್ಸುಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.
ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ 'ವಿಕಸಿತ ಭಾರತ'ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am