ಬ್ರೇಕಿಂಗ್ ನ್ಯೂಸ್
28-04-26 01:26 pm HK News Staffer ಕರಾವಳಿ
ಬಂಟ್ವಾಳ, ಎಪ್ರಿಲ್ 28: ನೂತನ ಮನೆಯ ಗೃಹ ಪ್ರವೇಶದ ಔಣಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗಲೇ ಮನೆ ಯಜಮಾನ, ಯುವ ಮುಸ್ಲಿಂ ವಿದ್ವಾಂಸ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಾಡಿ-ಕೊಪ್ಪಳ ಎಂಬಲ್ಲಿ ಸೋಮವಾರ ನಡೆದಿದೆ.
ಸಜಿಪನಡು ನಿವಾಸಿ ಪುತ್ತನಾಕ ಎಂಬವರ ಪುತ್ರ ಅಮೀರ್ ಅರ್ಶದಿ(36) ಹಠಾತ್ ಹೃದಯಾಘಾತಕ್ಕೀಡಾಗಿ ಮೃತಪಟ್ಟವರು. ಅವರಿಗೆ ತಂದೆ-ತಾಯಿ, ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಮರ್ಹೂಂ ಶೈಖುನಾ ಮಿತ್ತಬೈಲು ಉಸ್ತಾದರ ಶಿಷ್ಯರಾಗಿದ್ದ ಇವರು ಕಾಸರಗೋಡು ತಾಳಿಪಡ್ಪು ಮಸ್ಟಿದುಲ್ ಹುದಾ ಮಸೀದಿಯಲ್ಲಿ ಐದು ವರ್ಷಗಳಿಂದ ಖತೀಬರಾಗಿ ಸೇವೆ ಸಲ್ಲಿಸುತ್ತಿದ್ದು, ಯುವ ಸಮೂಹದಲ್ಲಿ ಧಾರ್ಮಿಕ ಪ್ರಜ್ಞೆ ಮೂಡಿಸುವ ಕಾರ್ಯ ನಡೆಸಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇತ್ತೀಚೆಗಷ್ಟೆ ಕಿಡ್ನಿ ಸಂಬಂಧಿ ಕಾಯಿಲೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಭಾನುವಾರ ಮಧ್ಯರಾತ್ರಿ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ಬಿ.ಸಿ.ರೋಡ್ ಪರ್ಲಿಯಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಅಲ್ಲಿನ ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸಜಿಪಮುನ್ನೂರು ಗ್ರಾಮದ ಆಲಂಪಾಡಿ-ಕೊಪ್ಪಳ ಎಂಬಲ್ಲಿ ನೂತನ ಮನೆ ನಿರ್ಮಿಸಿದ್ದು, ಏ.17ರಂದು ಔಪಚಾರಿಕ ಗೃಹ ಪ್ರವೇಶ ಪ್ರಕ್ರಿಯೆ ನಡೆಸಿದ್ದರು. ಏ.27 ರಂದು ಮಧ್ಯಾಹ್ನ ಬಂಧು-ಮಿತ್ರರಿಗೆ ಔತಣಕೂಟ ಏರ್ಪಡಿಸಿದ್ದರು. ಈ ಔತಣಕೂಟಕ್ಕಾಗಿ ಭಾನುವಾರ ರಾತ್ರಿ ವರೆಗೂ ಬಂಧು-ಮಿತ್ರರಿಗೆ ಕರೆ ಮಾಡಿ ಆಹ್ವಾನಿಸಿದ್ದರು ಎಂದು ಆಹ್ವಾನ ಕರೆ ಸ್ವೀಕರಿಸಿದ ಬಂಧು-ಮಿತ್ರರು ತಿಳಿಸಿದ್ದಾರೆ. ಅಮೀರ್ ಅರ್ಶದಿ ಅವರ ಹಠಾತ್, ಅಕಾಲಿಕ ನಿಧನಕ್ಕೆ ಬಂಧು ಮಿತ್ರರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
In a tragic turn of events, a young Muslim scholar from Bantwal passed away suddenly on the very day of his new housewarming feast. The deceased, known in the community for his knowledge and humility, had organized the gathering to celebrate moving into his new home.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am