ಬ್ರೇಕಿಂಗ್ ನ್ಯೂಸ್
08-05-26 09:05 pm HK News Staffer ಕರಾವಳಿ
ಮಂಗಳೂರು, ಮೇ 08: ದಶಕಗಳ ಕನಸಾಗಿದ್ದ ಮಂಗಳೂರು-ತಣ್ಣೀರುಬಾವಿ ಸೇತುವೆ ಕಾಮಗಾರಿ ಇದೀಗ ಅಂತಿಮ ಹಂತ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಲ್ಲಿ ಸಾರ್ವಜನಿಕ ಬಳಕೆಗೆ ಲೋಕಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಈ ಸೇತುವೆ ನಿರ್ಮಾಣದಿಂದ ತಣ್ಣೀರುಬಾವಿ ಭಾಗದ ಜನರ ಸಂಚಾರ ಸಮಸ್ಯೆಗೆ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ.
ದಶಕಗಳ ಬೇಡಿಕೆಗೆ ಸಾಕಾರ;
ತಣ್ಣೀರುಬಾವಿ ಬೀಚ್ ಮಂಗಳೂರು ನಗರದ ಸಮೀಪದಲ್ಲೇ ಇದ್ದರೂ, ರಸ್ತೆ ಮಾರ್ಗದಲ್ಲಿ ತೆರಳಬೇಕಾದರೆ ಸುಮಾರು 15 ರಿಂದ 20 ಕಿಲೋಮೀಟರ್ ಸುತ್ತುವ ಪರಿಸ್ಥಿತಿ ಇತ್ತು. ಫೆರಿಯಲ್ಲಿ ಕೆಲವೇ ನಿಮಿಷಗಳಲ್ಲಿ ತಲುಪಬಹುದಾದ ಈ ಭಾಗಕ್ಕೆ ನೇರ ರಸ್ತೆ ಸಂಪರ್ಕದ ಕೊರತೆ ವರ್ಷಗಳಿಂದ ಜನರ ಸಮಸ್ಯೆಯಾಗಿತ್ತು.
ತಣ್ಣೀರುಬಾವಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುಮಾರು 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, ಮಂಗಳೂರಿಗೆ ಸಂಪರ್ಕ ಸಾಧಿಸಲು ಫೆರಿಯನ್ನೇ ಅವಲಂಬಿಸಬೇಕಾಗುತ್ತಿತ್ತು. ತುರ್ತು ವೈದ್ಯಕೀಯ ಸೇವೆ ಸೇರಿದಂತೆ ಹಲವು ಸಂದರ್ಭಗಳಲ್ಲಿ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದರು.
ಪ್ರಯಾಣದ ಸಮಯ 35 ನಿಮಿಷದಿಂದ 10 ನಿಮಿಷಕ್ಕೆ;
ಫಲ್ಗುಣಿ ನದಿಗೆ ಅಡ್ಡಲಾಗಿ ನಿರ್ಮಾಣವಾಗುತ್ತಿರುವ ಈ ಸೇತುವೆ ಒಟ್ಟು 285 ಮೀಟರ್ ಉದ್ದವಿದ್ದು, ಸುಮಾರು 64 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಇದರಲ್ಲೂ 100 ಮೀಟರ್ ಉದ್ದದ ಬೋ-ಸ್ಟ್ರಿಂಗ್ ವಿನ್ಯಾಸದ ಸೇತುವೆ ಪ್ರಮುಖ ಆಕರ್ಷಣೆಯಾಗಿದೆ. ಸೇತುವೆ ಪೂರ್ಣಗೊಂಡ ಬಳಿಕ ಪ್ರಸ್ತುತ 30 ರಿಂದ 35 ನಿಮಿಷ ಬೇಕಾಗುವ ಪ್ರಯಾಣ ಕೇವಲ 8 ರಿಂದ 10 ನಿಮಿಷಕ್ಕೆ ಇಳಿಯಲಿದೆ.
ಎಲ್ಲಾ ವಾಹನಗಳಿಗೆ ಸಂಚಾರ ಸೌಲಭ್ಯ ;
ಈ ಸೇತುವೆ ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ, ವ್ಯಾಪಾರ ಮತ್ತು ಸ್ಥಳೀಯ ಸಂಚಾರಕ್ಕೆ ಇದು ಹೊಸ ಚೈತನ್ಯ ನೀಡಲಿದೆ ಎನ್ನಲಾಗುತ್ತಿದೆ.
ಮಳೆಗಾಲದ ನಡುವೆ ಕಾಮಗಾರಿ ಸವಾಲು;
ಸದ್ಯ ಕಾಮಗಾರಿ ವೇಗವಾಗಿ ಸಾಗುತ್ತಿದ್ದರೂ, ಮಳೆಗಾಲ ಆರಂಭವಾಗುತ್ತಿರುವ ಹಿನ್ನೆಲೆ ಉಳಿದ ಕೆಲಸಗಳು ಎಷ್ಟು ವೇಗವಾಗಿ ಪೂರ್ಣಗೊಳ್ಳುತ್ತವೆ ಎನ್ನುವ ಕುತೂಹಲ ಹೆಚ್ಚಾಗಿದೆ. ಸಚಿವ ದಿನೇಶ್ ಗುಂಡೂರಾವ್ ಈಗಾಗಲೇ ಲೋಕಾರ್ಪಣೆ ವೇಳಾಪಟ್ಟಿ ಘೋಷಿಸಿರುವುದರಿಂದ, ಗುತ್ತಿಗೆದಾರರು ಮತ್ತು ಅಧಿಕಾರಿಗಳು ಗಡುವಿನೊಳಗೆ ಕಾಮಗಾರಿ ಪೂರ್ಣಗೊಳಿಸಬೇಕಾದ ಒತ್ತಡದಲ್ಲಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm