ಬ್ರೇಕಿಂಗ್ ನ್ಯೂಸ್
08-05-26 10:33 pm HK News Staffer ಕರಾವಳಿ
ಉಳ್ಳಾಲ, ಮೇ 8: ನಿಟ್ಟೆ ಪರಿಗಣಿತ ವಿವಿ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ಕುತ್ತಾರ್ ಜಂಕ್ಷನ್ನಲ್ಲಿ ವೃತ್ತವೊಂದನ್ನ ನಿರ್ಮಿಸಲು ರೂಪುರೇಷೆ ಸಿದ್ಧಗೊಂಡಿದ್ದು, ಇದೇ ವೇಳೆ ಅಲ್ಲಿ ಕೊರಗಜ್ಜನ ಹೆಸರಲ್ಲಿ ವೃತ್ತ ನಿರ್ಮಿಸಬಾರದೆಂದು ಅಲ್ಪಸಂಖ್ಯಾತ ಸಮುದಾಯದ ಗುಂಪೊಂದು ಸ್ಪೀಕರ್ ಖಾದರ್ ಅವರನ್ನ ತಡೆದು ಘೇರಾವ್ ಮಾಡಿ ತರಾಟೆಗೈದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಳ್ಳಾಲ ಮಾಸ್ತಿಕಟ್ಟೆಯ ರೆಸಾರ್ಟ್ ಒಂದರಲ್ಲಿ ಗುರುವಾರ ರಾತ್ರಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮುಸ್ಲಿಮರ ಗುಂಪೊಂದು ಸ್ಪೀಕರ್ ಖಾದರ್ ಅವರನ್ನು ಪ್ರಶ್ನೆ ಮಾಡಿ ಕುತ್ತಾರು ಜಂಕ್ಷನ್ ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣ ಮಾಡದಂತೆ ತಗಾದೆ ಎತ್ತಿದ್ದಾರೆ. ಈ ವೇಳೆ, ಮಾತಿಗೆ ಮಾತು ಬೆಳೆದಿದ್ದು ಇದರ ಸಣ್ಣ ವೀಡಿಯೋವನ್ನು ಅಲ್ಲಿದ್ದವರೇ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.
ಕುತ್ತಾರು ಕೊರಗಜ್ಜನ ಆದಿಕ್ಷೇತ್ರಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಬರುವ ಭಕ್ತಾಧಿಗಳಿಗೆ ಮಾಹಿತಿ ನೀಡುವುದಕ್ಕಾಗಿ ವರ್ಷಗಳ ಹಿಂದೆ ಕುತ್ತಾರು ಜಂಕ್ಷನ್ ನಲ್ಲಿ ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕೊರಗಜ್ಜನ ಮುಟ್ಟಾಳೆಯ ಪ್ರತಿಕೃತಿಯುಳ್ಳ ಸಣ್ಣ ವೃತ್ತವೊಂದನ್ನ ನಿರ್ಮಿಸಿದ್ದರು. ಈಗಲೂ ಆ ವೃತ್ತವು ಕುತ್ತಾರು ಜಂಕ್ಷನ್ ನಲ್ಲಿದೆ. ಇದೀಗ ನಿಟ್ಟೆ ವಿವಿಯ ವತಿಯಿಂದ ಕುತ್ತಾರು ಜಂಕ್ಷನ್ ನಲ್ಲಿ ನೂತನ ವೃತ್ತವನ್ನ ನಿರ್ಮಿಸಲು ಮುಂದಾಗಿದ್ದಾರೆ. ವೃತ್ತದಲ್ಲಿ ಕೊರಗಜ್ಜನ ಆದಿ ಕ್ಷೇತ್ರದ ಮಾಹಿತಿ ಮತ್ತು ಕೊರಗಜ್ಜನ ಮುಟ್ಟಾಳೆ ಸೇರಿ ಇತರ ಧರ್ಮೀಯರ ಕ್ಷೇತ್ರದ ಬಗ್ಗೆಯೂ ಮಾಹಿತಿಯನ್ನು ನೀಡುವ ಸಿದ್ಧತೆ ನಡೆದಿದೆ.
ಆದರೆ ಈ ವಿಚಾರ ತಿಳಿಯದ ಮುಸ್ಲಿಂ ಗುಂಪು ಸ್ಥಳೀಯ ಶಾಸಕ ಹಾಗೂ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಅವರನ್ನು ಪ್ರಶ್ನಿಸಿ ಘೇರಾವ್ ಹಾಕಿದ್ದು ಅದರ ವೀಡಿಯೋವನ್ನು ಜಾಲತಾಣಗಳಲ್ಲಿ ಹರಿಬಿಡಲಾಗಿದೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm