ಬ್ರೇಕಿಂಗ್ ನ್ಯೂಸ್
13-05-26 04:04 pm HK News Staffer ಕರಾವಳಿ
ಮಂಗಳೂರು, ಮೇ 12 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಒಂದರಲ್ಲೇ ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಸುಮಾರು ₹22 ಕೋಟಿ ಹಣ ಜಮೆಯಾಗಿರುವ ಶಾಕಿಂಗ್ ಮಾಹಿತಿ ಬೆಳಕಿಗೆ ಬಂದಿದೆ. ಯೋಜನೆಯ ಹಣ ಸರಿಯಾಗಿ ಜಮೆಯಾಗುತ್ತಿಲ್ಲ ಎಂದು ಸಾರ್ವಜನಿಕರು ಆರೋಪಿಸುತ್ತಿರುವ ನಡುವೆಯೇ ಈ ಬೆಳವಣಿಗೆ ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಮುಜುಗರಕ್ಕೀಡು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪರಿಶೀಲನಾ ಸಮಿತಿ ಸಭೆಯಲ್ಲಿ ಈ ವಿಷಯ ಬಹಿರಂಗವಾಗಿದ್ದು, ಸಭೆಯ ಅಧ್ಯಕ್ಷ ಭರತ್ ಮುಂಡೋಡಿ ತಕ್ಷಣ ಈ ಹಣವನ್ನು ಮರು ಪಾವತಿ ಮಾಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ರಾಜ್ಯ ಕಚೇರಿಯಿಂದ ಬಂದ ಮಾಹಿತಿ ಪ್ರಕಾರ, ಬಳಕೆಯಲ್ಲಿಲ್ಲದ ಹಾಗೂ ಮೃತ ಫಲಾನುಭವಿಗಳ ಖಾತೆಗಳಿಗೆ ಸಹ ಹಣ ವರ್ಗಾವಣೆ ಮುಂದುವರಿದಿರುವುದು ಆತಂಕಕಾರಿ ಸಂಗತಿ ಎಂದು ಅವರು ಹೇಳಿದ್ದಾರೆ.
ಮೃತ ಫಲಾನುಭವಿಗಳ ಖಾತೆಗಳಿಗೆ ಜಮೆಯಾದ ಹಣವನ್ನು ಸರ್ಕಾರಕ್ಕೆ ಮರಳಿ ಪಡೆಯಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೊತೆಗೆ ಮೃತಪಟ್ಟವರ ವಿವರಗಳನ್ನು ಸಂಗ್ರಹಿಸಿ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸುವ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ನೀಡಲಾಗಿದೆ.
ಇದರ ಮಧ್ಯೆ ಮತ್ತೊಂದು ಗಂಭೀರ ಅಂಶವೂ ಸಭೆಯಲ್ಲಿ ಬೆಳಕಿಗೆ ಬಂದಿದೆ. ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ಮೃತಪಟ್ಟವರು ಎಂದು ಗುರುತಿಸಿರುವ ವ್ಯತ್ಯಾಸಗಳೂ ಪತ್ತೆಯಾಗಿದ್ದು, ಇದು ದಾಖಲೆ ನಿರ್ವಹಣೆಯ ಗಂಭೀರ ಲೋಪವನ್ನು ಬಯಲಿಗೆಳೆದಿದೆ. ಈ ಕುರಿತು ಸಮಗ್ರ ತನಿಖೆ ನಡೆಸಿ ಮುಂದಿನ ಸಭೆಯಲ್ಲಿ ವಿವರವಾದ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಹಿತಿ ಪ್ರಕಾರ, ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 4,25,759 ರೇಷನ್ ಕಾರ್ಡ್ ಹೊಂದಿದವರಿದ್ದು, ಇವರಲ್ಲಿ 3,82,178 ಮಂದಿ ಯೋಜನೆಗೆ ನೋಂದಾಯಿತರಾಗಿದ್ದಾರೆ. ಮೃತ ಫಲಾನುಭವಿಗಳ ಹೆಸರು, ಬ್ಯಾಂಕ್ ಖಾತೆ ವಿವರ ಹಾಗೂ ಮರಣ ದಾಖಲೆಗಳ ಆಧಾರದಲ್ಲಿ ಬ್ಯಾಂಕ್ಗಳ ಮೂಲಕ ಖಾತೆಗಳನ್ನು ಸ್ಥಗಿತಗೊಳಿಸಿ ಮುಂದಿನ ಹಣ ವರ್ಗಾವಣೆ ತಡೆಯಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರತ್ ಮುಂಡೋಡಿ ತಿಳಿಸಿದ್ದಾರೆ. ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಗಳಲ್ಲಿರುವ ಮರಣ ದಾಖಲೆಗಳನ್ನೂ ಪರಿಶೀಲಿಸಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಲು ಸೂಚಿಸಲಾಗಿದೆ.
ಸರ್ಕಾರದ ಜನಪರ ಯೋಜನೆಗಳು ನಿಜವಾದ ಅರ್ಹರಿಗೆ ತಲುಪಬೇಕಾದರೆ ದಾಖಲೆಗಳ ಸಮರ್ಪಕ ನಿರ್ವಹಣೆ ಹಾಗೂ ನಿರಂತರ ಪರಿಶೀಲನೆ ಅತ್ಯಗತ್ಯ. ಮೃತರ ಖಾತೆಗಳಿಗೆ ಹಣ ಜಮೆಯಾಗುವುದು ಆಡಳಿತಾತ್ಮಕ ಲೋಪವಷ್ಟೇ ಅಲ್ಲ, ಸಾರ್ವಜನಿಕ ಹಣದ ದುರುಪಯೋಗ. ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಅಪ್ಡೇಟ್ ಮಾಡುವ ವ್ಯವಸ್ಥೆ ಆಗಬೇಕೆಂಬ ಅಗತ್ಯವನ್ನು ಈ ಘಟನೆ ಮತ್ತೊಮ್ಮೆ ನೆನಪಿಸಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am